Daily Horoscope: ದಿನ ಭವಿಷ್ಯ | ಈ ರಾಶಿಯವರಿಗೆ ವ್ಯಾಪಾರಾದಿ ಉದ್ಯಮಗಳಲ್ಲಿ ಪ್ರಗತಿಯಿದ್ದು ಧನಲಾಭವಾಗಲಿದೆ

Today Horoscope ಫೆಬ್ರವರಿ 24, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Daily Horoscope: ದಿನ ಭವಿಷ್ಯ | ಈ ರಾಶಿಯವರಿಗೆ ವ್ಯಾಪಾರಾದಿ ಉದ್ಯಮಗಳಲ್ಲಿ ಪ್ರಗತಿಯಿದ್ದು ಧನಲಾಭವಾಗಲಿದೆ
ದಿನ ಭವಿಷ್ಯ
ಆಯೇಷಾ ಬಾನು Edited By:

Updated on: Feb 24, 2021 | 9:04 AM

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಶುಕ್ಲಪಕ್ಷ, ದ್ವಾದಶಿ ತಿಥಿ, ಬುಧವಾರ, ಫೆಬ್ರವರಿ 24, 2021. ಪುನರ್ವಸು ನಕ್ಷತ್ರ, ರಾಹುಕಾಲ : ಇಂದು ಬೆಳಿಗ್ಗೆ 12.28 ರಿಂದ ಮಧ್ಯಾಹ್ನ 1.55. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.37. ಸೂರ್ಯಾಸ್ತ: ಸಂಜೆ 6.20.

ತಾ.24-02-2021 ರ ಬುಧವಾರದ ರಾಶಿಭವಿಷ್ಯ

ಮೇಷ: ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು. ಶುಭ ಸಂಖ್ಯೆ: 8

ವೃಷಭ: ಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ. ವೃತ್ತಿಕೌಶಲ್ಯದಿಂದ ಅಸಾಧ್ಯವಾದ ಕಾರ್ಯವನ್ನೂ ಸಾಧಿಸುವಿರಿ. ಧನಮೂಲಗಳು ಹೆಚ್ಚಾಗುವವು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು. ಶುಭ ಸಂಖ್ಯೆ: 2

ಮಿಥುನ: ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಯೋಗ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವುದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಯೋಗವಿದೆ. ಶುಭ ಸಂಖ್ಯೆ: 5

ಕರ್ಕ: ಉನ್ನತ ಹುದ್ದೆ ದೊರೆಯುವ ಸಾಧ್ಯತೆ ಇದೆ. ಸಾಧನೆಗೆ ಸೂಕ್ತ ಅವಕಾಶ ದೊರೆಯುವುದು. ಹಣಕಾಸಿನ ತೊಂದರೆಗಳು ಪರಿಹಾರವಾಗುವವು. ವ್ಯವಹಾರಗಳಲ್ಲಿ ಗೌಪ್ಯತೆ ಇರಲಿ. ಹಿತಶತ್ರುಗಳಿಂದ ತೊಂದರೆಯಾಗುವ ಸಧ್ಯತೆ ಇದೆ. ಶುಭ ಸಂಖ್ಯೆ: 6

ಸಿಂಹ: ವ್ಯವಹಾರಿಕ ಸಂಪರ್ಕಗಳು ಹೆಚ್ಚುವವು ಅದರಂತೆ ಧನದ ಮೂಲಗಳೂ ಹೆಚ್ಚುವವು. ಸಾಲ ಮರುಪಾವತಿಯಾಗುವುದು. ಮನೆಯಲ್ಲಿ ನೆಮ್ಮದಿ ಇರುವುದು. ಅವಿವಾಹಿತರಿಗೆ ಕಂಕಣಬಲ ಕೂಡಿಬರುವುದು. ಶುಭ ಸಂಖ್ಯೆ: 8

ಕನ್ಯಾ: ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೊಟ್ಟಸಾಲ ಮರುಪಾವತಿಯಾಗುವುದು. ಶುಭ ಸಂಖ್ಯೆ: 3

ತುಲಾ: ಸಾಲಗಾರರ ತೊಂದರೆ ಇರುವುದು. ಅನಾರೋಗ್ಯ, ವ್ಯವಹಾರದಲ್ಲಿ ಹಾನಿ ಕಂಡುಬರುವುದು. ನಿಧಾನಗತಿಯ ಕೆಲಸದಿಂದ ಮನೋಕ್ಷೋಭೆ ಉಂಟಾಗುವ ಸಂಭವವಿದೆ. ಶುಭ ಸಂಖ್ಯೆ: 4

ವೃಶ್ಚಿಕ: ಪ್ರಮುಖ ಯೋಜನೆಗಳ ಜವಾಬ್ದಾರಿ ಹೆಚ್ಚುವುದು. ಆರ್ಥಿಕ ಅಭಿವೃದ್ಧಿ ಕಂಡುಬರುವುದು. ಸ್ನೇಹಿತರ ಭಿನ್ನಾಭಿಪ್ರಾಯ ಬಗೆಹರಿಯುವುದು. ಶತ್ರುಗಳೂ ಸೌಮ್ಯರಾಗುವ ಕಾಲ ಇರುವುದರಿಂದ ಅಪೇಕ್ಷಿತ ಕಾರ್ಯವನ್ನು ಸಾಧಿಸುವಿರಿ. ಶುಭ ಸಂಖ್ಯೆ: 1

ಧನು: ಭವಿಷ್ಯತ್ತಿನ ಉಪೇಕ್ಷೆ ಮಾಡದೇ ಉಳಿತಾಯಕ್ಕೆ ಗಮನಹರಿಸಿರಿ. ಆಪತ್ತುಗಳ ಪರಿಹಾರಕ್ಕಾಗಿ ವ್ಯಥಾ ತಿರುಗಾಟದ ಸಂಭವವಿದೆ. ಹಿರಿಯರ ಸಲಹೆಗೆ ತಕ್ಕಂತೆ ಮುಂದುವರೆಯಿರಿ. ಶುಭ ಸಂಖ್ಯೆ: 7

ಮಕರ: ಸ್ವಜನರಲ್ಲಿ ಮನಸ್ತಾಪ. ದೇಹಾರೋಗ್ಯವೂ ಸರಿಯಿರದೆ ತಾಪದಾಯಕವಾಗುತ್ತದೆ. ಆದರೆ ಶ್ರೇಷ್ಠ ಜನರಿಂದ ಪುರಸ್ಕಾರ. ಸಾಂಸಾರಿಕ ದೃಷ್ಟಿಯಲ್ಲೂ ತೃಪ್ತಿದಾಯಕವಿದ್ದು ನೆಮ್ಮದಿ ಉಂಟಾಗುತ್ತದೆ. ಶುಭ ಸಂಖ್ಯೆ: 9

ಕುಂಭ: ವ್ಯಾಪಾರಾದಿ ಉದ್ಯಮಗಳಲ್ಲಿ ಪ್ರಗತಿಯಿದ್ದು ಧನಲಾಭ, ಐಶ್ವರ್ಯವೃದ್ಧಿಯಿದೆ. ಆದರೆ ವ್ಯವಹಾರಿಕ ಕಿರಿಕಿರಿ ಇರುವದು. ಅನಿರೀಕ್ಷಿತ ಧನಲಾಭವೂ ಇದೆ. ಕೈಗೊಂಡ ಕಾರ್ಯಗಳಿಗೆ ವಿಘ್ನ ತೋರಿದರೂ ನೆರವೇರುತ್ತದೆ. ಶುಭ ಸಂಖ್ಯೆ: 2

ಮೀನ: ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವದು. ಉತ್ಸಾಹ ಮೂಡುವದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ. ಶುಭ ಸಂಖ್ಯೆ: 4

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Published On - 6:28 am, Wed, 24 February 21

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us