ಗಲಭೆಕೋರರಿಂದಲೇ ಆಸ್ತಿಪಾಸ್ತಿ ನಷ್ಟದ ಬಾಬತ್ತು ವಸೂಲಿ: ಗೃಹ ಸಚಿವ‌ ಬೊಮ್ಮಾಯಿ

| Updated By: ಸಾಧು ಶ್ರೀನಾಥ್​

Updated on: Aug 12, 2020 | 4:59 PM

ಬೆಂಗಳೂರು: ಬೆಂಗಳೂರಿನ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಗರಂ ಆಗಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿರುವ ಬೊಮ್ಮಾಯಿ, ಈ ಗಲಭೆಗೆ ಯಾರೇ ಕಾರಣವಾಗಿರಲಿ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಕೆ.ಜಿ ಹಳ್ಳಿ ಮತ್ತು ಡಿ.ಜೆ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಗಲಭೆಯಲ್ಲಾದ ಸರ್ಕಾರಿ ಆಸ್ತಿಪಾಸ್ತಿಯ ಹಾನಿಯನ್ನು ಗಲಭೆಕೋರರಿಂದಲೇ ವಸೂಲು ಮಾಡುತ್ತೇವೆ ಎಂದು ಹೇಳಿದ್ದಾರೆ. ಈ ಸಂಬಂಧ ಸುಪ್ರೀಂ‌ ಕೋರ್ಟ್‌ ನೀಡಿರುವ […]

ಗಲಭೆಕೋರರಿಂದಲೇ ಆಸ್ತಿಪಾಸ್ತಿ ನಷ್ಟದ ಬಾಬತ್ತು ವಸೂಲಿ: ಗೃಹ ಸಚಿವ‌ ಬೊಮ್ಮಾಯಿ
Follow us on

ಬೆಂಗಳೂರು: ಬೆಂಗಳೂರಿನ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಗರಂ ಆಗಿದ್ದಾರೆ.

ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿರುವ ಬೊಮ್ಮಾಯಿ, ಈ ಗಲಭೆಗೆ ಯಾರೇ ಕಾರಣವಾಗಿರಲಿ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಕೆ.ಜಿ ಹಳ್ಳಿ ಮತ್ತು ಡಿ.ಜೆ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಗಲಭೆಯಲ್ಲಾದ ಸರ್ಕಾರಿ ಆಸ್ತಿಪಾಸ್ತಿಯ ಹಾನಿಯನ್ನು ಗಲಭೆಕೋರರಿಂದಲೇ ವಸೂಲು ಮಾಡುತ್ತೇವೆ ಎಂದು ಹೇಳಿದ್ದಾರೆ.

ಈ ಸಂಬಂಧ ಸುಪ್ರೀಂ‌ ಕೋರ್ಟ್‌ ನೀಡಿರುವ ನಿರ್ದೇಶನವನ್ನು ಗೃಹ ಸಚಿವರು ಉಲ್ಲೇಖಿಸಿದ್ದಾರೆ. ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್‌ ಸರ್ಕಾರ ಈಗಾಗಲೇ ಇದೇ ರೀತಿಯ ಕ್ರಮವನ್ನು ಉತ್ತರ ಪ್ರದೇಶದಲ್ಲಿ ಅನುಸರಿಸುತ್ತಿದೆ. ಈಗ ಕರ್ನಾಟಕ ಸರ್ಕಾರ ಕೂಡಾ ಇದೇ ರೀತಿಯ ಕ್ರಮಕ್ಕೆ ಮುಂದಾಗಿದೆ.