Horoscope ದಿನ ಭವಿಷ್ಯ | ಈ ರಾಶಿಯವರು ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆವಹಿಸಿ

Today Horoscope ಫೆಬ್ರವರಿ 26, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope ದಿನ ಭವಿಷ್ಯ | ಈ ರಾಶಿಯವರು ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆವಹಿಸಿ
ದಿನ ಭವಿಷ್ಯ
Follow us
ಆಯೇಷಾ ಬಾನು
|

Updated on:Feb 26, 2021 | 9:04 AM

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಶುಕ್ಲಪಕ್ಷ, ಚತುರ್ದಶಿ ತಿಥಿ, ಶುಕ್ರವಾರ, ಫೆಬ್ರವರಿ 26, 2021. ಆಶ್ಲೇಷ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 1.00 ರಿಂದ ಬೆಳಿಗ್ಗೆ 12.28. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.36. ಸೂರ್ಯಾಸ್ತ: ಸಂಜೆ 6.21.

ತಾ.26-02-2021 ರ ಶುಕ್ರವಾರದ ರಾಶಿಭವಿಷ್ಯ

ಮೇಷ: ಉದರಬೇನೆ ಬರುವ ಸಾಧ್ಯತೆ ಇದೆ ಆರೋಗ್ಯದ ಕಾಳಜಿವಹಿಸಿ. ಬಂಧುಮಿತ್ರರ ಭೇಟಿ, ಮನೆಯಲ್ಲಿ ಮಂಗಲಕಾರ್ಯ ಜರುಗುವ ಯೋಗವಿದೆ. ಕೋಟ್​ನಲ್ಲಿರುವ ವ್ಯಾಜ್ಯಗಳು ಕೊನೆಗೊಳ್ಳುವವು. ಶುಭ ಸಂಖ್ಯೆ: 5

ವೃಷಭ: ಚಂಚಲಚಿತ್ತದಿಂದ ಕಾರ್ಯಹಾನಿಯಾಗುವ ಲಕ್ಷಣಗಳಿವೆ. ಆಸ್ತಿ ಸಂಬಂಧಿತ ಕ್ರಯವಿಕ್ರಯ ವ್ಯವಹಾರಗಳು ಕುದುರುವವು. ಅನವಶ್ಯಕ ಮಾತಿನಿಂದ ಇಕ್ಕಟ್ಟಿಗೆ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ. ತಜ್ಞರ ಸಹಾಯ ಪಡೆಯಿರಿ. ಶುಭ ಸಂಖ್ಯೆ: 2

ಮಿಥುನ: ಹಿರಿಯರ ಮಾರ್ಗದರ್ಶನ ದೊರೆಯಲಿದೆ. ಆತ್ಮೀಯರೊಂದಿಗೆ ವಾದವಿವಾದ ಮಾಡಬೇಡಿ. ಮದುವೆಯ ಮಾತುಕತೆ ಕೈಗೂಡುವ ಸಾಧ್ಯತೆ ಇದೆ. ವ್ಯವಹಾರಿಕ ಜಾಣತನದಿಂದ ಲಾಭವಾಗಲಿದೆ. ಮನೆಯಲ್ಲಿ ಸಂತಸ ಕಂಡುಬರುವುದು. ಶುಭ ಸಂಖ್ಯೆ: 4

ಕರ್ಕ: ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭ ಸಂಖ್ಯೆ: 7

ಸಿಂಹ: ಮಹಿಳೆಯರ ಇಷ್ಟಾರ್ಥ ಸಿದ್ಧಿಸುವುದು. ಕೂಡಿಟ್ಟ ಹಣ ಉಪಯೋಗವಾಗುವ ಸಂಭವವಿದೆ. ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವವು. ನ್ಯಾಯಾಲಯದಲ್ಲಿ ಜಯ ದೊರೆಯುವುದು. ವಿದ್ಯೆಯಲ್ಲಿ ಸಾಧನೆ ಇರುವುದು. ಶುಭ ಸಂಖ್ಯೆ: 9

ಕನ್ಯಾ: ಆರ್ಥಿಕ ಸ್ಥಿತಿ ಸುಧಾರಿಸುವುದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವುದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ. ಶುಭ ಸಂಖ್ಯೆ: 5

ತುಲಾ: ತಪ್ಪುಗಳನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಅಧಿಕಾರಿಗಳ ಕಿರಿಕಿರಿಗೆ ಮಣಿಯದೇ ಧೈರ್ಯದಿಂದ ಕೆಲಸ ನಿರ್ವಹಿಸಿರಿ. ಮತ್ತೊಬ್ಬರ ಮೇಲೆ ಅತಿಯಾದ ವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಶುಭ ಸಂಖ್ಯೆ: 6

ವೃಶ್ಚಿಕ: ಅನಾವಶ್ಯಕ ತಿರುಗಾಟದಿಂದ ಆಲಸ್ಯ. ದುರ್ಜನರ ಸಹವಾಸ ದೋಷ ಕಂಡುಬರುವುದು. ಐಷಾರಾಮಿ ವಸ್ತುಗಳ ಖರೀದಿ ಸಂಭವ. ವ್ಯಾಪಾರ-ಉದ್ಯಮಗಳಲ್ಲಿ ತೃಪ್ತಿದಾಯಕ ಲಾಭವಿರುವುದು. ವಿದ್ಯಾರ್ಥಿಗಳಿಗೆ ಹಿನ್ನಡೆ ಇರುವುದು. ಶುಭ ಸಂಖ್ಯೆ: 3

ಧನು: ವಿವಿಧ ಮೂಲಗಳಿಂದ ಸಹಾಯ ದೊರೆಯುವುದು. ಉದ್ಯೋಗದಲ್ಲಿ ಅಭಿವೃದ್ಧಿ ಇರುವುದು. ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ. ಲೆಕ್ಕಾಚಾರ ತಪ್ಪದಂತೆ ಎಚ್ಚರವಹಿಸಿರಿ. ಮನೆಯಲ್ಲಿ ಮಂಗಲಕಾರ್ಯ ಜರುಗುವುದು. ಶುಭ ಸಂಖ್ಯೆ: 6

ಮಕರ: ಪ್ರತಿಯೊಂದು ಕೆಲಸದಲ್ಲಿಯೂ ವಿಳಂಬ ಉಂಟಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳು ಹೆಚ್ಚಾಗುವವು. ವೃಥಾ ತಿರುಗಾಟ ಇರುವದು ಆದರೂ ಕೀರ್ತಿದಾಯಕ ಫಲವಿದೆ. ಶುಭ ಸಂಖ್ಯೆ: 7

ಕುಂಭ: ಭವಿಷ್ಯತ್ತಿನ ಉಪೇಕ್ಷೆ ಮಾಡದೇ ಉಳಿತಾಯಕ್ಕೆ ಗಮನಹರಿಸಿರಿ. ಆಪತ್ತುಗಳ ಪರಿಹಾರಕ್ಕಾಗಿ ವ್ಯಥಾ ತಿರುಗಾಟದ ಸಂಭವವಿದೆ. ಹಿರಿಯರ ಸಲಹೆಗೆ ತಕ್ಕಂತೆ ಮುಂದುವರೆಯಿರಿ. ಶುಭ ಸಂಖ್ಯೆ: 8

ಮೀನ: ಪೂರ್ಣವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ. ದಿನದ ಕೆಲಸ ಬೇಸರ ಉಂಟುಮಾಡುವ ಸಾಧ್ಯತೆ ಇದೆ. ಶುಭ ಸಂಖ್ಯೆ: 7

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Published On - 6:48 am, Fri, 26 February 21

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್