Horoscope; ದಿನ ಭವಿಷ್ಯ | ವೃಷಭ ರಾಶಿಯವರಿಗೆ ದೂರಾಲೋಚನೆಯಿಂದ ಕಾರ್ಯದಲ್ಲಿ ಯಶಸ್ಸು

ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಮಾಘಮಾಸ, ಶಿಶಿರ ಋತು , ಶುಕ್ಲಪಕ್ಷ, ಪಂಚಮಿ ತಿಥಿ, ಮಂಗಳವಾರ, ಫೆಬ್ರವರಿ 16, 2021 ಭವಿಷ್ಯ.

Horoscope; ದಿನ ಭವಿಷ್ಯ | ವೃಷಭ ರಾಶಿಯವರಿಗೆ ದೂರಾಲೋಚನೆಯಿಂದ ಕಾರ್ಯದಲ್ಲಿ ಯಶಸ್ಸು
ದಿನ ಭವಿಷ್ಯ
Edited By:

Updated on: Feb 16, 2021 | 7:05 PM

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಮಾಘಮಾಸ, ಶಿಶಿರ ಋತು , ಶುಕ್ಲಪಕ್ಷ, ಪಂಚಮಿ ತಿಥಿ, ಮಂಗಳವಾರ, ಫೆಬ್ರವರಿ 16, 2021. ರೇವತಿ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 3:23 ಇಂದು ಸಂಜೆ 4:49 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.42. ಸೂರ್ಯಾಸ್ತ: ಸಂಜೆ 6.17.

ದಿನಾಂಕ 16-02-2021 ರ ಮಂಗಳವಾರ ದ ರಾಶಿಭವಿಷ್ಯ

ಮೇಷ: ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವದು. ಶುಭ ಸಂಖ್ಯೆ: 3

ವೃಷಭ: ದೂರಾಲೋಚನೆಯಿಂದ ಕಾರ್ಯದಲ್ಲಿ ಯಶಸ್ಸು. ಆಸ್ತಿ ಖರೀದಿ ಸಾಧ್ಯ.ವೈವಾಹಿಕ ಚಿಂತೆ ಇರುವದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ. ಧಾರ್ಮಿಕ ಕ್ಷೇತ್ರಗಳ ದರ್ಶನ ಯೋಗವಿದೆ. ಶುಭ ಸಂಖ್ಯೆ: 9

ಮಿಥುನ: ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆಯ ಆಗುವ ಯೋಗವಿದೆ. ಶುಭ ಸಂಖ್ಯೆ: 4

ಕರ್ಕ: ಜವಾಬ್ದಾರಿಯ ನಿಮಿತ್ತ ದೂರ ಪ್ರಯಾಣದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಇರುವದು. ಅಹಂಭಾವದಿಂದ ಕಠಿಣ ಪರಿಸ್ಥಿತಿಯನ್ನು ಎದುರಿಸುವ ಪ್ರಸಂಗವಿದೆ ಎಚ್ಚರಿಕೆ ವಹಿಸಿರಿ. ನಮೃತೆಗೆ ಯೋಗ್ಯ ಸಮ್ಮಾನ ದೊರೆಯುವದು. ಶುಭ ಸಂಖ್ಯೆ: 6

ಸಿಂಹ: ಯೋಜನಾಬದ್ಧ ಕೆಲಸಗಳೂ ಕೂಡ ಮುಂದೂಡುವ ಪ್ರಸಂಗವಿದೆ. ಆಪ್ತವಲಯದಲ್ಲಿ ಸಮಾಲೋಚಿಸಿರಿ. ಅನಿವಾರ್ಯ ಕರ್ತವ್ಯಗಳಿಗೆ ಸಮಯ ಹೊಂದಾಣಿಕೆ ಮಾಡುವ ಸಾಧ್ಯತೆ ಇದೆ. ಆರ್ಥಕ ಸಂಕಷ್ಟಗಳು ಎದುರಾಗುವವು. ಶುಭ ಸಂಖ್ಯೆ: 5

ಕನ್ಯಾ: ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆಕೇಳುವ ಪ್ರಸಂಗ ಇರುವದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವದು. ಶುಭ ಸಂಖ್ಯೆ: 1

ತುಲಾ: ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 7

ವೃಶ್ಚಿಕ: ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪಧನಲಾಭವಾದರೂ ಹಳೆಯ ಸಾಲ ತೀರುವದು. ವ್ಯಾಪಾರದಲ್ಲಿ ಅಭಿವೃದ್ಧಿಯಾಗುವದು. ವಿವಾಹ ಅಪೇಕ್ಷಿತರಿಗೆ ಕಂಕಣಬಲ ಕೂಡಿಬರುವದು. ಶುಭ ಸಂಖ್ಯೆ: 8

ಧನು: ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೋರುವುದು, ಅರ್ಥಾರ್ಜನೆಯ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ. ಶುಭ ಸಂಖ್ಯೆ: 4

ಮಕರ: ಹಲವು ರೀತಿಯಿಂದ ಧನಾಗಮನವಿದ್ದು ಐಶ್ವರ್ಯವೃದ್ಧಿ, ಸಂಸಾರ ಸುಖ. ಅಪೇಕ್ಷಿತ ವಸ್ತು, ಪ್ರಾಪ್ತಿ, ಮಿತ್ರಾಗಮನ, ವಿಶೇಷ ಸಂತೋಷ ಪ್ರಸಂಗಗಳು ಒದಗಿ ಬಂದು ಸಂಭ್ರಮವೆನಿಸುತ್ತದೆ. ಶುಭ ಸಂಖ್ಯೆ: 3

ಕುಂಭ: ಹಿರಿಯರ ಮಾರ್ಗದರ್ಶನ ದೊರೆಲಿದೆ. ಆತ್ಮೀಯರೊಂದಿಗೆ ವಾದವಿವಾದ ಮಾಡಬೇಡಿ. ಮದುವೆಯ ಮಾತುಕತೆ ಕೈಗೂಡುವ ಸಾಧ್ಯತೆ ಇದೆ. ವ್ಯವಹಾರಿಕ ಜಾಣತನದಿಂದ ಲಾಭವಾಗಲಿದೆ. ಮನೆಯಲ್ಲಿ ಸಂತಸ ಕಂಡುಬರುವದು. ಶುಭ ಸಂಖ್ಯೆ: 9

ಮೀನ:ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವದು. ತರಕಾರಿ ದಾನ ಮಾಡಿರಿ. ಶುಭ ಸಂಖ್ಯೆ:2

ಬಸವರಾಜ ಗುರೂಜಿ(ಡಾ.ಬಸವರಾಜ ಗುರೂಜಿ ಸಂಪರ್ಕ ಸಂಖ್ಯೆ: 9972848937)

Published On - 6:24 am, Tue, 16 February 21

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us