ತಕ್ಷಣ ಬಿಬಿಎಂಪಿ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ
ತಕ್ಷಣ ಬಿಬಿಎಂಪಿ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ ಹೊರಡಿಸಿದೆ. ಒಂದು ತಿಂಗಳೊಳಗೆ ಮೀಸಲಾತಿ ಅಧಿಸೂಚನೆಗೆ ಆದೇಶ ಹೊರಡಿಸಿದೆ.
ಬೆಂಗಳೂರು: ತಕ್ಷಣ ಬಿಬಿಎಂಪಿ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ ಹೊರಡಿಸಿದೆ. ಒಂದು ತಿಂಗಳೊಳಗೆ ಮೀಸಲಾತಿ ಅಧಿಸೂಚನೆಗೆ ಆದೇಶ ಹೊರಡಿಸಿದೆ.
ಜೊತೆಗೆ, 198 ವಾರ್ಡ್ಗಳಿಗೆ ಚುನಾವಣೆ ನಡೆಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ ಹೊರಡಿಸಿದೆ. ಇದಲ್ಲದೆ, ಮೀಸಲಾತಿ ಅಧಿಸೂಚನೆ ಹೊರಡಿಸಿದ 6 ವಾರಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಸುವಂತೆ ಹೈಕೋರ್ಟ್ ಆಯೋಗಕ್ಕೆ ನಿರ್ದೇಶನ ನೀಡಿದೆ. ಜೂನ್ 2020ರ ವಾರ್ಡ್ ಪುನರ್ವಿಂಗಡಣೆಯಂತೆ ಚುನಾವಣೆ ನಡೆಸಲು ಸೂಚನೆ ನೀಡಿದೆ.
ಕೆಎಂಸಿ ಕಾಯ್ದೆ ತಿದ್ದುಪಡಿ ಇದಕ್ಕೆ ಅನ್ವಯವಾಗಲ್ಲ. ಹಾಗಾಗಿ, ಬಿಬಿಎಂಪಿ ಚುನಾವಣೆ ನಡೆಸುವಂತೆ ಹೈಕೋರ್ಟ್ ಆಯೋಗಕ್ಕೆ ನಿರ್ದೇಶನ ನೀಡಿದೆ. ಹೀಗಾಗಿ, ಮಾರ್ಚ್ ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆಯಿದೆ.
ಒಳಗೊಳಗೇ ಸರ್ಕಾರದ ವಿರುದ್ಧ ಗೆಲುವು ಸಾಧಿಸಿದ ಬಿಜೆಪಿ ಮಾಜಿ ಕಾರ್ಪೊರೇಟರ್ಗಳು? ಇದೀಗ, ಒಳಗೊಳಗೇ ಸರ್ಕಾರದ ವಿರುದ್ಧ ಬಿಜೆಪಿ ಮಾಜಿ ಕಾರ್ಪೊರೇಟರ್ಗಳು ಗೆಲುವು ಸಾಧಿಸಿದ್ದಾರೆ ಎಂಬ ಮಾತು ಕೇಳಿಬಂದಿದೆ. ಬಿಬಿಎಂಪಿ ಚುನಾವಣೆ ನಡೆಸುವಂತೆ ಬಿಜೆಪಿ ಮಾಜಿ ಕಾರ್ಪೊರೇಟರ್ಗಳು ಈ ಹಿಂದೆ ಸರ್ಕಾರಕ್ಕೆ ಒತ್ತಾಯಸಿದ್ರು. ಆದ್ರೆ ಚುನಾವಣೆ ನಡೆಸಲು ಸರ್ಕಾರ ಮುಂದಾಗಿರಲಿಲ್ಲ. ವಾರ್ಡ್ಗಳ ಸಂಖ್ಯೆ ಹೆಚ್ಚಳ ಮಾಡಬೇಕಾಗಿದೆ ಎಂಬ ಕಾರಣ ನೀಡಿ ಚುನಾವಣೆ ಬೇಡ ಎಂದು ಹೇಳಿತ್ತು.
ಇದರಿಂದ ಸರ್ಕಾರದ ವಿರುದ್ಧ ಬೇಸತ್ತಿದ್ದ ಬಿಜೆಪಿ ಕಾರ್ಪೊರೇಟರ್ಗಳೇ ಕಾಂಗ್ರೆಸ್ ಪಕ್ಷದ ಕಾರ್ಪೊರೇಟರ್ಗಳಿಗೆ ಹಿಂದೆಯಿಂದ ಸಾಥ್ ಕೊಟ್ಟು ಕೋರ್ಟ್ ಮೆಟ್ಟಿಲೇರೋ ಹಾಗೆ ಮಾಡಿದ್ರು ಎಂದು ತಿಳಿದುಬಂದಿದೆ. ಕಾಂಗ್ರೆಸ್ ಪಕ್ಷದ ಕಾರ್ಪೊರೇಟರ್ಗಳ ಜೊತೆ ಗೌಪ್ಯವಾಗಿ ಸಭೆ ಕೂಡಾ ನಡೆಸಿದ್ರು ಎಂಬ ಮಾಹಿತಿ ಲಭ್ಯವಾಗಿದೆ.
ಜಾತಿ ಕೇಳಿ ಹುಟ್ಟುವುದಾಗಿದ್ರೇ.. ನಾನು ಮೇಲ್ಜಾತಿಯಲ್ಲಿ ಹುಟ್ಟಬೇಕೆಂದು ಅರ್ಜಿ ಹಾಕ್ತಿದ್ದೆ: ಸಿದ್ದರಾಮಯ್ಯ
Published On - 2:52 pm, Fri, 4 December 20