ಮುಂದಿನ ದಿನಗಳಲ್ಲಿ ಬೆಂಗಳೂರಿಗೆ ಕೊರೊನಾ ಜೊತೆ.. ಮಳೆ ಗಂಡಾಂತರ?
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಜೊತೆಗೆ ಮಹಾ ಮಳೆಯ ಗಂಡಾಂತರವೂ ಎದುರಾಗಲಿದೆ. ಕಳೆದ ಮೂರು ದಿನಗಳಿಂದ ನಗರದಲ್ಲಿ ವರ್ಷಧಾರೆಯಾಗುತ್ತಿದೆ. ಅಲ್ಲದೆ, ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ದಕ್ಷಿಣ ಒಳನಾಡಿನ ಭಾಗದಲ್ಲೂ ಹೆಚ್ಚು ಮಳೆಯಾಗಲಿದೆ. ಜೂನ್ 29ರಂದು ಕರಾವಳಿ ಪ್ರಾಂತ್ಯ ಹಾಗೂ ಬೆಂಗಳೂರು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಜೊತೆಗೆ ಮಹಾ ಮಳೆಯ ಗಂಡಾಂತರವೂ ಎದುರಾಗಲಿದೆ. ಕಳೆದ ಮೂರು ದಿನಗಳಿಂದ ನಗರದಲ್ಲಿ ವರ್ಷಧಾರೆಯಾಗುತ್ತಿದೆ. ಅಲ್ಲದೆ, ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದ ದಕ್ಷಿಣ ಒಳನಾಡಿನ ಭಾಗದಲ್ಲೂ ಹೆಚ್ಚು ಮಳೆಯಾಗಲಿದೆ. ಜೂನ್ 29ರಂದು ಕರಾವಳಿ ಪ್ರಾಂತ್ಯ ಹಾಗೂ ಬೆಂಗಳೂರು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
Published On - 2:10 pm, Fri, 26 June 20