ಮನೆಯ ಹಿತ್ತಲಿನಲ್ಲಿರುವ ಎಷ್ಟೋ ಸಸ್ಯಗಳ ಬಗ್ಗೆ ನಮಗೆ ಮಾಹಿತಿಯೇ ಇರುವುದಿಲ್ಲ, ಹಾಗೆಯೇ ಅನೇಕ ಆರೋಗ್ಯ ಪ್ರಯೋಜನಗಳಿರುವ ದೊಡ್ಡ ಪತ್ರೆ(Ajwain)ಯ ಬಗ್ಗೆ ಸಾಕಷ್ಟು ಮಂದಿಗೆ ತಿಳಿದಿಲ್ಲ. ಅದಕ್ಕೆ ಸಾಂಬಾರ ಸೊಪ್ಪು ಎಂದೂ ಕರೆಯುವುದುಂಟು.
ಶೀತ ಹಾಗೂ ಜ್ವರಕ್ಕೆ ಮನೆಮದ್ದು
ಆಹಾರದಲ್ಲಿ ಸ್ವಲ್ಪ ಬದಲಾವಣೆಯಾದರೂ ಅಥವಾ ನೀರು ಆಹಾರದಲ್ಲಾಗುವ ಬದಲಾವಣೆಯಿಂದಾಗಿ ಬಹುಬೇಗ ಶೀತ ಅಥವಾ ಜ್ವರ ಕಾಡುತ್ತದೆ. ದೊಡ್ಡ ಪತ್ರೆ ಸೊಪ್ಪನ್ನು ಕೊಯ್ದು ತಂದು ಬೆಂಕಿಯಲ್ಲಿ ಸುಟ್ಟು ಅದರ ರಸವನ್ನು ತೆಗದು ಅದಕ್ಕೆ ಅರ್ಧ ಚಮಚ ಬೆಲ್ಲ ಸೇರಿಸಿ ಕುಡಿದರೆ ಒಂದೆ ದಿನದಲ್ಲಿ ಶೀತ, ಕಟ್ಟಿದ ಮೂಗಿನ ಸಮಸ್ಯೆ ನಿವಾರಣೆಯಾಗುತ್ತದೆ.
ದೊಡ್ಡ ಪತ್ರೆ ಸೊಪ್ಪನ್ನು ಬೆಂಕಿಯ ಮೇಲೆ ಇಟ್ಟು ಬಾಡಿಸಿ ನಂತರ ಅದನ್ನು ನೆತ್ತಿಗೆ ಹಾಕಿದರೆ ದೇಹದಲ್ಲಿನ ತಣ್ಣನೆಯ ಅಂಶ ನಿವಾರಣೆಯಾಗಿ ಜ್ವರ, ಶೀತ ಕಡಿಮೆಯಾಗುತ್ತದೆ. ಮಕ್ಕಳಿಗೆ ಇದು ಬೆಸ್ಟ್ ಔಷಧವಾಗಿದೆ.
ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಳ
ದೊಡ್ಡಪತ್ರೆ ಬಳಕೆಯಿಂದ ನಿಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಲಿದೆ. ದೊಡ್ಡ ಪತ್ರೆಯಲ್ಲಿ ವಿಟಮಿನ್ ಸಿ, ಫೈಬರ್ ಮತ್ತು ಕ್ಯಾಲ್ಸಿಯಂ ಗುಣ ಹೇರಳವಾಗಿದೆ. ಇದು ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಬಲಗೊಳಿಸಲು ಸಹಾಯ ಮಾಡುತ್ತದೆ.
ಕೀಟಗಳು ಕಚ್ಚಿದಾಗ ಕೆಂಪು ಗುಳ್ಳೆಗಳು ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಉರಿ, ಬಾವು ಕಾಣಿಸಿಕೊಳ್ಳುತ್ತದೆ. ದೊಡ್ಡ ಪತ್ರೆ ರಸವನ್ನು ತೆಗೆದು ಕೀಟಕಚ್ಚಿದ ಜಾಗದಲ್ಲಿ ಹಚ್ಚಿದರೆ ಗಂಟೆಗಳೊಳಗೆ ಶಮನವಾಗುತ್ತದೆ.
ಮಲಬದ್ಧತೆ ಸಮಸ್ಯೆಗೂ ಪರಿಹಾರ
ಅರಿಶಿನ ಕಾಮಾಲೆ ಇದ್ದವರಿಗೂ ದೊಡ್ಡ ಪತ್ರೆ ಸೊಪ್ಪು ಉತ್ತಮ ಮನೆ ಮದ್ದಾಗಿದೆ. ಈ ಎಲೆಯನ್ನು ಆಹಾರ ರೂಪದಲ್ಲಿ ಅಂದರೆ ಚಟ್ನಿ, ತಂಬುಳಿ ಮಾಡಿ ಸೇವಿಸಿದರೆ ಕೆಲವೇ ದಿನಗಳಲ್ಲಿ ಕಾಯಿಲೆ ಚೇತರಿಕೆಯನ್ನು ಕಾಣುತ್ತದೆ.
ದೊಡ್ಡ ಪತ್ರೆಯ ಗಿಡದ ಎಲೆಯನ್ನು ತಂದು ಬಾಡಿಸಿ ರಸ ತೆಗೆದು ಜೇನುತುಪ್ಪ ಸೇರಿಸಿ ಕುಡಿದರೆ ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ.
ದೊಡ್ಡ ಪತ್ರೆ ರಕ್ತ ಶುದ್ಧಿ ಮಾಡುತ್ತದೆ
ನಿಮ್ಮ ಮನೆಯ ಹಿತ್ತಲಿನಲ್ಲಿ ದೊಡ್ಡ ಪತ್ರೆ ಸೊಪ್ಪಿದ್ದರೆ ಜೋಪಾನ ಮಾಡಿ ಉಳಿಸಿಕೊಳ್ಳಿ. ಆರೋಗ್ಯ ಉತ್ತಮಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ರೋಗ್ಯ ಸಮಸ್ಯೆಗೆ ರಕ್ತ ಮಲಿನವಾಗುವುದು ಕೂಡ ಒಂದು ಕಾರಣವಾಗುತ್ತದೆ. ರಕ್ತಶುದ್ಧಿಯಾದಾಗ ದೇಹದಲ್ಲಿ ರೋಗ ನಿರೋಧಕ ಶಕ್ತಿ ಕೂಡ ಹೆಚ್ಚುತ್ತದೆ. ಆ ಕೆಲಸವನ್ನು ದೊಡ್ಡ ಪತ್ರೆ ಸೊಪ್ಪು ಮಾಡುತ್ತದೆ. ದೊಡ್ಡ ಪತ್ರೆ ಎಲೆಯ ರಸಕ್ಕೆ ಬೆಲ್ಲ ಸೇರಿಸಿ ಕುಡಿದಾಗ ಬೆಲ್ಲ ಕೂಡ ದೇಹಕ್ಕೆ ಒಳ್ಳೆಯ ಪದಾರ್ಥವಾಗಿದೆ. ಇದು ದೇಹದಿಂದ ವಿಷಯುಕ್ತ ಪದಾರ್ಥವನ್ನು ಹೊರಹಾಕಲು ಸಹಾಯ ಮಾಡುತ್ತದೆ.
ಈ ಮಾಹಿತಿಯು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಮನೆಮದ್ದು ಹಾಗೂ ಸಾಮಾನ್ಯ ಮಾಹಿತಿಯನ್ನು ಆಧರಿಸಿರುತ್ತದೆ.
ಆರೋಗ್ಯ ಸಂಬಂಧಿತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ