ವಿಜಯನಗರ ಜಿಲ್ಲೆ ಸ್ಥಾಪನೆ: ಸಚಿವ ಆನಂದ್ ಸಿಂಗ್ ಕೊಟ್ಟ ಗುಡ್​ ನ್ಯೂಸ್​ ಏನು?

ಬೆಂಗಳೂರು: ಹಿಂದೂ ಸಾಮ್ರಾಜ್ಯವಾಗಿದ್ದ ವಿಜಯನಗರ ಕ್ಷೇತ್ರವನ್ನು ಮಾದರಿ ಜಿಲ್ಲೆಯಾಗಿ ಮಾಡಬೇಕೆಂಬ ಅದಮ್ಯ ತುಡಿತ ಅಲ್ಲಿನ ಜನ, ಜನಪ್ರತಿನಿಧಿಗಳ ಬಹುದಿನದ ಕನಸು. ಅದೀಗ ಕೈಗೂಡುವ ಕಾಲ ಸಮೀಪಿಸಿದೆ. ಐತಿಹಾಸಿಕ ತೀರ್ಮಾನವಾಗಿದೆ ವಿಜಯನಗರ ಜಿಲ್ಲೆಯಾಗಬೇಕೆಂಬ ಬಹುದಿನದ ಬೇಡಿಕೆಗೆ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ನೇತೃತ್ವದ  ಸಚಿವ ಸಂಪುಟ ಸಭೆಯಲ್ಲಿ ಅನೌಪಚಾರಿಕ ಒಪ್ಪಿಗೆ ದೊರೆತಿದೆ.  ಇದರಿಂದ ಐತಿಹಾಸಿಕ ತೀರ್ಮಾನ ಮಾಡಿದಂತಾಗಿದೆ ಎಂದು ಬೆಂಗಳೂರಿನಲ್ಲಿ ಅರಣ್ಯ ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ. ಬಳ್ಳಾರಿ ಪಶ್ಚಿಮ ಭಾಗದ ತಾಲೂಕುಗಳನ್ನೊಳಗೊಂಡ ಈ ನೂತನ ಜಿಲ್ಲೆ ರಚನೆ […]

ವಿಜಯನಗರ ಜಿಲ್ಲೆ ಸ್ಥಾಪನೆ: ಸಚಿವ ಆನಂದ್ ಸಿಂಗ್ ಕೊಟ್ಟ ಗುಡ್​ ನ್ಯೂಸ್​ ಏನು?

Updated on: Nov 18, 2020 | 12:13 PM

ಬೆಂಗಳೂರು: ಹಿಂದೂ ಸಾಮ್ರಾಜ್ಯವಾಗಿದ್ದ ವಿಜಯನಗರ ಕ್ಷೇತ್ರವನ್ನು ಮಾದರಿ ಜಿಲ್ಲೆಯಾಗಿ ಮಾಡಬೇಕೆಂಬ ಅದಮ್ಯ ತುಡಿತ ಅಲ್ಲಿನ ಜನ, ಜನಪ್ರತಿನಿಧಿಗಳ ಬಹುದಿನದ ಕನಸು. ಅದೀಗ ಕೈಗೂಡುವ ಕಾಲ ಸಮೀಪಿಸಿದೆ.

ಐತಿಹಾಸಿಕ ತೀರ್ಮಾನವಾಗಿದೆ
ವಿಜಯನಗರ ಜಿಲ್ಲೆಯಾಗಬೇಕೆಂಬ ಬಹುದಿನದ ಬೇಡಿಕೆಗೆ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ನೇತೃತ್ವದ  ಸಚಿವ ಸಂಪುಟ ಸಭೆಯಲ್ಲಿ ಅನೌಪಚಾರಿಕ ಒಪ್ಪಿಗೆ ದೊರೆತಿದೆ.  ಇದರಿಂದ ಐತಿಹಾಸಿಕ ತೀರ್ಮಾನ ಮಾಡಿದಂತಾಗಿದೆ ಎಂದು ಬೆಂಗಳೂರಿನಲ್ಲಿ ಅರಣ್ಯ ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ. ಬಳ್ಳಾರಿ ಪಶ್ಚಿಮ ಭಾಗದ ತಾಲೂಕುಗಳನ್ನೊಳಗೊಂಡ ಈ ನೂತನ ಜಿಲ್ಲೆ ರಚನೆ ಮಾಡಬೇಕೆಂಬ ದೀರ್ಘಕಾಲದ ಬೇಡಿಕೆ ಈಡೇರಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us