ಶಿರಸಿ ಮಾರಿಕಾಂಬಾ ದೇಗುಲದಲ್ಲಿ ವಸ್ತ್ರಸಂಹಿತೆ ಜಾರಿಗೆ ಹಿಂದೂ ಜನಜಾಗೃತಿ ಸಮಿತಿ ಒತ್ತಾಯ

ಉತ್ತರ ಕನ್ನಡ ಜಿಲ್ಲೆ ಶಿರಸಿ ಐತಿಹಾಸಿಕ ಮಾರಿಕಾಂಬಾ ದೇಶವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡುವಂತೆ ಹಿಂದೂ ಜನ ಜಾಗೃತಿ ಸಮಿತಿಯಿಂದ ಮನವಿ ಮಾಡಲಾಗಿದೆ.

ಶಿರಸಿ ಮಾರಿಕಾಂಬಾ ದೇಗುಲದಲ್ಲಿ ವಸ್ತ್ರಸಂಹಿತೆ ಜಾರಿಗೆ ಹಿಂದೂ ಜನಜಾಗೃತಿ ಸಮಿತಿ ಒತ್ತಾಯ
ಶಿರಸಿ ಮಾರಿಕಾಂಬಾ ದೇಗುಲ
TV9kannada Web Team

| Edited By: ಗಂಗಾಧರ್​ ಬ. ಸಾಬೋಜಿ

Nov 23, 2022 | 4:44 PM

ಕಾರವಾರ: ಕೆಲ ದಿನಗಳ ಹಿಂದೆ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ (Dress Code) ಜಾರಿ ಮಾಡಲಾಗಿತ್ತು. ಕೆಲ ದಿನಗಳಿಂದ ಗೋಕರ್ಣದ ರಥ ಬೀದಿಯಿಂದ ದೇವಸ್ಥಾನದವರಗೆ ಅರೆಬರೆ ಬಟ್ಟೆ ಹಾಕುವಂತಿಲ್ಲ ಎಂಬ ಸೂಚನಾ ಫಲಕವನ್ನು ಆಡಳಿತ ಮಂಡಳಿ ಅಳವಡಿಕೆ ಮಾಡಿತ್ತು. ಆದರೆ ಗೋಕರ್ಣ ದೇವಸ್ಥಾನದ ಆಡಳಿತ ಮಂಡಳಿ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದರು. ನಂತರ ಆ ಸೂಚನಾ ಫಲಕವನ್ನು ಆಡಳಿತ ಮಂಡಳಿ ತೆರವು ಮಾಡಿತ್ತು. ಈಗ ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೂ ವಸ್ತ್ರ ಸಂಹಿತ ನೀತಿ ಕಾಲಿಟ್ಟಿದೆ.

ಉತ್ತರ ಕನ್ನಡ ಜಿಲ್ಲೆ ಶಿರಸಿ ಐತಿಹಾಸಿಕ ಮಾರಿಕಾಂಬಾ ದೇಶವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡುವಂತೆ ಹಿಂದೂ ಜನ ಜಾಗೃತಿ ಸಮಿತಿಯಿಂದ ಮನವಿ ಮಾಡಲಾಗಿದೆ. ಹಿಂದೂ ಸಂಸ್ಕೃತಿ ಪ್ರಕಾರ ಉಡುಪು ಧರಿಸಿ ದೇವಸ್ಥಾನಕ್ಕೆ ಬರುವುದಕ್ಕೆ ಮಾತ್ರ ಅವಕಾಶ ನೀಡುವಂತೆ ಒತ್ತಾಯಿಸಲಾಗಿದೆ.

ಅರೆಬರೆ ಬಟ್ಟೆ ಧರಿಸಿ ದೇವಸ್ಥಾನದ ಒಳಗೆ ಬರುವುದಕ್ಕೆ ಅವಕಾಶ ಬೇಡ. ಈ ರೀತಿಯಾಗಿ ಬಟ್ಟೆ ಧರಿಸಿ ಬರುವುದರಿಂದ ದೇವಸ್ಥಾನದ ಪಾವಿತ್ರತೆಗೆ ಧಕ್ಕೆ ಬರುತ್ತೆ ಎಂದು ಆರೋಪಿಸಲಾಗಿದೆ. ಹಿಂದೂ ಸಂಸ್ಕ್ರತಿಯ ಬಟ್ಟೆ ಧರಿಸಿ ದೇವಸ್ಥಾನಕ್ಕೆ ಬರುವವರಿಗೆ ಮಾತ್ರ ಅವಕಾಶ ನೀಡಿ ಎಂದು ಮಂಡಳಿಗೆ ಹಿಂದೂ ಜನ ಜಾಗೃತಿ ಸಮಿತಿ ಮನವಿ ಮಾಡಿದೆ.

ರಾಜ್ಯದ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡಲು ಧಾರ್ಮಿಕ ಪರಿಷತ್​ ತೀರ್ಮಾನಿಸಿದೆ. ಬರ್ಮುಡಾ, ತುಂಡುಡುಗೆಗಳನ್ನು ನಿಷೇಧಿಸಲಾಗಿದೆ. ಎ ಗ್ರೇಡ್​ ದೇವಾಯಗಳಲ್ಲಿ ಹಂತಹಂತವಾಗಿ ವಸ್ತ್ರ ಸಂಹಿತೆ ಜಾರಿ ಮಾಡಲಾಗುತ್ತಿದೆ.

ಕರಾವಳಿ ಭಾಗದಲ್ಲಿ ಮತ್ತೆ ಶುರುವಾದ ವ್ಯಾಪಾರ ಬಹಿಷ್ಕಾರ ದಂಗಲ್​

ಇನ್ನು ಕರಾವಳಿ ಭಾಗದಲ್ಲಿ ಮತ್ತೆ ವ್ಯಾಪಾರ ಬಹಿಷ್ಕಾರ ದಂಗಲ್ ಶುರುವಾಗಿದೆ.​ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಹಿಂದೂ ಜಾಗರಣಾ ವೇದಿಕೆಯಿಂದ ಚಂಪಾಷಷ್ಟಿಗೆ ಅನ್ಯಧರ್ಮೀಯರ ವ್ಯಾಪಾರಕ್ಕೆ ನಿಷೇಧ ಎಂಬ ಬ್ಯಾನರ್ ಅಳವಡಿಸಲಾಗಿದೆ. ​

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ

Follow us on

Most Read Stories

Click on your DTH Provider to Add TV9 Kannada