ಹಾಸನ: ಮಳೆಯ ಆರ್ಭಟಕ್ಕೆ ಮೊದಲ ಬಲಿ, ವೃದ್ಧನ ಮೃತದೇಹ ಪತ್ತೆ
ಹಾಸನ: ಮಳೆ ನೀರಲ್ಲಿ ಕೊಚ್ಚಿ ಹೋಗಿದ್ದ ವೃದ್ದರೊಬ್ಬರು ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಕ್ಯಾಮನಹಳ್ಳಿ ಬಳಿ ಘಟನೆ ನಡೆದಿದೆ. ಸಂಕಲಾಪುರ ಗ್ರಾಮದ ಸಿದ್ದಯ್ಯ(60) ಮೃತ ವ್ಯಕ್ತಿ. ತೋಟದ ಬಳಿಯಿಂದ ಜಾನುವಾರು ಕರೆತರಲು ಹೋದಾಗ ಈ ಅವಘಡ ಸಂಭವಿಸಿದೆ. ನಿನ್ನೆ ಸಂಜೆ ನಾಪತ್ತೆಯಾಗಿದ್ದ ವ್ಯಕ್ತಿ ಇಂದು ಶವವಾಗಿ ಪತ್ತೆಯಾಗಿದ್ದಾರೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಹಾಸನ: ಮಳೆ ನೀರಲ್ಲಿ ಕೊಚ್ಚಿ ಹೋಗಿದ್ದ ವೃದ್ದರೊಬ್ಬರು ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಕ್ಯಾಮನಹಳ್ಳಿ ಬಳಿ ಘಟನೆ ನಡೆದಿದೆ. ಸಂಕಲಾಪುರ ಗ್ರಾಮದ ಸಿದ್ದಯ್ಯ(60) ಮೃತ ವ್ಯಕ್ತಿ.
ತೋಟದ ಬಳಿಯಿಂದ ಜಾನುವಾರು ಕರೆತರಲು ಹೋದಾಗ ಈ ಅವಘಡ ಸಂಭವಿಸಿದೆ. ನಿನ್ನೆ ಸಂಜೆ ನಾಪತ್ತೆಯಾಗಿದ್ದ ವ್ಯಕ್ತಿ ಇಂದು ಶವವಾಗಿ ಪತ್ತೆಯಾಗಿದ್ದಾರೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.