ಹೊಳೆಬಸವೇಶ್ವರ ದೇವಸ್ಥಾನಕ್ಕೆ ಜಲದಿಗ್ಬಂಧನ: 7 ದಿನಗಳಿಂದ ಭಕ್ತರಿಗಿಲ್ಲ ದರ್ಶನ ಭಾಗ್ಯ
ಬಾಗಲಕೋಟೆ: ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಿನ್ನೆಲೆಯಲ್ಲಿ ಘಟಪ್ರಭಾ ನದಿ ತುಂಬಿ ಹರಿಯುತ್ತಿದೆ. ಈ ಪರಿಣಾಮ ಹೊಳೆಬಸವೇಶ್ವರ ದೇವಸ್ಥಾನ ಜಲಾವೃತಗೊಂಡಿದೆ. ಕಳೆದ ಒಂದು ವಾರದಿಂದ ಇದೇ ಪರಿಸ್ಥಿತಿ ಇದ್ದು, ಭಕ್ತರಿಗೆ ದೇವರ ದರ್ಶನ ಭಾಗ್ಯ ಸಿಕ್ಕಿಲ್ಲ. ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಮಾಚಕನೂರು ಗ್ರಾಮದ ಬಳಿ ಇರುವ ಪ್ರಸಿದ್ಧ ಹೊಳೆಬಸವೇಶ್ವರ ದೇವಸ್ಥಾನದೊಳಗೆ ಆರು ಅಡಿಯಷ್ಟು ನೀರು ಆವರಿಸಿದೆ. ಇಂದಿಗೂ ನೀರು ಕಡಿಮೆಯಾಗದ ಕಾರಣ ಜನರಲ್ಲಿ ಆತಂಕ ಹೆಚ್ಚಿದೆ. ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಮನೆ, ಗದ್ದೆ ಎಲ್ಲವೂ ಮುಳುಗಿದೆ. […]
ಬಾಗಲಕೋಟೆ: ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಿನ್ನೆಲೆಯಲ್ಲಿ ಘಟಪ್ರಭಾ ನದಿ ತುಂಬಿ ಹರಿಯುತ್ತಿದೆ. ಈ ಪರಿಣಾಮ ಹೊಳೆಬಸವೇಶ್ವರ ದೇವಸ್ಥಾನ ಜಲಾವೃತಗೊಂಡಿದೆ. ಕಳೆದ ಒಂದು ವಾರದಿಂದ ಇದೇ ಪರಿಸ್ಥಿತಿ ಇದ್ದು, ಭಕ್ತರಿಗೆ ದೇವರ ದರ್ಶನ ಭಾಗ್ಯ ಸಿಕ್ಕಿಲ್ಲ.
ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಮಾಚಕನೂರು ಗ್ರಾಮದ ಬಳಿ ಇರುವ ಪ್ರಸಿದ್ಧ ಹೊಳೆಬಸವೇಶ್ವರ ದೇವಸ್ಥಾನದೊಳಗೆ ಆರು ಅಡಿಯಷ್ಟು ನೀರು ಆವರಿಸಿದೆ. ಇಂದಿಗೂ ನೀರು ಕಡಿಮೆಯಾಗದ ಕಾರಣ ಜನರಲ್ಲಿ ಆತಂಕ ಹೆಚ್ಚಿದೆ. ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಮನೆ, ಗದ್ದೆ ಎಲ್ಲವೂ ಮುಳುಗಿದೆ. ಸೇತುವೆಗಳು ಸಂಚಾರಕ್ಕೆ ಸೂಕ್ತವಲ್ಲದಂತಾಗಿವೆ. ರಸ್ತೆಗಳು ಕರೆಯಂತಾಗಿವೆ. ವರುಣನ ಆರ್ಭಟದಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ.
Published On - 9:08 am, Thu, 15 October 20