Horoscope: ಕರ್ಕ ರಾಶಿಯವರಿಗೆ ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪ ಸಾಧ್ಯತೆ
Dina Bhavishya: ಫೆಬ್ರವರಿ 10,2021ರ ನಿತ್ಯ ಪಂಚಾಂಗ ಮತ್ತು ಮೇಷದಿಂದ ಮೀನ ರಾಶಿವರೆಗಿನ ದಿನ ಭವಿಷ್ಯ

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಪುಷ್ಯಮಾಸ, ಹೇಮಂತ ಋತು, ಕೃಷ್ಣಪಕ್ಷ, ಚತುರ್ದಶಿ ತಿಥಿ, ಬುಧವಾರ, ಫೆಬ್ರವರಿ 10, 2021. ರಾಹುಕಾಲ: ಇಂದು ಬೆಳಗ್ಗೆ 12 ಗಂಟೆ 30 ನಿಮಿಷದಿಂದ ಮಧ್ಯಾಹ್ನ 1 ಗಂಟೆ 56 ನಿಮಿಷದ ತನಕ. ಸೂರ್ಯೋದಯ: ಬೆಳಗ್ಗೆ 06:45, ಸೂರ್ಯಾಸ್ತ 06:15.
ತಾ.10-02-2021 ರ ಬುಧವಾರದ ರಾಶಿಭವಿಷ್ಯ
ಮೇಷ ವಿನಾಕಾರಣ ನಿಂದೆಯ ಸಂಭವವಿದೆ. ಖರ್ಚುಹೆಚ್ಚಾಗುವದು ಯೋಗ ಇರುವದರಿಂದ ಉಳಿತಾಯದ ಯೋಜನೆ ಮಾಡಿರಿ. ಮನೆಯಲ್ಲಿ ಶಾಂತಿಯುತ ನೆಮ್ಮದಿಯ ವಾತಾವರಣ ಇರುವದು.
ವೃಷಭ ಗೊಂದಲಕ್ಕೆ ಒಳಗಾಗದೇ ಮುನ್ನುಗ್ಗಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪ ಧನಲಾಭವಾದರೂ ಹಳೆಯ ಸಾಲ ತೀರುವದು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇದೆ.
ಮಿಥುನ ಅನಿರೀಕ್ಷಿತ ಧನಲಾಭವಾಗುವದು. ಬುದ್ಧಿಕೌಶಲ್ಯದಿಂದ ಉದ್ಯೋಗದಲ್ಲಿ ಬಡ್ತಿ ಕಂಡುಬರುವದು. ಸಿಟ್ಟಿನ ಸ್ವಭಾವದಿಂದ ತೊದರೆಯಾಗುವ ಸಾಧ್ಯತೆ ಇದೆ. ಕಾರ್ಯಕ್ಷಮತೆಗೆ ತಕ್ಕ ಫಲ ದೊರೆಯುವದು.
ಕರ್ಕ ಯೋಜನೆಗಳಿಗೆ ಪೂರ್ವ ತಯಾರಿ ಮಾಡುವ ಅಗತ್ಯತೆ ಕಂಡುಬರುವದು. ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವದು ಒಳಿತು.
ಸಿಂಹ ಕಾಯಕನಿಷ್ಠೆ ನಿಮಗೇ ಹೊರೆಯಾಗದಂತೆ ನೋಡಿಕೊಳ್ಳಿರಿ. ನಿರಂತರ ದುಡಿಮೆಯಿಂದ ಅನಾರೋಗ್ಯ ಅಥವಾ ಮಾನಸಿಕ ಕಿರಿಕಿರಿ ಆಗುವ ಸಂಭವವಿದೆ. ಹಣಕಾಸಿನಿನ ವ್ಯವಹಾರದಲ್ಲಿ ಎಚ್ಚರಿಕೆವಹಿಸಿರಿ.
ಕನ್ಯಾ ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಅನವಶ್ಯಕ ಭಯ ಅಗತ್ಯವಿಲ್ಲ, ನಿಮ್ಮ ಸೇವೆ ಫಲ ನೀಡುವದು. ಸಂಕಷ್ಟದ ಮಧ್ಯೆಯೂ ಸಂತೋಷದ ದಿನಗಳಿವೆ. ಆಗಂತುಕರೊಂದಿಗೆ ಜಾಗೃತೆ ಅಗತ್ಯ.
ತುಲಾ ಆತ್ಮೀಯರೊಂದಿಗೆ ಮನಸ್ತಾಪ ವಾಗುವ ಯೋಗವಿದೆ. ಸ್ವಂತ ಉದ್ಯಮಿಗಳು ಹಾನಿ ತಪ್ಪಿಸುವ ಉಪಾಯ ಮಾಡಿ. ವ್ಯಾಪಾರದ ವಿಷಯದಲ್ಲಿ ಮೋಸವಾಗುವ ಸಾಧ್ಯತೆ ಇದೆ. ಸಾಲಗಾರರು ಸಹಕಾರ ತೋರುವರು.
ವೃಶ್ಚಿಕ ಕೆಲಸಗಳು ನಿಧಾನಗತಿಯಲ್ಲಿ ಸಾಗುವವು ಸೂಕ್ಷ್ಮತೆಯಿಂದ ವ್ಯವಹರಿಸಿರಿ. ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ಮನೋಚಿಂತಿತ ಕಾರ್ಯ ಕೈಗೂಡುವದು. ಹಳೆಯ ಸಾಲ ತೀರುವದು.
ಧನು ಹಲವು ರೀತಿಯಿಂದ ಧನಾಗಮನವಿದ್ದು ಐಶ್ವರ್ಯವೃದ್ಧಿ, ಸಂಸಾರ ಸುಖ. ಅಪೇಕ್ಷಿತ ವಸ್ತು, ಪ್ರಾಪ್ತಿ, ಮಿತ್ರಾಗಮನ, ವಿಶೇಷ ಸಂತೋಷ ಪ್ರಸಂಗಗಳು ಒದಗಿ ಬಂದು ಸಂಭ್ರಮವೆನಿಸುತ್ತದೆ.
ಮಕರ ವ್ಯವಹಾರಿಕ ಏಳ್ಗೆ ಇರುವದು. ದೂರ ಪ್ರಯಾಣದ ಸಂಭವ. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ.ವಿವಿಧ ಸೌಭಾಗ್ಯಪ್ರಾಪ್ತಿ..ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್,ವಾಹನ,ಮಶಿನರಿಗಳಿಂದ ತೊಂದರೆ.
ಕುಂಭ ಆರಂಭದಲ್ಲಿ ಹರ್ಷ, ಉತ್ಸಾಹ ಇರುವದು ಕೊನೆಗೆ ಮನೋವ್ಯಥೆ. ಮನೆಯಲ್ಲಿ ಸಂತೋಷದ ವಾತಾವರಣ ಇರುವದು. ಗ್ರಹೋಪಯೋಗಿ ವಸ್ತುಗಳ ಖರೀದಿ, ಮನೆ ರಿಪೇರಿ ಮೊದಲಾದ ಕೆಲಸಗಳಾಗುವವು. ಶ್ರೀಲಕ್ಷ್ಮೀಸ್ತೋತ್ರ ಪಠಿಸಿರಿ.
ಮೀನ ಆದಾಯ ಹೆಚ್ಚುವದು. ವ್ಯವಹಾರಿಕ ಏಳ್ಗೆ ಇರುವದು. ಅತಿಯಾದ ಆತ್ಮವಿಶ್ವಾಸ, ಆಲಸ್ಯದಿಂದ ಬಹುವಿಧವಾದ ಕಷ್ಟನಷ್ಟಗಳ ಅನುಭವವಾಗುವದು. ಶಾಂತಚಿತ್ತರಾಗಿ ವ್ಯವಹರಿಸಿರಿ. ಕೆಲಸದಲ್ಲಿ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವದು.

ಬಸವರಾಜ ಗುರೂಜಿ
ಡಾ.ಬಸವರಾಜ್ ಗುರೂಜಿ (ವೈದಿಕ ಜ್ಯೋತಿಷಿ 9972848937)
Published On - 6:27 am, Wed, 10 February 21