ಸೋಂಕಿತರ ಅಂತ್ಯಕ್ರಿಯೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ!

ಬೆಂಗಳೂರು: ನಗರದಲ್ಲಿ ಕೊರೊನಾಗೆ ಜನ ಹೆಚ್ಚು ಬಲಿಯಾಗುತ್ತಿದ್ದಾರೆ. ಆದರೆ ಕೊರೊನಾಗೆ ಬಲಿಯಾದವರ ಅಂತ್ಯಕ್ರಿಯೆ ವೇಳೆ ನಿರ್ಲಕ್ಷ್ಯವಹಿಸಲಾಗಿದೆ. ಸೋಂಕಿತ ಮೃತರ ಅಂತ್ಯಕ್ರಿಯೆ ವೇಳೆ ಅಧಿಕಾರಿಗಳು ಸ್ಥಳಕ್ಕೆ ತೆರಳುತ್ತಿಲ್ಲ. ಯಾವುದೇ ರೀತಿಯ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿಲ್ಲ. ಇದರಿಂದ ಸೋಂಕು ಮತ್ತಷ್ಟು ಹರಡುವ ಭೀತಿ ಶುರುವಾಗಿದೆ. ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿ ಬಲಿಯಾದರೆ ಶವ ಹಸ್ತಾಂತರ ಮಾಡುವಾಗ ಅಧಿಕಾರಿಗಳು ಸ್ಥಳದಲ್ಲಿರಬೇಕು. ಬಳಿಕ ಅಂತ್ಯಕ್ರಿಯೆ ಸ್ಥಳಕ್ಕೂ ಅಧಿಕಾರಿಗಳು ಹೋಗಬೇಕು. ಅಂತ್ಯಕ್ರಿಯೆ ಮುಗಿದ ಬಳಿಕ ಅಧಿಕಾರಿಗಳು ವಾಪಸಾಗಬೇಕು. ಆದರೆ ಯಾವ ಅಧಿಕಾರಿಯೂ ಸ್ಥಳಕ್ಕೆ ಹೋಗುತ್ತಿಲ್ಲ. […]

ಸೋಂಕಿತರ ಅಂತ್ಯಕ್ರಿಯೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ!
ಸಂಗ್ರಹ ಚಿತ್ರ
ಆಯೇಷಾ ಬಾನು Edited By: ಸಾಧು ಶ್ರೀನಾಥ್​

Updated on: Jul 20, 2020 | 12:34 PM

ಬೆಂಗಳೂರು: ನಗರದಲ್ಲಿ ಕೊರೊನಾಗೆ ಜನ ಹೆಚ್ಚು ಬಲಿಯಾಗುತ್ತಿದ್ದಾರೆ. ಆದರೆ ಕೊರೊನಾಗೆ ಬಲಿಯಾದವರ ಅಂತ್ಯಕ್ರಿಯೆ ವೇಳೆ ನಿರ್ಲಕ್ಷ್ಯವಹಿಸಲಾಗಿದೆ. ಸೋಂಕಿತ ಮೃತರ ಅಂತ್ಯಕ್ರಿಯೆ ವೇಳೆ ಅಧಿಕಾರಿಗಳು ಸ್ಥಳಕ್ಕೆ ತೆರಳುತ್ತಿಲ್ಲ. ಯಾವುದೇ ರೀತಿಯ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿಲ್ಲ. ಇದರಿಂದ ಸೋಂಕು ಮತ್ತಷ್ಟು ಹರಡುವ ಭೀತಿ ಶುರುವಾಗಿದೆ.

ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿ ಬಲಿಯಾದರೆ ಶವ ಹಸ್ತಾಂತರ ಮಾಡುವಾಗ ಅಧಿಕಾರಿಗಳು ಸ್ಥಳದಲ್ಲಿರಬೇಕು. ಬಳಿಕ ಅಂತ್ಯಕ್ರಿಯೆ ಸ್ಥಳಕ್ಕೂ ಅಧಿಕಾರಿಗಳು ಹೋಗಬೇಕು. ಅಂತ್ಯಕ್ರಿಯೆ ಮುಗಿದ ಬಳಿಕ ಅಧಿಕಾರಿಗಳು ವಾಪಸಾಗಬೇಕು. ಆದರೆ ಯಾವ ಅಧಿಕಾರಿಯೂ ಸ್ಥಳಕ್ಕೆ ಹೋಗುತ್ತಿಲ್ಲ.

ಸರ್ಕಾರದ ಆದೇಶದಂತೆ ಅಂತ್ಯಸಂಸ್ಕಾರ ಮಾಡುತ್ತಿಲ್ಲ? ವೈದ್ಯರು ಮೃತದೇಹವನ್ನ ಆ್ಯಂಬುಲೆನ್ಸ್‌ನಲ್ಲಿ ಕಳಿಸುತ್ತಿದ್ದಾರೆ. ಆ್ಯಂಬುಲೆನ್ಸ್‌ಗಳ ಚಾಲಕರಿಂದಲೇ ಮೃತರ ಅಂತ್ಯಕ್ರಿಯೆ ಮಾಡಲಾಗುತ್ತಿದೆ. ಮೃತನ ಅಂತ್ಯಕ್ರಿಯೆ ಬಗ್ಗೆಯೂ ಮಾಹಿತಿ ಪಡೆಯುತ್ತಿಲ್ಲ. ಕೊರೊನಾಗೆ ಬಲಿಯಾದವರ ಅಂತ್ಯಕ್ರಿಯೆ ಬಗ್ಗೆ ನಿರ್ಲಕ್ಷ್ಯವಹಿಸಲಾಗುತ್ತಿದೆ.

ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Loading...
Unable to load recommendations.
Follow Us