ಕಡಲತೀರದಲ್ಲಿ ಸಚಿವ ಬೊಮ್ಮಾಯಿ ಅಪಾಯದಿಂದ ಪಾರು, ನಡೆದದ್ದಾದರೂ ಏನು?

ಉಡುಪಿ: ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಆ ಭಾಗದ ಜನ ಭಾರಿ ಕಷ್ಟದಲ್ಲಿದ್ದಾರೆ. ಹೀಗಾಗಿ ಆ ಭಾಗಕ್ಕೆ ನೆರೆ ಪ್ರವಾಸ ಕೈಗೊಂಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ ದೊಡ್ಡದೊಂದು ಅಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಸಕಾಲದಲ್ಲಿ ಕೈಹಿಡಿದ ಉಡುಪಿ SP ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪಡುಬಿದ್ರೆ ಬಳಿಯ ಬೀಚ್​ನಲ್ಲಿ ಕಡಲ್ಕೊರೆತವನ್ನು ಪರೀಕ್ಷಿಸಲು ತೆರಳಿದ್ದರು. ಈ ವೇಳೆ ಸಮುದ್ರದ ಅಲೆ ರಭಸವಾಗಿ ಬಂದಿದೆ. ಕೂಡಲೇ ಎಚ್ಚೆತ್ತ ಉಡುಪಿಯ ಎಸ್ಪಿ ವಿಷ್ಣುವರ್ಧನ್, ಇದರ […]

ಕಡಲತೀರದಲ್ಲಿ ಸಚಿವ ಬೊಮ್ಮಾಯಿ ಅಪಾಯದಿಂದ ಪಾರು, ನಡೆದದ್ದಾದರೂ ಏನು?
ಸಾಧು ಶ್ರೀನಾಥ್​

Updated on: Aug 11, 2020 | 12:19 PM

ಉಡುಪಿ: ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಆ ಭಾಗದ ಜನ ಭಾರಿ ಕಷ್ಟದಲ್ಲಿದ್ದಾರೆ. ಹೀಗಾಗಿ ಆ ಭಾಗಕ್ಕೆ ನೆರೆ ಪ್ರವಾಸ ಕೈಗೊಂಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ ದೊಡ್ಡದೊಂದು ಅಪಾಯದಿಂದ ಪಾರಾಗಿರುವ ಘಟನೆ ನಡೆದಿದೆ.

ಸಕಾಲದಲ್ಲಿ ಕೈಹಿಡಿದ ಉಡುಪಿ SP
ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪಡುಬಿದ್ರೆ ಬಳಿಯ ಬೀಚ್​ನಲ್ಲಿ ಕಡಲ್ಕೊರೆತವನ್ನು ಪರೀಕ್ಷಿಸಲು ತೆರಳಿದ್ದರು. ಈ ವೇಳೆ ಸಮುದ್ರದ ಅಲೆ ರಭಸವಾಗಿ ಬಂದಿದೆ.

ಕೂಡಲೇ ಎಚ್ಚೆತ್ತ ಉಡುಪಿಯ ಎಸ್ಪಿ ವಿಷ್ಣುವರ್ಧನ್, ಇದರ ಪರಿವೆ ಇಲ್ಲದೆ ಸ್ಥಳ ಪರಿಶೀಲಿಸುತ್ತಿದ್ದ ಬಸವರಾಜ ಬೊಮ್ಮಾಯಿ ಅವರನ್ನು ರಕ್ಷಿಸಿದ್ದಾರೆ. ಘಟನೆಯಲ್ಲಿ ಗೃಹ ಸಚಿವರ ಒಂದು ಚಪ್ಪಲಿಯನ್ನು ಸಮುದ್ರದ ಅಲೆ ಎಳೆದುಕೊಂಡು ಹೋಗಿದೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us