Horoscope: ದಿನ ಭವಿಷ್ಯ | ಮೇಷದಿಂದ ಮೀನದವರೆಗೆ ದ್ವಾದಶರಾಶಿಗಳ ಇಂದಿನ ದಿನಭವಿಷ್ಯ

Horoscope: ಫೆಬ್ರವರಿ 08, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope: ದಿನ ಭವಿಷ್ಯ | ಮೇಷದಿಂದ ಮೀನದವರೆಗೆ ದ್ವಾದಶರಾಶಿಗಳ ಇಂದಿನ ದಿನಭವಿಷ್ಯ
Edited By:

Updated on: Feb 11, 2021 | 9:06 AM

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಪುಷ್ಯಮಾಸ, ಹೇಮಂತ ಋತು, ಕೃಷ್ಣ ಪಕ್ಷ, ದಶಮಿ ತಿಥಿ, ಭಾನುವಾರ, ಫೆಬ್ರವರಿ 7, 2021. ಮೂಲ ನಕ್ಷತ್ರ, ರಾಹುಕಾಲ: ಇಂದು 8:11  ರಿಂದ ರಾತ್ರಿ 9:37 ವರೆಗೆ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.45. ಸೂರ್ಯಾಸ್ತ: ಸಂಜೆ 6.14.

ತಾ.08-02-2021 ರ ಸೋಮವಾರದ ರಾಶಿಭವಿಷ್ಯ

ಮೇಷ: ಮಹಿಳೆಯರ ಇಷ್ಟಾರ್ಥ ಸಿದ್ಧಿಸುವದು.ಕೂಡಿಟ್ಟ ಹಣ ಉಪಯೋಗವಾಗುವ ಸಂಭವವಿದೆ.ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವವು.ನ್ಯಾಯಾಲಯದಲ್ಲಿ ಜಯ ದೊರೆಯುವದು. ವಿದ್ಯೆಯಲ್ಲಿ ಸಾಧನೆ ಇರುವದು. ಶುಭ ಸಂಖ್ಯೆ: 5

ವೃಷಭ: ಗಂಭೀರ ಆರೋಪದಿಂದ ಮುಕ್ತರಾಗುವಿರಿ. ಅನುಕೂಲಕರ ವಾತಾವರಣ ಇರುವದರಿಂದ ಇನ್ನೂ ಹೆಚ್ಚಿನ ವ್ಯವಹಾರಿಕ ಸುಧಾರಣೆ ಮಾಡಲು ಪ್ರಯತ್ನಿಸಿರಿ.ಆರೋಗ್ಯದ ಸೂಕ್ತ ಕಾಳಜಿ ವಹಿಸಿರಿ. ಶುಭ ಸಂಖ್ಯೆ: 1

ಮಿಥುನ: ಮಾತಿನಂತೆಯೇ ಎಲ್ಲವೂ ನಡೆಯುವದಿಲ್ಲ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಉದಯೋನ್ಮುಖ ಪ್ರತಿಭೆಗಳಿಗೆ ಅವಕಾಶ ದೊರೆಯುವದು.ಲಾಭದಾಯಕ ಹುದ್ದೆ ದೊರೆಯುವದು. ಶುಭ ಸಂಖ್ಯೆ: 9

ಕರ್ಕ: ಕೃಷಿಮೂಲದ ಲಾಭ ದೊರೆಯುವದು. ಸಹೋದ್ಯೋಗಿಗಳ ಸಹಾಯ ಅಪೃಕ್ಷಿಸದೇ ಸ್ವಂತಬಲದಿಂದ ಕೆಲಸ ನಿರ್ವಹಿಸಿರಿ.ಕೈಗೊಂಡ ಕಾರ್ಯಗಳು ಯಶಸ್ವಿಯಾಗುವವು. ನೌಕರರಿಗೆ ಕಿರಿಕಿರಿಯಾಗುವ ಸಂಭವವಿದೆ. ಶುಭ ಸಂಖ್ಯೆ: 3

ಸಿಂಹ: ಆಸ್ತಿ ವಿಷಯಕ್ಕೆ ಸಂಬಂಧಿಸಿಂತೆ ತೊಂದರೆಯಾಗುವ ಸಂಭವವಿದೆ. ಆದಾಯ ಉತ್ತಮವಾಗಿರುವದು.ನೌಕರಿಯಲ್ಲಿ ಅಸಹಕಾರ ಎದುರಿಬೇಕಾಗುವದು. ಗ್ರಹಸೌಖ್ಯವಿದ್ದರೂ ಮಾನಸಿಕ ನೆಮ್ಮದಿ ಇರಲಾರದು. ಶುಭ ಸಂಖ್ಯೆ: 2

ಕನ್ಯಾ: ವಿವಿಧ ಮೂಲಗಳಿಂದ ಸಹಾಯ ದೊರೆಯುವದು. ಉದ್ಯೋಗದಲ್ಲಿ ಅಭಿವೃದ್ಧಿ ಇರುವದು. ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ. ಲೆಕ್ಕಾಚಾರ ತಪ್ಪದಂತೆ ಎಚ್ಚರವಹಿಸಿರಿ.ಮನೆಯಲ್ಲಿ ಮಂಗಲಕಾರ್ಯ ಜರುಗುವದು. ಶುಭ ಸಂಖ್ಯೆ: 7

ತುಲಾ: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಶುಭ ಸಂಖ್ಯೆ: 6

ವೃಶ್ಚಿಕ: ಅನಾವಶ್ಯಕ ತಿರುಗಾಟದಿಂದ ಆಲಸ್ಯ. ದುರ್ಜನರ ಸಹವಾಸ ದೋಷ ಕಂಡುಬರುವದು. ಐಷಾರಾಮಿ ವಸ್ತುಗಳ ಖರೀದಿ ಸಂಭವ. ವ್ಯಾಪಾರ-ಉದ್ಯಮಗಳಲ್ಲಿ ತೃಪ್ತಿದಾಯಕ ಲಾಭವಿರುವದು. ವಿದ್ಯಾರ್ಥಿಗಳಿಗೆ ಹಿನ್ನಡೆ ಇರುವದು. ಶುಭ ಸಂಖ್ಯೆ: 9

ಧನು: ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವದು. ಎಚ್ಚರಿಕೆವಹಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವದು. ಗೊಂದಲಕ್ಕೆ ಒಳಗಾಗದೇ ಮುನ್ನುಗ್ಗಿರಿ. ಕೊಟ್ಟಸಾಲ ಪಾವತಿಯಾಗುವದು. ಶುಭ ಸಂಖ್ಯೆ: 5

ಮಕರ: ದಿಟ್ಟತನ, ಮನೋಸ್ಥೈರ್ಯ, ನೇರ,ನಿಷ್ಟುರ ನಡೆಗಳಿಗೆ ಉತ್ತಮ ಫಲಪಾಪ್ತವಾಗುವುದು. ನಿಮ್ಮ ನಿರ್ಧಾರಗಳು ಪರಿವರ್ತನೆಗೆ ಕಾರಣವಾಗುವವು. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರುವದು. ಶುಭ ಸಂಖ್ಯೆ: 8

ಕುಂಭ: ಹೊಸ ಯೋಜನೆಗಳು ಬೇಡ.ಸ್ಥಳಾಂತರ, ವರ್ಗಾವಣೆ, ಮನೆ ಬದಲಿ, ಅಧಿಕಾರಿ ವರ್ಗದವರಿಂದ ಕಿರಿಕಿರಿ ಇರುವದು. ಕೊಟ್ಟ ಸಾಲ ಮರುಪಾವತಿ ಆಗಲಾರದು,ವ್ಯಾಪರಿಗಳಿಗೆ ವ್ಯವಹಾರಿಕ ತೊಂದರೆ ಆಗುವ ಸಧ್ಯತೆ ಇದೆ. ಶುಭ ಸಂಖ್ಯೆ: 4

ಮೀನ: ಏಕಾಂಗಿತನದ ಬೇಸರ ಪರಿಸರದಿಂದ ಹೊರಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನ: ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದೀತು. ಶುಭ ಸಂಖ್ಯೆ: 6

ಬಸವರಾಜ ಗುರೂಜಿ

(ಡಾ.ಬಸವರಾಜ ಗುರೂಜಿ ಸಂಪರ್ಕ ಸಂಖ್ಯೆ: 99728 48937)

Published On - 7:34 am, Mon, 8 February 21