Horoscope ದಿನ ಭವಿಷ್ಯ |ವಿವಾಹ ಅಪೇಕ್ಷಿತರಿಗೆ ಕಂಕಣ ಬಲ ಕೂಡಿಬರಲಿದೆ ಈ ರಾಶಿಯವರಿಗೆ

Today Horoscope ಫೆಬ್ರವರಿ 25, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope ದಿನ ಭವಿಷ್ಯ |ವಿವಾಹ ಅಪೇಕ್ಷಿತರಿಗೆ ಕಂಕಣ ಬಲ ಕೂಡಿಬರಲಿದೆ ಈ ರಾಶಿಯವರಿಗೆ
ದಿನ ಭವಿಷ್ಯ
Follow us
ಆಯೇಷಾ ಬಾನು
|

Updated on:Feb 25, 2021 | 6:35 AM

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಶುಕ್ಲಪಕ್ಷ, ತ್ರಯೋದಶಿ ತಿಥಿ, ಗುರುವಾರ, ಫೆಬ್ರವರಿ 25, 2021. ಪುಷ್ಯ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 1.56 ರಿಂದ ಸಂಜೆ 3.23. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.37. ಸೂರ್ಯಾಸ್ತ: ಸಂಜೆ 6.21.

ತಾ.25-02-2021 ರ ಗುರುವಾರದ ರಾಶಿಭವಿಷ್ಯ

ಮೇಷ: ಯೋಜನೆಗಳಿಗೆ ಪೂರ್ವ ತಯಾರಿ ಮಾಡುವ ಅಗತ್ಯತೆ ಕಂಡುಬರುವುದು. ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು. ಶುಭ ಸಂಖ್ಯೆ: 7

ವೃಷಭ: ವ್ಯಾಪಾರದಲ್ಲಿ ಅಭಿವೃದ್ಧಿಯಾಗುವುದು. ಆರ್ಥಿಕ ಸಂಕಷ್ಟಗಳು ಪರಿಹಾರವಾಗುವವು. ಮಹಿಳೆಯರಿಗೆ ಹೆಚ್ಚಿನ ಉನ್ನತಿ ಕಂಡುಬರುವುದು. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 2

ಮಿಥುನ: ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು. ಶುಭ ಸಂಖ್ಯೆ: 8

ಕರ್ಕ: ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ತೊಂದರೆಯಾಗುವ ಸಂಭವವಿದೆ. ಆದಾಯ ಉತ್ತಮವಾಗಿರುವದು. ನೌಕರಿಯಲ್ಲಿ ಅಸಹಕಾರ ಎದುರಿಸಬೇಕಾಗುವುದು. ಗ್ರಹಸೌಖ್ಯವಿದ್ದರೂ ಮಾನಸಿಕ ನೆಮ್ಮದಿ ಇರಲಾರದು. ಶುಭ ಸಂಖ್ಯೆ: 4

ಸಿಂಹ: ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆಯ ಆಗುವ ಯೋಗವಿದೆ. ಶುಭ ಸಂಖ್ಯೆ: 9

ಕನ್ಯಾ: ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ವ್ಯವಹಾರದಲ್ಲಿ ಅಡೆತಡೆಗಳು ಕಂಡುಬರುವವು. ಅನಿವಾರ್ಯ ಕೆಲಸಗಳಗೆ ಅಲೆದಾಟ ಕಂಡುಬರುವುದು. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವುದು. ಶುಭ ಸಂಖ್ಯೆ: 1

ತುಲಾ: ಬರುವ ಕಷ್ಟಗಳನ್ನು ಎದುರಿಸಿ ಸಫಲತೆಯನ್ನು ಹೊಂದುವಿರಿ. ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಶುಭ ಸಂಖ್ಯೆ: 5

ವೃಶ್ಚಿಕ: ತಪ್ಪುಗಳನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಅಧಿಕಾರಿಗಳ ಕಿರಿಕಿರಿಗೆ ಮಣಿಯದೇ ಧೈರ್ಯದಿಂದ ಕೆಲಸ ನಿರ್ವಹಿಸಿರಿ. ಮತ್ತೊಬ್ಬರ ಮೇಲೆ ಅತಿಯಾದ ವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಶುಭ ಸಂಖ್ಯೆ: 6

ಧನು: ಯೋಜನಾಬದ್ಧ ಕೆಲಸಗಳೂ ಕೂಡ ಮುಂದೂಡುವ ಪ್ರಸಂಗವಿದೆ. ಆಪ್ತವಲಯದಲ್ಲಿ ಸಮಾಲೋಚಿಸಿರಿ. ಅನಿವಾರ್ಯ ಕರ್ತವ್ಯಗಳಿಗೆ ಸಮಯ ಹೊಂದಾಣಿಕೆ ಮಾಡುವ ಸಾಧ್ಯತೆ ಇದೆ. ಆರ್ಥಕ ಸಂಕಷ್ಟಗಳು ಎದುರಾಗುವವು. ಶುಭ ಸಂಖ್ಯೆ: 8

ಮಕರ: ವ್ಯವಹಾರದಲ್ಲಿ ಅಡೆತಡೆಗಳು ಕಂಡುಬರುವವು. ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಅಗೌರವ ಆಗುವ ಸಂಭವ ಇರುವದರಿಂದ ಸೂಕ್ಷ್ಮವಾಗಿರುವದು ಉತ್ತಮ. ಹೊಸ ಯೋಜನೆಗಳಿಗೆ ಚಾಲನೆ ದೊರೆಯುವುದು. ಶುಭ ಸಂಖ್ಯೆ: 4

ಕುಂಭ: ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪಧನಲಾಭವಾದರೂ ಹಳೆಯ ಸಾಲ ತೀರುವುದು. ವ್ಯಾಪಾರದಲ್ಲಿ ಅಭಿವೃದ್ಧಿಯಾಗುವುದು. ವಿವಾಹ ಅಪೇಕ್ಷಿತರಿಗೆ ಕಂಕಣ ಬಲ ಕೂಡಿಬರುವುದು. ಶುಭ ಸಂಖ್ಯೆ: 2

ಮೀನ: ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು. ಶುಭ ಸಂಖ್ಯೆ: 3

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Published On - 6:30 am, Thu, 25 February 21

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ