AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಅಲೆ ಹೆಚ್ಚಿದ್ದರೂ ಏರ್​​ಪೋರ್ಟ್​​​ನಲ್ಲಿ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIA) ನಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ನಿರ್ಲಕ್ಷ್ಯಎದ್ದು ಕಾಣುತ್ತಿದೆ. ಕೇರಳ ಮತ್ತು ಮಹಾರಾಷ್ಟ್ರದಿಂದ ಬಂದ ಪ್ರಯಾಣಿಕರಿಗೆ ಆರ್‌ಟಿಪಿಸಿಆರ್ ಟೆಸ್ಟ್ ಮಾಡುತ್ತಿದ್ದಾರೆ. ಆದ್ರೆ ಟೆಸ್ಟ್ ರಿಪೋರ್ಟ್ ಬರುವುದಕ್ಕೂ ಮುನ್ನವೇ ಅವರನ್ನು ಕಳಿಸಲಾಗುತ್ತಿದೆ.

ಕೊರೊನಾ ಅಲೆ ಹೆಚ್ಚಿದ್ದರೂ ಏರ್​​ಪೋರ್ಟ್​​​ನಲ್ಲಿ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ
ಕೆಂಪೇಗೌಡ ವಿಮಾನ ನಿಲ್ದಾಣ
ಆಯೇಷಾ ಬಾನು
ಆಯೇಷಾ ಬಾನು|

Updated on: Mar 02, 2021 | 10:56 AM

Share

ದೇವನಹಳ್ಳಿ: ಮಹಾಮಾರಿ ಕೊರೊನಾ ಮತ್ತೆ ತನ್ನ ಆರ್ಭಟ ಶುರು ಮಾಡಿದೆ. ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕೊರೊನಾ ಎರಡನೆ ಅಲೆ ಹಿನ್ನೆಲೆಯಲ್ಲಿ ಎರಡೂ ರಾಜ್ಯಗಳಿಂದ ಬಂದವರಿಗೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIA) ನಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಕೇರಳ ಮತ್ತು ಮಹಾರಾಷ್ಟ್ರದಿಂದ ಬಂದ ಪ್ರಯಾಣಿಕರಿಗೆ ಆರ್‌ಟಿಪಿಸಿಆರ್ ಟೆಸ್ಟ್ ಮಾಡುತ್ತಿದ್ದಾರೆ. ಆದ್ರೆ ಟೆಸ್ಟ್ ರಿಪೋರ್ಟ್ ಬರುವುದಕ್ಕೂ ಮುನ್ನವೇ ಅವರನ್ನು ಕಳಿಸಲಾಗುತ್ತಿದೆ.

ಹೆಸರಿಗಷ್ಟೆ ಸೀಮಿತವಾಯ್ತ ಕೊರೊನಾ ಟೆಸ್ಟಿಂಗ್? ಕೇರಳ ಮತ್ತು ಮಹಾರಾಷ್ಟ್ರದಿಂದ ನೆಗೆಟಿವ್ ರಿಪೋರ್ಟ್ ಇಲ್ಲದೆ ಬಂದವರಿಗೆ ಏರ್​​ಪೋರ್ಟ್​​​ನಲ್ಲಿ ಆರ್‌ಟಿಪಿಸಿಆರ್ ಟೆಸ್ಟ್ ಮಾಡಲಾಗುತ್ತಿದೆ. ಆದ್ರೆ ಟೆಸ್ಟ್ ಮಾಡಿದ ನಂತರ ರಿಪೋರ್ಟ್ ಬರುವುದಕ್ಕೂ ಮುನ್ನವೇ ಮನೆಗೆ ಕಳಿಸಲಾಗುತ್ತಿದೆ. ವ್ಯಕ್ತಿಯ ವಿಳಾಸ ಫೋನ್ ನಂಬರ್ ಪಡೆದು ಏರ್​​ಪೋರ್ಟ್​ನಿಂದ ಖಾಸಗಿ ಅಥವಾ ಟ್ಯಾಕ್ಸಿಗಳಲ್ಲಿ ಮನೆಗೆ ವಾಪಸ್ ಕಳಿಸಲಾಗುತ್ತಿದೆ. ಆದ್ರೆ ಟೆಸ್ಟ್ ಮಾಡಿಸಿದ ವ್ಯಕ್ತಿಗೆ ಯಾವುದೇ ಸೀಲ್ ಹಾಕುತ್ತಿಲ್ಲ.

ಆ ವ್ಯಕ್ತಿ ಏನಾದರೂ ಕ್ವಾರಂಟೈನ್ ಆಗದೇ ಓಡಾಡ್ತಾ ಇದ್ದು ಅವರ ಟೆಸ್ಟ್ ರಿಪೋರ್ಟ್ ಪಾಸಿಟಿವ್ ಬಂದ್ರೆ ಕೊರೊನಾ ಹರಡುವ ಭೀತಿ ಹೆಚ್ಚಿದೆ. ಕೇವಲ ಹೆಸರಿಗಷ್ಟೆ ಏರ್ಪೋಟ್​ನಲ್ಲಿ ಟೆಸ್ಟಿಂಗ್ ಮಾಡ್ತಿದ್ದಾರಾ ಅನ್ನೂ ಅನುಮಾನ ವ್ಯಕ್ತವಾಗುತ್ತಿದೆ. ಪ್ರತಿನಿತ್ಯ ಕೇರಳ ಮತ್ತು ಮಹಾರಾಷ್ಟ್ರದಿಂದ ಬೆಂಗಳೂರಿಗೆ ನೂರಾರು ಜನ ಬರ್ತಿದ್ದಾರೆ. ಸ್ಬಲ್ಪ ಯಾಮಾರಿದ್ರು ರಾಜಧಾನಿಯಲ್ಲಿ ಕೊರೊನಾ ಎರಡನೆ ಅಲೆ ಹರಡಬಹುದು. ನಿನ್ನೆಯಷ್ಟೆ ಕೇಂದ್ರದ ಕೋವಿಡ್ ಟಾಸ್ಕ್ ಫೋರ್ಸ್ ತಂಡ ಬೆಂಗಳೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಆದ್ರು ಸಹ ಎಚ್ಚೆತ್ತುಕೊಳ್ಳದೆ ಆರೋಗ್ಯ ಇಲಾಖೆ ನಿರ್ಲಕ್ಷ್ಯ ಮುಂದುವರೆಸಿದೆ. ಇದೇನಾದ್ರೂ ಹೀಗೆ ಸಾಗಿದ್ರೆ ಖಂಡಿತವಾಗಿಯೂ ಈ ನಿರ್ಲಕ್ಷ್ಯ ದೊಡ್ಡ ಅನಾಹುತಕ್ಕೆ ಕಾರಣವಾಗಲಿದೆ.

ಇದನ್ನೂ ಓದಿ: ಮುನ್ನೆಚ್ಚರಿಕಾ ಕ್ರಮ: ಕೆಂಪೇಗೌಡ ಮೆಟ್ರೋ ನಿಲ್ದಾಣದ ಗೇಟ್ ಬಂದ್

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್