ಆರೋಗ್ಯ ಸಚಿವ ಶ್ರೀರಾಮುಲು ಅವರ ತಾಯಿಗೂ ಕೊರೊನಾ ಸೋಂಕು, ಆಸ್ಪತ್ರೆಗೆ ದಾಖಲು
ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಕೊರೊನಾ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ಆರೋಗ್ಯ ಸಚಿವ ಶ್ರೀರಾಮುಲು ಚಿಕಿತ್ಸೆ ಪಡೆಯುತ್ತಿರುವಾಗಲೇ, ಅವರ ತಾಯಿ ಮತ್ತು ಅಣ್ಣನಿಗೆ ಈಗ ಕೊರೊನಾ ಸೋಂಕು ತಗುಲಿದೆ. ಹೀಗಾಗಿ ಸಚಿವ ಶ್ರೀರಾಮುಲು ಅವರ 80 ವರ್ಷದ ತಾಯಿ ಮತ್ತು ಅಣ್ಣನನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಮೊದಲೇ ಶ್ರೀರಾಮುಲು ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಈಗ ಅವರ ಕುಟುಂಬ ಸದಸ್ಯರು ಕೂಡಾ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಕೊರೊನಾ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ಆರೋಗ್ಯ ಸಚಿವ ಶ್ರೀರಾಮುಲು ಚಿಕಿತ್ಸೆ ಪಡೆಯುತ್ತಿರುವಾಗಲೇ, ಅವರ ತಾಯಿ ಮತ್ತು ಅಣ್ಣನಿಗೆ ಈಗ ಕೊರೊನಾ ಸೋಂಕು ತಗುಲಿದೆ.
ಹೀಗಾಗಿ ಸಚಿವ ಶ್ರೀರಾಮುಲು ಅವರ 80 ವರ್ಷದ ತಾಯಿ ಮತ್ತು ಅಣ್ಣನನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಮೊದಲೇ ಶ್ರೀರಾಮುಲು ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಈಗ ಅವರ ಕುಟುಂಬ ಸದಸ್ಯರು ಕೂಡಾ ಆಸ್ಪತ್ರೆಗೆ ದಾಖಲಾಗಿದ್ದಾರೆ.