ದಿನಭವಿಷ್ಯ | ಜನವರಿ 26, 2021

ಜನವರಿ 26, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನಭವಿಷ್ಯ.

  • TV9 Web Team
  • Published On - 6:11 AM, 26 Jan 2021
ದಿನ ಭವಿಷ್ಯ

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಪುಷ್ಯಮಾಸ, ಹೇಮಂತ ಋತು, ಶುಕ್ಲಪಕ್ಷ, ತ್ರಯೋದಶಿ ತಿಥಿ, ಮಂಗಳವಾರ, ಜನವರಿ 26, 2021. ಆರ್ದ್ರೆ ನಕ್ಷತ್ರ, ರಾಹುಕಾಲ: ಇಂದು ಅಪರಾಹ್ನ 3:17ರಿಂದ 4:41ಗಂಟೆವರೆಗೆ. ಗುಳಿಕ ಕಾಲ ಮಧ್ಯಾಹ್ನ 12:28 ಗಂಟೆ ಇಂಮಧ್ಯಾಹ್ನ 1:52 ಗಂಟೆವರೆಗೆ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.49. ಸೂರ್ಯಾಸ್ತ: ಸಂಜೆ 7 ಗಂಟೆ.

ತಾ.26-01-2021 ರ ಮಂಗಳವಾರದ ರಾಶಿಭವಿಷ್ಯ

ಮೇಷ: ಹಿತವಾದ ಮಾತುಗಳು ಗೌರವವನ್ನು ವೃದ್ಧಿಸುತ್ತದೆ. ಆರ್ಥಿಕ ಸಂಕಷ್ಟಗಳು ಎದುರಾಗುವವು. ಸಮಾಧಾನ ಚಿತ್ತದಿಂದ ಕಾರ್ಯ ನಿರ್ವಹಿಸಿರಿ.ಹಿತೈಷಿಗಳಂತೆ ವರ್ತಿಸುವವರಿಂದ ದೂರವಿರಿ. ಶುಭ ಸಂಖ್ಯೆ:6

ವೃಷಭ: ನಿಶ್ಚಿತ ಆರ್ಥಿಕ ಸ್ಥಿತಿ ಇರುವದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭ ಸಂಖ್ಯೆ: 9

ಮಿಥುನ: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಶುಭ ಸಂಖ್ಯೆ: 1

ಕರ್ಕ: ಸಹನೆ ಇಲ್ಲದ ಆತುರದ ನಡೆಯಿಂದ ಹಾನಿ ಸಂಭವ ಎಚ್ಚರಿಕೆ ವಹಿಸಿರಿ. ಅನೀರೀಕ್ಷಿತವಾಗಿ ಬರುವ ವಿಘ್ನಗಳು ತಾವಾಗಿಯೇ ಪರಿಹಾರ ಕಾಣುವವು. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಶುಭ ಸಂಖ್ಯೆ: 4

ಸಿಂಹ: ಯೋಜನಾಬದ್ಧ ಕೆಲಸಗಳೂ ಕೂಡ ಮುಂದೂಡುವ ಪ್ರಸಂಗವಿದೆ. ಆಪ್ತವಲಯದಲ್ಲಿ ಸಮಾಲೋಚಿಸಿರಿ. ಅನಿವಾರ್ಯ ಕರ್ತವ್ಯಗಳಿಗೆ ಸಮಯ ಹೊಂದಾಣಿಕೆ ಮಾಡುವ ಸಾಧ್ಯತೆ ಇದೆ. ಆರ್ಥಕ ಸಂಕಷ್ಟಗಳು ಎದುರಾಗುವವು. ಶುಭ ಸಂಖ್ಯೆ: 7

ಕನ್ಯಾ: ಹೊಸ ಆಲೋಚನೆಯೊಂದು ಕಾರ್ಯರೂಪಕ್ಕೆ ಬರುವದು. ಸಹವರ್ತಿಗಳ ಅಸಹಕಾರ ಇದ್ದರೂ ತೊಂದರೆ ಆಗಲಾರದು. ಅನಪೇಕ್ಷಿತ ಸ್ಥಾನ ಬದಲಾವಣೆ ಆಗುವ ಸಾಧ್ಯತೆ ಇದೆ. ಸರಿಯಾದ ಧ್ಯೇಯದಿಂದ ಸಮಾಧಾನ ಇರುವದು. ಶುಭ ಸಂಖ್ಯೆ 3

ತುಲಾ: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭ ಸಂಖ್ಯೆ:8

ವೃಶ್ಚಿಕ: ತಾಪತ್ರಯಗಳೆಲ್ಲ ದೂರವಾಗಿದ್ದು ಆರ್ಥಿಕ ಸ್ಥಿತಿ ಸುಧಾರಣೆಯಾಗುತ್ತದೆ. ವ್ಯಾಪಾರಾದಿ ಉದ್ಯಮಗಳು ಇಷ್ಟದಂತೆ ನಡೆಯುತ್ತದೆ. ಕೆಲವೊಮ್ಮೆ ಸಣ್ಣ ವಿಷಯಗಳಿಗೂ ಭಯ ತೋರಿದರೂ ಹಾನಿಯಿಲ್ಲ. ಶುಭ ಸಂಖ್ಯೆ: 6

ಧನು: ದಿನೇ ದಿನೇ ಅಭಿವೃದ್ಧಿ ತೋರಿ ವ್ಯವಹಾರಗಳೆಲ್ಲಾ ಇಷ್ಟದಂತೆ ನಡೆಯುತ್ತದೆ. ಹಲವು ರೀತಿಯಿಂದ ಧನಾಗಮನ ತೋರಿಬರುತ್ತದೆ. ಐಶ್ವರ್ಯ, ಮುಟ್ಟಿದ್ದು ಚಿನ್ನವಾಗುವ ಕಾಲ. ಸ್ಥಿರಾಸ್ತಿ ಪ್ರಾಪ್ತಿ. ಅಲ್ಪ ಅನಾರೋಗ್ಯ ತೋರಿದರೂ ಕ್ಷಣಿಕವೆನ್ನಬಹುದು. ಶುಭ ಸಂಖ್ಯೆ: 5

ಮಕರ: ವ್ಯಾಪಾರಾದಿ ಉದ್ಯಮಗಳಲ್ಲಿ ಪ್ರಗತಿಯಿದ್ದು ಧನಲಾಭ, ಐಶ್ವರ್ಯವೃದ್ಧಿಯಿದೆ. ಆದರೆ ವ್ಯವಹಾರಿಕ ಕಿರಿಕಿರಿ ಇರುವದು. ಅನಿರೀಕ್ಷಿತ ಧನಲಾಭವೂ ಇದೆ. ಕೈಗೊಂಡ ಕಾರ್ಯಗಳಿಗೆ ವಿಘ್ನ ತೋರಿದರೂ ನೆರವೇರುತ್ತದೆ. ಶುಭ ಸಂಖ್ಯೆ:1

ಕುಂಭ: ಮಹತ್ತರ ಯೋಜನೆಗಳು ಕಾರ್ಯಗತವಾಗಲು ಪ್ರಾಜ್ಞರ ಮಾರ್ಗದರ್ಶನ. ಜೀವನದ ಏಳಿಗೆಗೆ ಚಿಂತನೆ. ಕೆಲಸದ ನಡುವೆ ಮತ್ತೊಂದು ಕಾರ್ಯ ವಹಿಸಿಕೊಳ್ಳಲು ಚೈತನ್ಯ. ಮಹಿಳೆಯರು ಪಶ್ಚಾತಾಪಕ್ಕೆ ಅವಕಾವಿಲ್ಲದಂತೆ ನಡೆದುಕೊಳ್ಳುವುದು ಒಳಿತು. ಶುಭ ಸಂಖ್ಯೆ: 3

ಮೀನ: ಏಕಾಂಗಿತನದ ಬೇಸರ ಪರಿಸರದಿಂದ ಹೊರಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನ: ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದೀತು. ಶುಭ ಸಂಖ್ಯೆ: 9

ಡಾ. ಬಸವರಾಜ್ ಗುರೂಜಿ

(ಡಾ.ಬಸವರಾಜ ಗುರೂಜಿ ಸಂಪರ್ಕ ಸಂಖ್ಯೆ: 9972848937)