Daily Horoscope ದಿನ ಭವಿಷ್ಯ | ಈ ರಾಶಿಯವರಿಗಿಂದು ಎಷ್ಟು ಪ್ರಯತ್ನಿಸಿದರೂ ಸಮಸ್ಯೆಗಳಿಗೆ ಪರಿಹಾರ ದೊರೆಯದೇ ಕ್ಲೇಶ ಉಂಟಾಗುವುದು

Today Horoscope ಮಾರ್ಚ್ 02, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Daily Horoscope ದಿನ ಭವಿಷ್ಯ | ಈ ರಾಶಿಯವರಿಗಿಂದು ಎಷ್ಟು ಪ್ರಯತ್ನಿಸಿದರೂ ಸಮಸ್ಯೆಗಳಿಗೆ ಪರಿಹಾರ ದೊರೆಯದೇ ಕ್ಲೇಶ ಉಂಟಾಗುವುದು
ದಿನ ಭವಿಷ್ಯ
Follow us
ಆಯೇಷಾ ಬಾನು
| Updated By: Digi Tech Desk

Updated on:Mar 02, 2021 | 9:17 AM

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣಪಕ್ಷ, ತದಿಗೆ ತಿಥಿ, ಮಂಗಳವಾರ, ಮಾರ್ಚ್ 02, 2021. ಹಸ್ತ ನಕ್ಷತ್ರ, ರಾಹುಕಾಲ : ಇಂದು ಸಂಜೆ 3.24 ರಿಂದ ಸಂಜೆ 4.52. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.33. ಸೂರ್ಯಾಸ್ತ: ಸಂಜೆ 6.22.

ತಾ.02-03-2021 ರ ಮಂಗಳವಾರದ ರಾಶಿಭವಿಷ್ಯ

ಮೇಷ: ಮನಸ್ಸು ಹಿಡಿತದಲ್ಲಿರಲಿ. ಎಷ್ಟು ಪ್ರಯತ್ನಿಸಿದರೂ ಸಮಸ್ಯೆಗಳಿಗೆ ಪರಿಹಾರ ದೊರೆಯದೇ ಕ್ಲೇಶ ಉಂಟಾಗುವುದು. ತೋರಿಕೆಯ ಸ್ವಭಾವದಿಂದ ದೃಷ್ಟಿದೋಷ ಆಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 6

ವೃಷಭ: ಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ ಸಮಾಧಾನ ಚಿತ್ತದಿಂದ ವರ್ತಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವುದು. ಹಾನಿ ಇಲ್ಲ ಆದರೆ ಲಾಭವೂ ಇಲ್ಲದ ಸ್ಥಿತಿ ಇರುವುದು. ಶುಭ ಸಂಖ್ಯೆ: 2

ಮಿಥುನ: ಶಾಂತಚಿತ್ತರಾಗಿ ಕೆಲಸ ನಿರ್ವಹಿಸಿರಿ. ಹೊಸ ವ್ಯಾಪಾರ, ಉದ್ಯೋಗದ ಅವಕಾಶಗಳು ಕೂಡಿ ಬರುವವು. ಹಳೆಯ ಸಮಸ್ಯಗಳು ಪರಿಹಾರವಾಗುವವು. ಶುಭ ಕಾರ್ಯದಲ್ಲಿ ಪಾಲ್ಗೊಳ್ಳುವಿರಿ. ಶುಭ ಸಂಖ್ಯೆ: 4

ಕರ್ಕ: ಮನೆಯಲ್ಲಿ ಅಸಮಾಧಾನ ಇರುವುದು. ಕೂಡಿಟ್ಟ ಹಣ ಹಾನಿಯಾಗುವ ಸಂಭವವಿದೆ. ಅಣ್ಣ ತಮ್ಮಂದಿರಲ್ಲಿ ಸಹಕಾರ ಅತ್ಯಂತ ಅವಶ್ಯಕ. ತೋಟಗಾರಿಕೆ ಫಲ ಪ್ರದವಾಗಲಿದೆ. ವ್ಯಾಪಾರ ವೃದ್ಧಿಯಾಗುವುದು. ಶುಭ ಸಂಖ್ಯೆ: 9

ಸಿಂಹ: ಗಂಭೀರ ಆರೋಪದಿಂದ ಮುಕ್ತರಾಗುವಿರಿ. ಅನುಕೂಲಕರ ವಾತಾವರಣ ಇರುವುದರಿಂದ ಇನ್ನೂ ಹೆಚ್ಚಿನ ವ್ಯವಹಾರಿಕ ಸುಧಾರಣೆ ಮಾಡಲು ಪ್ರಯತ್ನಿಸಿರಿ. ಆರೋಗ್ಯದ ಸೂಕ್ತ ಕಾಳಜಿ ವಹಿಸಿರಿ. ಶುಭ ಸಂಖ್ಯೆ: 1

ಕನ್ಯಾ: ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭ ಸಂಖ್ಯೆ: 5

ತುಲಾ: ವಿನಯ ಪೂರ್ವಕ ಕಾರ್ಯ ಸಾಧಿಸುವಿರಿ. ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವಿರಿ. ವಿವಿಧ ಮೂಲದಿಂದ ಧನಪ್ರಾಪ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಯೋಗವಿದೆ. ವಾಹನ ಖರೀದಿ ಯೋಗವಿರುವುದು. ಶುಭ ಸಂಖ್ಯೆ: 6

ವೃಶ್ಚಿಕ: ಉದಾಸೀನತೆಯಿಂದ ಕಾರ್ಯಹಾನಿ ಸಂಭವ. ಅನುಮಾನಗಳು ಮೂಡಿ ಕೈಗೊಂಡ ಕಾರ್ಯಕ್ಕೆ ವಿಘ್ನ ಉಂಟಾಗುವ ಸಂಭವವಿದೆ. ಸಾಮಾಜಿಕ ಗೌರವನ್ನು ಉಳಿಸಿಕೊಳ್ಳುವಲ್ಲಿ ಸಫಲರಾಗುವಿರಿ. ಶುಭ ಸಂಖ್ಯೆ: 8

ಧನು: ಹೊಸ ಆಲೋಚನೆಯೊಂದು ಕಾರ್ಯರೂಪಕ್ಕೆ ಬರುವುದು. ಸಹವರ್ತಿಗಳ ಅಸಹಕಾರ ಇದ್ದರೂ ತೊಂದರೆ ಆಗಲಾರದು. ಅನಪೇಕ್ಷಿತ ಸ್ಥಾನ ಬದಲಾವಣೆ ಆಗುವ ಸಾಧ್ಯತೆ ಇದೆ. ಸರಿಯಾದ ಧ್ಯೇಯದಿಂದ ಸಮಾಧಾನ ಇರುವುದು. ಶುಭ ಸಂಖ್ಯೆ: 3

ಮಕರ: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದಲ್ಲಿ ಅಪೇಕ್ಷಿತ ಲಾಭ ದೊರೆಯುವುದು. ವಿದೇಶ ಪ್ರಯಾಣದ ಯೋಗವಿದೆ. ಶುಭ ಸಂಖ್ಯೆ: 7

ಕುಂಭ: ಅಪರಿಮಿತ ಖರ್ಚು ತೋರಿದರೂ ಅಡಚಣೆಯಾಗುವ ಸಂಭವವಿಲ್ಲದೆ. ಸ್ಥಾನಮಾನಗಳೂ ಭದ್ರವಾಗಿ ಸಾಂಸಾರಿಕ ದೃಷ್ಟಿಯಲ್ಲೂ ಸುಖದಾಯಕ, ವಿಶೇಷ ಪ್ರಯತ್ನದಿಂದ ವ್ಯವಹಾರ ಸಿದ್ಧಿ ಇರುವುದು. ಶುಭ ಸಂಖ್ಯೆ: 4

ಮೀನ: ವ್ಯಯಕ್ತಿಕ ಧನ ಲಾಭ, ಶುಭ ಸಮಾರಂಭ, ಸರಕಾರಿ ಕೆಲಸಗಳು ಆಗುವವು. ಉದ್ಯೋಗದಲ್ಲಿ ಉನ್ನತಿ ಇರುವುದು. ವ್ಯಾಪಾರದಲ್ಲಿ ಹಣ ಹೂಡಿಕೆಗೆ ಉತ್ತಮ. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವುದು. ಶುಭ ಸಂಖ್ಯೆ: 4 ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Published On - 6:19 am, Tue, 2 March 21

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ