AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope; ದಿನ ಭವಿಷ್ಯ |ವೃಷಭ ರಾಶಿಯವರಿಗೆ ಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಮಾಘಮಾಸ, ಶಿಶಿರ ಋತು, ಶುಕ್ಲಪಕ್ಷ, ನವಮಿ ತಿಥಿ, ಭಾನುವಾರ, ಫೆಬ್ರವರಿ 21, 2021 ಭವಿಷ್ಯ.

Horoscope; ದಿನ ಭವಿಷ್ಯ |ವೃಷಭ ರಾಶಿಯವರಿಗೆ ಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ
ರಾಶಿ ಭವಿಷ್ಯ
ರಾಜೇಶ್ ದುಗ್ಗುಮನೆ
| Updated By: ಆಯೇಷಾ ಬಾನು|

Updated on:Feb 21, 2021 | 10:37 AM

Share

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಮಾಘಮಾಸ, ಶಿಶಿರ ಋತು, ಶುಕ್ಲಪಕ್ಷ, ನವಮಿ ತಿಥಿ, ಭಾನುವಾರ, ಫೆಬ್ರವರಿ 21, 2021. ರೋಹಿಣಿ ನಕ್ಷತ್ರ, ರಾಹುಕಾಲ: ಸಂಜೆ 4 :51ರಿಂದ ಸಂಜೆ 6:18ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.39. ಸೂರ್ಯಾಸ್ತ: ಸಂಜೆ 6.19.

ದಿನಾಂಕ: 21-02-2021 ರ ಭಾನುವಾರದ ರಾಶಿಭವಿಷ್ಯ

ಮೇಷ: ಪೂರ್ಣವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ. ದಿನದ ಕೆಲಸ ಬೇಸರ ಉಂಟುಮಾಡುವ ಸಾಧ್ಯತೆ ಇದೆ. ಶುಭಸಂಖ್ಯೆ: 8

ವೃಷಭ: ಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ ಸಮಾಧಾನ ಚಿತ್ತದಿಂದ ವರ್ತಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವದು. ಹಾನಿ ಇಲ್ಲ ಆದರೆ ಲಾಭವೂ ಇಲ್ಲದ ಸ್ಥಿತಿ ಇರುವದು. ಶುಭಸಂಖ್ಯೆ: 3

ಮಿಥುನ: ಎಲ್ಲವನ್ನು ಹಗುರವಾಗಿ ಕಾಣುವದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವುದು. ಹಣಕಾಸಿನ ತೊಂದರೆಗಳು ಕಂಡುಬರುವವು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ. ಶುಭಸಂಖ್ಯೆ: 4

ಕರ್ಕ: ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯಪ್ರವೃತ್ತಿಯು ಉತ್ತಮ ಫಲಕೊಡುವದು. ಹಳೆಯ ಬಾಕಿ ವಸೂಲಾಗುವದು. ವ್ಯಾಜ್ಯಗಳು ಅಂತ್ಯಕಾಣುವವು. ಗ್ರಹ ಸೌಖ್ಯವಿರುವದು. ಶುಭಸಂಖ್ಯೆ: 6

ಸಿಂಹ: ಪ್ರಮುಖ ಯೋಜನೆಗಳ ಜವಾಬ್ದಾರಿ ಹೆಚ್ಚುವದು. ಆರ್ಥಿಕ ಅಭಿವೃದ್ಧಿ ಕಂಡುಬರುವದು. ಸ್ನೇಹಿತರ ಭಿನ್ನಾಭಿಪ್ರಾಯ ಬಗೆಹರಿಯುವದು. ಶತೃಗಳೂ ಸೌಮ್ಯರಾಗುವ ಕಾಲ ಇರುವದರಿಂದ ಅಪೇಕ್ಷಿತ ಕಾರ್ಯವನ್ನು ಸಾಧಿಸುವಿರಿ. ಶುಭಸಂಖ್ಯೆ: 9

ಕನ್ಯಾ: ಮಹತ್ವಾಕಾಂಕ್ಷೆಗೆ ಪೂರಕವಾದ ವಾತಾವರಣ ಇರುವದು. ಬಂಧುಮಿತ್ರರ ಸಹಕಾರ ದೊರೆಯುವದು. ಉದ್ಯೋಗದಲ್ಲಿ ಪ್ರಗತಿ ಕಂಡುಬರುವದು. ಮನೆಯಲ್ಲಿ ಸಂತಸ ಮೂಡುವದು. ಶುಭಕಾರ್ಯಗಳು ಜರುಗುವವು. ಶುಭಸಂಖ್ಯೆ: 5

ತುಲಾ: ಅಪೇಕ್ಷಿತ ಸ್ಥಾನಮಾನಗಳು ದೊರೆಯುವವು. ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಭಂಗವಿಲ್ಲ. ಆದಾಯಕ್ಕಿಂ ಅಧಿಕ ಖರ್ಚು ಇರುವದು. ಶುಭಸಂಖ್ಯೆ: 1

ವೃಶ್ಚಿಕ: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭಸಂಖ್ಯೆ: 7

ಧನು: ವ್ಯಯಕ್ತಿಕ ಧನಲಾಭ, ಶುಭ ಸಮಾರಂಭ, ಸರಕಾರಿ ಕೆಲಸಗಳು ಆಗುವವು. ಉದ್ಯೋಗದಲ್ಲಿ ಉನ್ನತಿ ಇರುವದು. ವ್ಯಾಪಾರದಲ್ಲಿ ಹಣಹೂಡಿಕೆಗೆ ಉತ್ತಮ. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವದು. ಶುಭಸಂಖ್ಯೆ: 8

ಮಕರ: ವ್ಯಥಾ ಚಿಂತೆ, ತಪ್ಪು ಕಲ್ಪನೆ, ನಿಷ್ಠುರ ಮಾತುಗಳನ್ನು ಕೇಳುವ ಸಂಭವ, ಜನ್ಮಸ್ಥ ಶುಕ್ರ ಇರುವದರಿಂದ ಆರ್ಥಿಕ ಸುಭದ್ರತೆ ಇರುವದು. ವಿದ್ಯಾರ್ಥಿಗಳಿಗೆ ಪರಿಶ್ರಮ ಅವಶ್ಯಕ. ಮನೆಯಲ್ಲಿ ಸಂತೋಷವಿರುವದು. ಗೋಸೇವೆಯಿಂದ ಕಷ್ಟಪರಿಹಾರ. ಶುಭಸಂಖ್ಯೆ: 3

ಕುಂಭ: ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವದು. ಉತ್ಸಾಹ ಮೂಡುವದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ. ಶುಭಸಂಖ್ಯೆ: 5

ಮೀನ: ಅಪೇಕ್ಷಿಸಿದ ಕಾರ್ಯಗಳು ನಿರ್ವಿಘ್ನವಾಗಿ ಪೂರ್ಣಗೊಳ್ಳುವವು ಆಸ್ತಿ ವಿವಾದ ಸೃಜನರ ಅತೃಪ್ತಿ ಮುಂತಾದ ಕಲಹಗಳು ಪರಿಹಾರವಾಗಿ ಸುಖ,ಸಂತೃಪ್ತಿಯ ಯೋಗವಿದೆ. ವಿದ್ಯಾರ್ಥಿಗಳು ಉನ್ನತ ಮಟ್ಟದ ಫಲಿತಾಂಶವನ್ನು ಹೊಂದುವರು.ಸಭಾಸಮಾಜ ಕೀರ್ತಿ ಲಭಿಸುವುದು. ಶುಭಸಂಖ್ಯೆ: 6

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Published On - 6:34 am, Sun, 21 February 21

ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಅಪಘಾತ, ಓರ್ವ ಸಾವು
ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಅಪಘಾತ, ಓರ್ವ ಸಾವು
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
ರೀಲ್ಸ್ ಮಾಡುವಾಗ ಟ್ರ್ಯಾಕ್ಟರ್ ಪಲ್ಟಿ, ಯುವಕ ಸಾವು: ವಿಡಿಯೋ ವೈರಲ್
ರೀಲ್ಸ್ ಮಾಡುವಾಗ ಟ್ರ್ಯಾಕ್ಟರ್ ಪಲ್ಟಿ, ಯುವಕ ಸಾವು: ವಿಡಿಯೋ ವೈರಲ್
ಮ್ಯಾಟ್ ಹೆನ್ರಿ ಮಾರಕ ದಾಳಿ: 20 ಎಸೆತಗಳಲ್ಲಿ 16 ಡಾಟ್ ಬಾಲ್, 2 ವಿಕೆಟ್
ಮ್ಯಾಟ್ ಹೆನ್ರಿ ಮಾರಕ ದಾಳಿ: 20 ಎಸೆತಗಳಲ್ಲಿ 16 ಡಾಟ್ ಬಾಲ್, 2 ವಿಕೆಟ್
Daily Devotional: ಅನಾರೋಗ್ಯದಿಂದ ಪಾರಾಗಲು ಏನು ಮಾಡಬೇಕು ಗೊತ್ತಾ?
Daily Devotional: ಅನಾರೋಗ್ಯದಿಂದ ಪಾರಾಗಲು ಏನು ಮಾಡಬೇಕು ಗೊತ್ತಾ?