ಮಲೆನಾಡಿನಲ್ಲಿ ಮಳೆಯ ಆರ್ಭಟ! ಧರೆಗುರುಳುತ್ತಿವೆ ಮರಗಳು..

|

Updated on: May 18, 2020 | 9:13 PM

ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕಳೆದ ರಾತ್ರಿಯಿಂದ ಇಂದು ಸಂಜೆ ವರೆಗೆ ಸುರಿದ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ನಿನ್ನೆ ರಾತ್ರಿ ಹಾಗೂ ಇಂದು ಬಿರುಗಾಳಿ, ಗುಡುಗು-ಸಿಡಿಲಿನೊಂದಿಗೆ ಸುರಿದ ಮಳೆ ಮಲೆನಾಡಿಗರ ನಿದ್ದೆಗೆಡಿಸಿದೆ. ಜಿಲ್ಲೆಯ ಮಲೆನಾಡು ಭಾಗಗಳಾದ ಕೊಪ್ಪ, ಶೃಂಗೇರಿ, ಮೂಡಿಗೆರೆ, ಎನ್.ಆರ್.ಪುರ, ಕಳಸ, ಬಾಳೆಹೊನ್ನೂರಿನಲ್ಲಿ ಧಾರಾಕಾರ ಮಳೆ ಸುರಿದಿದೆ. ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿನ ಸುತ್ತಮುತ್ತ, ಬಣಕಲ್, ಬಾಳೂರು, ಕೊಟ್ಟಿಗೆಹಾರ, ಚಕ್ಕಮಕ್ಕಿ, ಮತ್ತಿಕಟ್ಟೆಯಲ್ಲಿ ವರುಣದೇವ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ಬಣಕಲ್‍ನ ಅಬ್ಬಾಸ್ ಎಂಬುವರ ಮನೆ ಮೇಳಲೆ ಮರ ಬಿದ್ದು […]

ಮಲೆನಾಡಿನಲ್ಲಿ ಮಳೆಯ ಆರ್ಭಟ! ಧರೆಗುರುಳುತ್ತಿವೆ ಮರಗಳು..
Follow us on

ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕಳೆದ ರಾತ್ರಿಯಿಂದ ಇಂದು ಸಂಜೆ ವರೆಗೆ ಸುರಿದ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ನಿನ್ನೆ ರಾತ್ರಿ ಹಾಗೂ ಇಂದು ಬಿರುಗಾಳಿ, ಗುಡುಗು-ಸಿಡಿಲಿನೊಂದಿಗೆ ಸುರಿದ ಮಳೆ ಮಲೆನಾಡಿಗರ ನಿದ್ದೆಗೆಡಿಸಿದೆ. ಜಿಲ್ಲೆಯ ಮಲೆನಾಡು ಭಾಗಗಳಾದ ಕೊಪ್ಪ, ಶೃಂಗೇರಿ, ಮೂಡಿಗೆರೆ, ಎನ್.ಆರ್.ಪುರ, ಕಳಸ, ಬಾಳೆಹೊನ್ನೂರಿನಲ್ಲಿ ಧಾರಾಕಾರ ಮಳೆ ಸುರಿದಿದೆ.

ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿನ ಸುತ್ತಮುತ್ತ, ಬಣಕಲ್, ಬಾಳೂರು, ಕೊಟ್ಟಿಗೆಹಾರ, ಚಕ್ಕಮಕ್ಕಿ, ಮತ್ತಿಕಟ್ಟೆಯಲ್ಲಿ ವರುಣದೇವ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ಬಣಕಲ್‍ನ ಅಬ್ಬಾಸ್ ಎಂಬುವರ ಮನೆ ಮೇಳಲೆ ಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡಿದೆ. ಸುಣ್ಣದ ಗೂಡಿನ ಜಯಮ್ಮ ಎಂಬುವರ ಮನೆ ಮೇಲೂ ಮರ ಬಿದ್ದು ಮನೆಗೆ ಹಾನಿಯಾಗಿದೆ. ಬಣಕಲ್‍ನ ಪೊಲೀಸ್ ಕ್ವಾಟ್ರಸ್‍ನ ಮೇಲ್ಛಾವಣೆಯ ಶೀಟುಗಳು ಭಾರಿ ಗಾಳಿಗೆ ಹಾರಿ ಹೋಗಿವೆ.

ಬೀಸ್ತಿರೋ ಗಾಳಿ, ಸುರಿಯುತ್ತಿರೋ ಮಳೆಗೆ ಮಲೆನಾಡಿಗರು ಭಯಭೀತರಾಗಿದ್ದಾರೆ. ಇನ್ನೂ ಚಿಕ್ಕಮಗಳೂರು-ಶೃಂಗೇರಿ ಮಾರ್ಗದ ಗೋರಿಗಂಡಿ ಬಳಿ ಭಾರಿ ಮಳೆ ಗಾಳಿಗೆ ರಾಜ್ಯ ಹೆದ್ದಾರಿ ಬಿರುಕು ಬಿಟ್ಟಿದೆ. ನಿರ್ಮಾಣ ಹಂತದ ಸೇತುವೆಗೆ ಹಾಕಿದ್ದ ಪಿಲ್ಲರ್​ಗಳು ಕೂಡ ನೆಲಕ್ಕುರುಳಿವೆ. ಮಲೆನಾಡಿನಾದ್ಯಂತ ಅಲ್ಲಲ್ಲೇ ಗ್ರಾಮೀಣ ಭಾಗದಲ್ಲಿ ಮರಗಳು ಧರೆಗುರುಳಿ ಸಂಚಾರ ಕೂಡ ಅಸ್ತವ್ಯಸ್ತಗೊಂಡಿದೆ. ವಿದ್ಯುತ್ ತಂತಿಗಳ ಮೇಲೆ ಮರ ಬಿದ್ದ ಪರಿಣಾಮ ಮಲೆನಾಡಿನ ಗ್ರಾಮಗಳು ಕತ್ತಲಲ್ಲಿ ಬದುಕುವಂತಾಗಿದೆ.

Published On - 9:07 pm, Mon, 18 May 20