AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope ದಿನ ಭವಿಷ್ಯ | ಮಿಥುನ ರಾಶಿಯವರಿಂದು: ಅಪಮಾನ, ಅಪವಾದದಂತಹ ಸಮಸ್ಯೆಗೆ ಸಿಲುಕದಂತೆ ಜಾಗರೂಕರಾಗಿರಬೇಕು

Today Horoscope ಫೆಬ್ರವರಿ 17, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope ದಿನ ಭವಿಷ್ಯ | ಮಿಥುನ ರಾಶಿಯವರಿಂದು: ಅಪಮಾನ, ಅಪವಾದದಂತಹ ಸಮಸ್ಯೆಗೆ ಸಿಲುಕದಂತೆ ಜಾಗರೂಕರಾಗಿರಬೇಕು
ದಿನ ಭವಿಷ್ಯ
ಆಯೇಷಾ ಬಾನು
ಆಯೇಷಾ ಬಾನು|

Updated on: Feb 17, 2021 | 6:43 AM

Share

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಶುಕ್ಲಪಕ್ಷ, ಪಂಚಮಿ ತಿಥಿ, ಬುಧವಾರ, ಫೆಬ್ರವರಿ 17, 2021. ಅಶ್ವಿನಿ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 12.29ರಿಂದ ಮಧ್ಯಾಹ್ನ 1.56. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.41. ಸೂರ್ಯಾಸ್ತ: ಸಂಜೆ 6.18.

ತಾ.17-02-2021 ರ ಬುಧವಾರದ ರಾಶಿಭವಿಷ್ಯ

ಮೇಷ: ದೂರಾಲೋಚನೆ ಮಾಡಿ ಕಾರ್ಯ ನಿರ್ವಹಿಸಿರಿ. ವೃತ್ತಿಪರೆತೆಯಿಂದ ಕಾರ್ಯ ಕೈಗೂಡುವುದು. ಪರಿವಾರದೊಂದಿಗೆ ದೂರ ಪ್ರವಾಸದ ಯೋಗವಿದೆ. ನೆಮ್ಮದಿಯ ಜೀವನ ಇರುವುದು. ಉದ್ಯೋಗವನ್ನು ವಿಸ್ತರಿಸುವ ಕಾಲ ಇರುವುದು. ಶುಭ ಸಂಖ್ಯೆ: 1

ವೃಷಭ: ಹಣಕಾಸಿನ ವ್ಯವಹಾರದಲ್ಲಿ ಧ್ಯರ್ಯದಿಂದ ಕಾರ್ಯ ಸಾಧನೆ. ಅಪೇಕ್ಷಸದ ಲಾಭ ಸಂಭವ. ಗಡಿಬಿಡಿಯ ವಾತಾವರಣ, ಬಿಡುವಿಲ್ಲದ ಕಾರ್ಯ, ಮಿತ್ರರೊಂದಿಗೆ ಜಟಾಪಟಿ ಸಂಭವ, ದೀಪದಾನ ಮಾಡಿರಿ. ಶುಭ ಸಂಖ್ಯೆ: 7

ಮಿಥುನ: ಅಪಮಾನ, ಅಪವಾದದಂತಹ ಸಮಸ್ಯೆಗೆ ಸಿಲುಕದಂತೆ ಜಾಗರೂಕರಾಗಿರಿ. ಈ ಸಮಯದಲ್ಲಿ ಮಾತನಾಡುವ ಬದಲು ಮಾತು ಕೇಳುವುದು ಉತ್ತಮ. ಮಕ್ಕಳು ಶಾಲಾ ಕಾಲೇಜುಗಳಲ್ಲಿ ಸಾಧನೆ ತೋರುವರು. ಶುಭ ಸಂಖ್ಯೆ: 4

ಕರ್ಕ: ದೂರ ಪ್ರಯಾಣದ ಅವಶ್ಯಕತೆ ಕಂಡುಬರುವುದು. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ. ಅನೇಕ ರೀತಿಯ ಸೌಭಾಗ್ಯಗಳು ದೊರೆಯುವವು. ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್, ಮಶಿನರಿಗಳಿಂದ ತೊಂದರೆ ಸಾಧ್ಯತೆ. ಶುಭ ಸಂಖ್ಯೆ: 6

ಸಿಂಹ: ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ. ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವುದು. ಶುಭ ಸಂಖ್ಯೆ: 9

ಕನ್ಯಾ: ಅಪೇಕ್ಷಿತ ಸ್ಥಾನಮಾನಗಳು ದೊರೆಯುವವು. ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಭಂಗವಿಲ್ಲ. ಆದಾಯಕ್ಕಿಂತ ಅಧಿಕ ಖರ್ಚು ಇರುವುದು. ಶುಭ ಸಂಖ್ಯೆ: 2

ತುಲಾ: ಭವಿಷ್ಯತ್ತಿನ ಉಪೇಕ್ಷೆ ಮಾಡದೇ ಉಳಿತಾಯಕ್ಕೆ ಗಮನಹರಿಸಿರಿ. ಆಪತ್ತುಗಳ ಪರಿಹಾರಕ್ಕಾಗಿ ವ್ಯಥಾ ತಿರುಗಾಟದ ಸಂಭವವಿದೆ. ಹಿರಿಯರ ಸಲಹೆಗೆ ತಕ್ಕಂತೆ ಮುಂದುವರೆಯಿರಿ. ಶುಭ ಸಂಖ್ಯೆ: 5

ವೃಶ್ಚಿಕ: ನಿಧಾನವಾಗಿ ಕಾರ್ಯಸಿದ್ಧಿಯಾಗುವುದು. ಮಕ್ಕಳಲ್ಲಿ ಹೊಸಹುರುಪು ಕಂಡು ಬರುವುದು. ವ್ಯಾಪಾರಿಗಳಿಗೆ ಮಧ್ಯಮಫಲ. ಸೀಮಿತ ಆದಾಯ, ಸೀಮಿತ ಕಾರ್ಯಗಳಿಂದ ಬೇಸರ ಇರುವುದು. ಮಂದಗತಿಯ ಕೆಲಸಗಳು ನಿರಾಸೆ ಮೂಡಿಸುವ ಸಾಧ್ಯತೆ ಇದೆ. ಶಾಂತಚಿತ್ತರಾಗಿ ವ್ಯವಹರಿಸಿರಿ. ಶುಭ ಸಂಖ್ಯೆ: 8

ಧನು: ಹೊಸ ಆಲೋಚನೆಯೊಂದು ಕಾರ್ಯರೂಪಕ್ಕೆ ಬರುವುದು. ಸಹವರ್ತಿಗಳ ಅಸಹಕಾರ ಇದ್ದರೂ ತೊಂದರೆ ಆಗಲಾರದು. ಅನಪೇಕ್ಷಿತ ಸ್ಥಾನ ಬದಲಾವಣೆ ಆಗುವ ಸಾಧ್ಯತೆ ಇದೆ. ಸರಿಯಾದ ಧ್ಯೇಯದಿಂದ ಸಮಾಧಾನ ಇರುವುದು. ಶುಭ ಸಂಖ್ಯೆ: 3

ಮಕರ: ಸ್ವಪ್ರತಿಷ್ಟೆ ಬಿಟ್ಟು ಬಲ್ಲವರ ಸಹಾಯ ಪಡೆಯಿರಿ. ಮರೆತು ಹೋದ ವಸ್ತು ಲಾಭದಾಯಕವಾಗಿ ಪರಿಣಮಿಸುವದು. ಹಳೆಯ ಮಿತ್ರರ ಒಡನಾಟ ಸಂತಸ ತರುವುದು. ಆರ್ಥಿಕ ಸ್ಥಿತಿಯಲ್ಲಿ ಬೆಳವಣಿಗೆ ಇರುವುದು. ಶುಭ ಸಂಖ್ಯೆ: 1

ಕುಂಭ: ಕೈಹಾಕಿದ ಕೆಲಸಗಳು ನಿರಾತಂಕವಾಗಿ ಮುಂದುವರೆಯುವವು. ಉತ್ತಮವಾದ ಸಮಯ ಇರುವದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಹೊಸ ಯೋಜನೆಗಳಿಗೆ ಚಾಲನೆ ದೊರೆಯುವುದು. ಶುಭ ಸಂಖ್ಯೆ: 7

ಮೀನ: ಹಿತವಾದ ಮಾತುಗಳು ಗೌರವವನ್ನು ವೃದ್ಧಿಸುವವು. ಆರ್ಥಿಕ ಸಂಕಷ್ಟಗಳು ಎದುರಾಗುವವು. ಸಮಾಧಾನ ಚಿತ್ತದಿಂದ ಕಾರ್ಯ ನಿರ್ವಹಿಸಿರಿ. ಹಿತೈಷಿಗಳಂತೆ ವರ್ತಿಸುವವರಿಂದ ದೂರವಿರಿ. ಶುಭ ಸಂಖ್ಯೆ: 4

basavaraj guruji

ಬಸವರಾಜ ಗುರೂಜಿ

(ಡಾ.ಬಸವರಾಜ ಗುರೂಜಿ ಸಂಪರ್ಕ ಸಂಖ್ಯೆ: 9972848937)

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​