AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನ ಭವಿಷ್ಯ | ಈ ರಾಶಿಯವರಿಗೆ ಅತಿಯಾದ ಮಾತು ಅಪಾಯಕ್ಕೆ ಕಾರಣವಾಗಬಹುದು

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಮಾಘಮಾಸ, ಶಿಶಿರ ಋತು , ಶುಕ್ಲಪಕ್ಷ, ಬಿದಿಗೆ ತಿಥಿ, ಶನಿವಾರ, ಫೆಬ್ರವರಿ 13, 2021. ಶತಭಿಷೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 9:36 ರಿಂದ ಬೆಳಿಗ್ಗೆ 11:2ವರೆಗೆ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.43. ಸೂರ್ಯಾಸ್ತ: ಸಂಜೆ 6.16.

ದಿನ ಭವಿಷ್ಯ | ಈ ರಾಶಿಯವರಿಗೆ ಅತಿಯಾದ ಮಾತು ಅಪಾಯಕ್ಕೆ ಕಾರಣವಾಗಬಹುದು
ದಿನ ಭವಿಷ್ಯ
ರಾಜೇಶ್ ದುಗ್ಗುಮನೆ
| Edited By: |

Updated on:Feb 13, 2021 | 6:35 PM

Share

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಮಾಘಮಾಸ, ಶಿಶಿರ ಋತು , ಶುಕ್ಲಪಕ್ಷ, ಬಿದಿಗೆ ತಿಥಿ, ಶನಿವಾರ, ಫೆಬ್ರವರಿ 13, 2021. ಶತಭಿಷೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 9:36 ರಿಂದ ಬೆಳಿಗ್ಗೆ 11:2ವರೆಗೆ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.43. ಸೂರ್ಯಾಸ್ತ: ಸಂಜೆ 6.16.

ದಿನಾಂಕ 13-02-2021, ಶನಿವಾರದ ರಾಶಿಭವಿಷ್ಯ

ಮೇಷ ಗುರಿಸಾಧನೆಗೆ ಇದು ಸೂಕ್ತ ಸಮಯ. ಪ್ರಯತ್ನಿಸಿದ ಕಾರ್ಯಗಳು ಕೈಗೂಡುವವು. ವಿದ್ಯಾರ್ಥಿಗಳಿಗೆ ಉನ್ನತ ಪ್ರಶಸ್ತಿ ದೊರಕುವ ಸಾಧ್ಯತೆ ಇರುವದು. ಶುಭ ಸಂಖ್ಯೆ: 8

ವೃಷಭ ಅನಿರೀಕ್ಷಿತ ಧನಲಾಭವಾಗುವದು. ಬುದ್ಧಿಕೌಶಲ್ಯದಿಂದ ಉದ್ಯೋಗದಲ್ಲಿ ಬಡ್ತಿ ಕಂಡುಬರುವದು. ಸಿಟ್ಟಿನ ಸ್ವಭಾವದಿಂದ ತೊದರೆಯಾಗುವ ಸಾಧ್ಯತೆ ಇದೆ. ಕಾರ್ಯಕ್ಷಮತೆಗೆ ತಕ್ಕ ಫಲ ದೊರೆಯುವದು. ಶುಭ ಸಂಖ್ಯೆ: 6

ಮಿಥುನ ಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ. ವೃತ್ತಿಕೌಶಲ್ಯದಿಂದ ಅಸಾಧ್ಯವಾದ ಕಾರ್ಯವನ್ನೂ ಸಾಧಿಸುವಿರಿ. ಧನಮೂಲಗಳು ಹೆಚ್ಚಾಗುವವು.ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವದು. ಶುಭ ಸಂಖ್ಯೆ: 1

ಕರ್ಕ ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಯೋಗ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಯೋಗವಿದೆ. ಶುಭ ಸಂಖ್ಯೆ: 4

ಸಿಂಹ ವಸ್ತು-ವಾಹನ-ಆಸ್ತಿ ಖರೀದಿ ಯೋಗವಿದೆ.ಅನವಶ್ಯಕ ಅಲೆದಾಟದ ಸಾದ್ಯತೆ ಇದೆ. ಮನೆಯ ಹಿರಿಯರ ಆರೋಗ್ಯದ ಚಿಂತೆ ಇರುವದು. ಬುದ್ಧಿವಂತಿಕೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ. ಶುಭ ಸಂಖ್ಯೆ: 3

ಕನ್ಯಾ ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆಯ ಆಗುವ ಯೋಗವಿದೆ. ಶುಭ ಸಂಖ್ಯೆ: 9

ತುಲಾ ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವದು. ವಿದೇಶ ಪ್ರಯಾಣದ ಯೋಗವಿದೆ. ಶುಭ ಸಂಖ್ಯೆ: 5

ವೃಶ್ಚಿಕ ಅಪೇಕ್ಷಿತ ಸ್ಥಾನಮಾನಗಳು ದೊರೆಯುವವು. ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಭಂಗವಿಲ್ಲ. ಆದಾಯಕ್ಕಿಂ ಅಧಿಕ ಖರ್ಚು ಇರುವದು. ಶುಭ ಸಂಖ್ಯೆ: 6

ಧನು ವೃತ್ತಿಪರೆತೆಯಿಂದ ಕಾರ್ಯ ಕೈಗೂಡುವದು. ಪರಿವಾರದೊಂದಿಗೆ ದೂರ ಪ್ರವಾಸದ ಯೋಗವಿದೆ. ಉತ್ತಮವಾದ ಸಮಯ ಇರುವದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವದು. ಶುಭ ಸಂಖ್ಯೆ: 1

ಮಕರ ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವದು. ಮನೋಚಿಂತಿತ ಕಾರ್ಯ ಕೈಗೂಡುವದು. ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವದು. ಪರರ ಸಹಾಯದ ಅನಿವಾರ್ಯತೆ ಇರಲಾರದು. ಆರೋಗ್ಯದ ಕಾಳಜಿ ಇರಲಿ. ಶುಭ ಸಂಖ್ಯೆ: 2

ಕುಂಭ ಶುಭ ಕರ್ಮ ಸಂಪ್ರಾಪ್ತಿಯಿದ್ದು, ಗುರುವರ್ಗ ಸಂತೋಷ, ಸಂಸಾರ ಸುಖ. ನೂತನ ಮಿತ್ರಭೇಟಿ, ಅರ್ಥಾರ್ಜನೆಯು ಉತ್ತಮವಿದೆ. ಆದರೂ ಗೃಹಕಲಹ, ಬಂಧು ಜನರಲ್ಲಿ ಅಸಮಾಧಾನ ಕಂಡುಬರುವದು. ಶುಭ ಸಂಖ್ಯೆ: 3

ಮೀನ ನಿರೀಕ್ಷಿತ ಸರ್ವಕಾರ್ಯಗಳು ನೆರವೆರುತ್ತದೆ. ಆರ್ಥಿಕ ಮಟ್ಟವೂ ಏರಿ, ಸ್ಥಿರಪ್ರಾಪ್ತಿ, ಸಂಸಾರಸುಖ ಸಂಬ್ರಮಗಳಿರುತ್ತದೆ. ಶುಭ ಕಾರ್ಯ ಪ್ರಯತ್ನ ಫಲಕೊಡುತ್ತದೆ. ಶುಭ ಸಂಖ್ಯೆ: 7

basavaraj guruji

ಬಸವರಾಜ ಗುರೂಜಿ(ಡಾ.ಬಸವರಾಜ ಗುರೂಜಿ ಸಂಪರ್ಕ ಸಂಖ್ಯೆ: 9972848937)

Published On - 7:04 am, Sat, 13 February 21

ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ