ಧಾರಾಕಾರ ಮಳೆಗೆ ಎಲ್ಲವೂ ಹಾನಿ.. ಜನಜೀವನ ಅಸ್ತವ್ಯಸ್ತ

ವಿಜಯಪುರ: ಧಾರಾಕಾರ ಮಳೆಗೆ ಡೋಣಿ ನದಿ ತುಂಬಿ ಹರಿಯುತ್ತಿದೆ. ನದಿತೀರದ ಉಕುಮನಾಳ, ಸಾರವಾಡದಲ್ಲಿ ಪ್ರವಾಹ ಭೀತಿ ಶುರುವಾಗಿದೆ. ತಾಳಿಕೋಟೆ ಸೇತುವೆ ಜಲಾವೃತವಾದ ಹಿನ್ನೆಲೆಯಲ್ಲಿ ಹಡಗಿನಾಳ, ಕಲ್ಲದೇವನಹಳ್ಳಿ, ಶಿವಪುರ, ಹರನಾಳ, ಮೂಕಿನಾಳ ಗ್ರಾಮಗಳ ಸಂಪರ್ಕ ಕಟ್ ಆಗಿದೆ. ತಾಳಿಕೋಟೆ ಬಳಿಯ ಹನುಮಾನ್ ಮಂದಿರ ನೀರಿನಲ್ಲಿ ಮುಳುಗಿದೆ. ಕಟಾವಿಗೆ ಬಂದಿದ್ದ ಕಬ್ಬು ನಾಶ: ಇನ್ನು ನದಿಯ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಜಲಾವೃತಗೊಂಡಿದೆ. ಗದ್ದೆಗಳಲ್ಲಿ ನೀರು ನಿಂತಿರುವುದನ್ನು ನೋಡಿ ರೈತರು ಕಂಗಾಲಾಗಿದ್ದಾರೆ. ಮೂರು‌ ದಿನಗಳಿಂದ ‌ಸುರಿಯುತ್ತಿರುವ ಮಳೆಗೆ ಕಟಾವಿಗೆ […]

ಧಾರಾಕಾರ ಮಳೆಗೆ ಎಲ್ಲವೂ ಹಾನಿ.. ಜನಜೀವನ ಅಸ್ತವ್ಯಸ್ತ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Oct 14, 2020 | 12:56 PM

ವಿಜಯಪುರ: ಧಾರಾಕಾರ ಮಳೆಗೆ ಡೋಣಿ ನದಿ ತುಂಬಿ ಹರಿಯುತ್ತಿದೆ. ನದಿತೀರದ ಉಕುಮನಾಳ, ಸಾರವಾಡದಲ್ಲಿ ಪ್ರವಾಹ ಭೀತಿ ಶುರುವಾಗಿದೆ. ತಾಳಿಕೋಟೆ ಸೇತುವೆ ಜಲಾವೃತವಾದ ಹಿನ್ನೆಲೆಯಲ್ಲಿ ಹಡಗಿನಾಳ, ಕಲ್ಲದೇವನಹಳ್ಳಿ, ಶಿವಪುರ, ಹರನಾಳ, ಮೂಕಿನಾಳ ಗ್ರಾಮಗಳ ಸಂಪರ್ಕ ಕಟ್ ಆಗಿದೆ. ತಾಳಿಕೋಟೆ ಬಳಿಯ ಹನುಮಾನ್ ಮಂದಿರ ನೀರಿನಲ್ಲಿ ಮುಳುಗಿದೆ.

ಕಟಾವಿಗೆ ಬಂದಿದ್ದ ಕಬ್ಬು ನಾಶ: ಇನ್ನು ನದಿಯ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಜಲಾವೃತಗೊಂಡಿದೆ. ಗದ್ದೆಗಳಲ್ಲಿ ನೀರು ನಿಂತಿರುವುದನ್ನು ನೋಡಿ ರೈತರು ಕಂಗಾಲಾಗಿದ್ದಾರೆ. ಮೂರು‌ ದಿನಗಳಿಂದ ‌ಸುರಿಯುತ್ತಿರುವ ಮಳೆಗೆ ಕಟಾವಿಗೆ ಬಂದಿದ್ದ ಕಬ್ಬಿನ ಬೆಳೆ ನೆಲ ಕಚ್ಚಿದೆ. ಸಾವಿರಾರು ರೂಪಾಯಿ ಖರ್ಚು ಮಾಡಿದ ಕಬ್ಬು ಹಾಳಾಗಿದೆ.

ಮೋರಟಗಿ ಗ್ರಾಮ, ನಿಡಗುಂದಿ ಪಟ್ಟಣದ ಹಲವು ಬಡಾವಣೆಗಳಲ್ಲಿ ನೀರು ನುಗ್ಗಿದ ಕಾರಣ ಮನೆಯಲ್ಲಿನ ದವಸಧಾನ್ಯ, ವಸ್ತುಗಳು ಹಾನಿಯಾಗಿವೆ. ಅಪಾರ ಪ್ರಮಾಣದ ವಸ್ತುಗಳು ನೀರುಪಾಲಾಗಿವೆ. ಜನ ಜೀವನ ಅಸ್ತವ್ಯಸ್ತವಾಗಿದೆ. ಇಷ್ಟೆಲ್ಲಾ ಆದ್ರೂ ಅಧಿಕಾರಿಗಳ್ಯಾರು ಸ್ಥಳಕ್ಕೆ ಬಂದಿಲ್ಲ, ನಮ್ಮ ಬಗ್ಗೆ ವಿಚಾರಿಸಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?