ಆರೋಗ್ಯ ಸಚಿವ ಬಿ. ಶ್ರೀರಾಮುಲುಗೆ ಕೊರೊನಾ ಸೋಂಕು, ಬೌರಿಂಗ್ ಆಸ್ಪತ್ರೆಗೆ ದಾಖಲು
ಬೆಂಗಳೂರು: ಆರೋಗ್ಯ ಸಚಿವ ಬಿ ಶ್ರೀರಾಮುಲು ಅವರಿಗೆ ಕೊರೊನಾ ಸೋಂಕು ತಗುಲಿದೆ. ಪರಿಣಾಮ ಶ್ರೀರಾಮುಲು ಚಿಕಿತ್ಸೆಗಾಗಿ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಈಗಾಗಲೇ ಕೊರೊನಾ ಸೋಂಕಿನಿಂದಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮತ್ತೊಂದೆಡೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೂಡಾ ಕೊರೊನಾ ಸೋಂಕಿತರಾಗಿದ್ದು, ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡಿಯುತ್ತಿದ್ದಾರೆ. ಈಗ ಆರೋಗ್ಯ ಸಚಿವರಿಗೆ ಕೊರೊನಾ ಸೋಂಕು ತಗುಲಿದೆ. ಕೊರೊನ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ, ಬೆಂಗಳೂರಿನ ಶಿವಾಜಿನಗರದಲ್ಲಿರುವ ಸರ್ಕಾರಿ ಸ್ವಾಮ್ಯದ ಬೋರಿಂಗ್ ಆಸ್ಪತ್ರೆಗೆ […]

ಬೆಂಗಳೂರು: ಆರೋಗ್ಯ ಸಚಿವ ಬಿ ಶ್ರೀರಾಮುಲು ಅವರಿಗೆ ಕೊರೊನಾ ಸೋಂಕು ತಗುಲಿದೆ. ಪರಿಣಾಮ ಶ್ರೀರಾಮುಲು ಚಿಕಿತ್ಸೆಗಾಗಿ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಈಗಾಗಲೇ ಕೊರೊನಾ ಸೋಂಕಿನಿಂದಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮತ್ತೊಂದೆಡೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೂಡಾ ಕೊರೊನಾ ಸೋಂಕಿತರಾಗಿದ್ದು, ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡಿಯುತ್ತಿದ್ದಾರೆ. ಈಗ ಆರೋಗ್ಯ ಸಚಿವರಿಗೆ ಕೊರೊನಾ ಸೋಂಕು ತಗುಲಿದೆ.
ಕೊರೊನ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ, ಬೆಂಗಳೂರಿನ ಶಿವಾಜಿನಗರದಲ್ಲಿರುವ ಸರ್ಕಾರಿ ಸ್ವಾಮ್ಯದ ಬೋರಿಂಗ್ ಆಸ್ಪತ್ರೆಗೆ ದಾಖಲಾಗಿದ್ದೇನೆ.
ಶೀಘ್ರ ಗುಣಮುಖನಾಗಿ ಬರುವ ವಿಶ್ವಾಸವಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ. pic.twitter.com/cGnYuPbZ15
— B Sriramulu (@sriramulubjp) August 9, 2020
Published On - 6:26 pm, Sun, 9 August 20