Horoscope ದಿನ ಭವಿಷ್ಯ | ಮೇಷ ರಾಶಿಯವರಿಗಿಂದು ಗುರಿ ಸಾಧನೆಗೆ ಸೂಕ್ತ ಸಮಯ, ಪ್ರಯತ್ನಿಸಿದ ಕಾರ್ಯ ಕೈಗೂಡುತ್ತೆ
Horoscope Today ಫೆಬ್ರವರಿ 07, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಪುಷ್ಯಮಾಸ, ಹೇಮಂತ ಋತು, ಕೃಷ್ಣ ಪಕ್ಷ, ದಶಮಿ ತಿಥಿ, ಭಾನುವಾರ, ಫೆಬ್ರವರಿ 7, 2021. ಜ್ಯೇಷ್ಠ ನಕ್ಷತ್ರ, ರಾಹುಕಾಲ: ಇಂದು ಸಂಜೆ 4.47 ರಿಂದ ರಾತ್ರಿ 6.13. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.46. ಸೂರ್ಯಾಸ್ತ: ಸಂಜೆ 6.14.
ತಾ. 07-02-2021 ರ ಭಾನುವಾರದ ರಾಶಿ ಭವಿಷ್ಯ
ಮೇಷ: ಗುರಿ ಸಾಧನೆಗೆ ಇದು ಸೂಕ್ತ ಸಮಯ. ಪ್ರಯತ್ನಿಸಿದ ಕಾರ್ಯಗಳು ಕೈಗೂಡುವುವು. ವಿದ್ಯಾರ್ಥಿಗಳಿಗೆ ಉನ್ನತ ಪ್ರಶಸ್ತಿ ದೊರಕುವ ಸಾಧ್ಯತೆ ಇರುವುದು. ಶುಭ ಸಂಖ್ಯೆ: 3
ವೃಷಭ: ಉದರಬೇನೆ ಬರುವ ಸಾಧ್ಯತೆ ಇದೆ, ಆರೋಗ್ಯ ಬಗ್ಗೆ ಕಾಳಜಿ ವಹಿಸಿ. ಬಂಧುಮಿತ್ರರ ಭೇಟಿ, ಮನೆಯಲ್ಲಿ ಮಂಗಳ ಕಾರ್ಯ ಜರುಗುವ ಯೋಗವಿದೆ. ಕೋರ್ಟ್ನಲ್ಲಿರುವ ವ್ಯಾಜ್ಯಗಳು ಕೊನೆಗೊಳ್ಳುವವು. ಶುಭ ಸಂಖ್ಯೆ: 9
ಮಿಥುನ: ಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ ಸಮಾಧಾನ ಚಿತ್ತದಿಂದ ವರ್ತಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವುದು. ಹಾನಿ ಇಲ್ಲ ಆದರೆ ಲಾಭವೂ ಇಲ್ಲದ ಸ್ಥಿತಿ ಇರುವುದು. ಶುಭ ಸಂಖ್ಯೆ: 4
ಕಟಕ: ಮಾತಿನಂತೆಯೇ ಎಲ್ಲವೂ ನಡೆಯುವುದಿಲ್ಲ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಉದಯೋನ್ಮುಖ ಪ್ರತಿಭೆಗಳಿಗೆ ಅವಕಾಶ ದೊರೆಯುವುದು. ಲಾಭದಾಯಕ ಹುದ್ದೆ ದೊರೆಯುವುದು. ಶುಭ ಸಂಖ್ಯೆ: 6
ಸಿಂಹ: ವಿವಿಧ ಮೂಲಗಳಿಂದ ಸಹಾಯ ದೊರೆಯುವುದು. ಉದ್ಯೋಗದಲ್ಲಿ ಅಭಿವೃದ್ಧಿ ಇರುವುದು. ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ. ಲೆಕ್ಕಾಚಾರ ತಪ್ಪದಂತೆ ಎಚ್ಚರವಹಿಸಿರಿ. ಮನೆಯಲ್ಲಿ ಮಂಗಳ ಕಾರ್ಯ ಜರುಗುವುದು. ಶುಭ ಸಂಖ್ಯೆ: 1
ಕನ್ಯಾ: ವ್ಯವಹಾರಿಕ ಸಂಪರ್ಕಗಳು ಹೆಚ್ಚುವವು ಅದರಂತೆ ಧನದ ಮೂಲಗಳೂ ಹೆಚ್ಚುವವು. ಸಾಲ ಮರುಪಾವತಿಯಾಗುವುದು. ಮನೆಯಲ್ಲಿ ನೆಮ್ಮದಿ ಇರುವುದು. ಅವಿವಾಹಿತರಿಗೆ ಕಂಕಣಬಲ ಕೂಡಿಬರುವುದು. ಶುಭ ಸಂಖ್ಯೆ: 7
ತುಲಾ: ಪೂರ್ವತಯಾರಿ ಇಲ್ಲದ ಕೆಲಸವನ್ನೂ ಸಕಾಲಕ್ಕೆ ಮುಗಿಸುವಿರಿ. ಅನಿಯಮಿತ ಬದುಕು ಇರುವುದು. ಮೇಲಧಿಕಾರಿಗಳ ಒತ್ತಡ ಬೇಸರ ತರುವುದು. ಕಾರ್ಯಕ್ಷೇತ್ರದಲ್ಲಿ ಗೌರವ ಪ್ರಾಪ್ತಿಯಾಗುವುದು. ಶ್ರಮಕ್ಕೆ ತಕ್ಕ ಲಾಭ ದೊರೆಯುವುದು. ಶುಭ ಸಂಖ್ಯೆ: 2
ವೃಶ್ಚಿಕ: ಅಭದ್ರತೆ ಕಾಡುವ ಸಂಭವವಿದೆ. ಸ್ಥಾನಚ್ಯುತಿಯಾಗುವ ಸಾಧ್ಯತೆ ಇದೆ. ಸಹೋದರರಲ್ಲಿ ಕಲಹ. ಸ್ಥಿರಾಸ್ತಿಯು ಹಾನಿಯಾಗುವ ಯೋಗವಿದೆ. ಕೃಷಿಕರಿಗೆ ಹಾಗೂ ವ್ಯಾಪಾರಿಗಳಿಗೆ ಆರ್ಥಿಕ ಸಂಕಷ್ಟ ಇರುವುದು. ಶುಭ ಸಂಖ್ಯೆ: 8
ಧನು: ಭವಿಷ್ಯತ್ತಿನ ಉಪೇಕ್ಷೆ ಮಾಡದೇ ಉಳಿತಾಯಕ್ಕೆ ಗಮನಹರಿಸಿರಿ. ಆಪತ್ತುಗಳ ಪರಿಹಾರಕ್ಕಾಗಿ ವ್ಯಥಾ ತಿರುಗಾಟದ ಸಂಭವವಿದೆ. ಹಿರಿಯರ ಸಲಹೆಗೆ ತಕ್ಕಂತೆ ಮುಂದುವರೆಯಿರಿ. ಶುಭ ಸಂಖ್ಯೆ: 4
ಮಕರ: ಉದಾಸೀನತೆಯಿಂದ ಕಾರ್ಯಹಾನಿ ಸಂಭವ. ಅನುಮಾನಗಳು ಮೂಡಿ ಕೈಗೊಂಡ ಕಾರ್ಯಕ್ಕೆ ವಿಘ್ನ ಉಂಟಾಗುವ ಸಂಭವವಿದೆ. ಸಾಮಾಜಿಕ ಗೌರವನ್ನು ಉಳಿಸಿಕೊಳ್ಳುವಲ್ಲಿ ಸಫಲರಾಗುವಿರಿ. ಶುಭ ಸಂಖ್ಯೆ: 6
ಕುಂಭ: ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಯೋಗ್ಯತೆಯ ಮೀರಿ ದುಡಿಯುವ ಕಾರ್ಯಭಾರವಿರುವುದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಯೋಗವಿದೆ. ಶುಭ ಸಂಖ್ಯೆ: 2
ಮೀನ: ಸ್ವೀಕೃತ ಕಾರ್ಯವು ಫಲಪ್ರದವಾಗಿ ಗೌರವ ಆದರಗಳು ಪ್ರಾಪ್ತವಾಗುವವು. ಈ ಸಮಯದಲ್ಲಿ ಉತ್ತಮ ಧನಾರ್ಜನೆ ಯಾಗುವುದು, ವಿದೇಶ ಪ್ರಯಾಣ, ಪ್ರೇಮ ಸಂಭಾಷಣೆ, ದೇವ ಬ್ರಾಹ್ಮಣ, ಧರ್ಮ ಕಾರ್ಯಗಳು ನಡೆಯುವವು. ಸ್ಥಿರಾಸ್ತಿಗೆ ಸಂಬಂಧಿಸಿದ ವ್ಯಾಜ್ಯ ಪರಿಹಾರವಾಗುವವು. ಶುಭ ಸಂಖ್ಯೆ: 9

ಬಸವರಾಜ ಗುರೂಜಿ
(ಡಾ.ಬಸವರಾಜ ಗುರೂಜಿ ಸಂಪರ್ಕ ಸಂಖ್ಯೆ: 99728 48937)