AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope ದಿನ ಭವಿಷ್ಯ | ಈ ರಾಶಿಯವರಿಗೆ ಹೊಟ್ಟೆಕಿಚ್ಚಿನ ಜನರಿಂದ ಉಂಟಾಗಲಿದೆ ತೊಂದರೆ

Today Horoscope ಮಾರ್ಚ್ 10, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope ದಿನ ಭವಿಷ್ಯ | ಈ ರಾಶಿಯವರಿಗೆ ಹೊಟ್ಟೆಕಿಚ್ಚಿನ ಜನರಿಂದ ಉಂಟಾಗಲಿದೆ ತೊಂದರೆ
ದಿನ ಭವಿಷ್ಯ
ಆಯೇಷಾ ಬಾನು
|

Updated on: Mar 10, 2021 | 6:29 AM

Share

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣಪಕ್ಷ, ದ್ವಾದಶಿ ತಿಥಿ, ಬುಧವಾರ, ಮಾರ್ಚ್ 10, 2021. ಶ್ರವಣ ನಕ್ಷತ್ರ, ರಾಹುಕಾಲ : ಇಂದು ಬೆಳಿಗ್ಗೆ 12.26 ರಿಂದ ಇಂದು ಮಧ್ಯಾಹ್ನ 1.55ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.28. ಸೂರ್ಯಾಸ್ತ: ಸಂಜೆ 6.24.

ತಾ.10-03-2021 ರ ಬುಧವಾರದ ರಾಶಿಭವಿಷ್ಯ

ಮೇಷ: ಒಳ್ಳೆಯ ಮಾತುಗಳಿಂದ ಸಂಬಂಧ ಸುಧಾರಿಸುವುದು. ಸ್ನೇಹಿತರಲ್ಲಿಯ ಮನಸ್ತಾಪ ದೂರಾಗುವುದು. ಶಕ್ಯತೆ ಮೀರಿ ದುಡಿಯುವ ಕಾರ್ಯಭಾರವಿರುವುದು. ಉದ್ಯೋಗದ ಹೊರತಾಗಿ ಬೇರೆ ಕೆಲಸಕ್ಕೂ ಗಮನಹರಿಸಿ. ಶುಭ ಸಂಖ್ಯೆ: 6

ವೃಷಭ: ಆಸ್ತಿ ವಿಷಯಕ್ಕೆ ಸಂಬಂಧಿಸಿಂತೆ ತೊಂದರೆಯಾಗುವ ಸಂಭವವಿದೆ. ಆದಾಯ ಉತ್ತಮವಾಗಿರುವುದು. ನೌಕರಿಯಲ್ಲಿ ಅಸಹಕಾರ ಎದುರಿಸಬೇಕಾಗುವುದು. ಗ್ರಹಸೌಖ್ಯವಿದ್ದರೂ ಮಾನಸಿಕ ನೆಮ್ಮದಿ ಇರಲಾರದು. ಶುಭ ಸಂಖ್ಯೆ: 1

ಮಿಥುನ: ವಾಸಸ್ಥಾನ, ಉದ್ಯೋಗಸ್ಥಾನ ಬದಲಾವಣೆಯ ಯೋಗವಿದೆ. ಕೌಟುಂಬಿಕ ಸಮಸ್ಯೆಗಳು ದೂರಾಗುವವು. ವ್ಯವಹಾರಿಕ ಸೂಕ್ಷ್ಮತೆಯಿಂದ ಹಾನಿ ತಪ್ಪಿಸಿರಿ. ವೃಥಾಚಿಂತೆ ಇರುವುದು. ಹೊಸ ವ್ಯವಹಾರಗಳು ಬೇಡ. ಶುಭ ಸಂಖ್ಯೆ: 4

ಕರ್ಕ: ಮಹತ್ವಾಕಾಂಕ್ಷೆಗೆ ಪೂರಕವಾದ ವಾತಾವರಣ ಇರುವುದು. ಬಂಧುಮಿತ್ರರ ಸಹಕಾರ ದೊರೆಯುವುದು. ಉದ್ಯೋಗದಲ್ಲಿ ಪ್ರಗತಿ ಕಂಡುಬರುವುದು. ಮನೆಯಲ್ಲಿ ಸಂತಸ ಮೂಡುವುದು. ಶುಭಕಾರ್ಯಗಳು ಜರುಗುವವು. ಶುಭ ಸಂಖ್ಯೆ: 2

ಸಿಂಹ: ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ದೊರೆಯುವುದು. ಕೋಟ್​ನಲ್ಲಿ ಇರುವ ನ್ಯಾಯ ಬಗೆಹರಿಯುವುದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವುದು. ಶುಭ ಸಂಖ್ಯೆ: 7

ಕನ್ಯಾ: ಯೋಜನೆಗಳಿಗೆ ಪೂರ್ವ ತಯಾರಿ ಮಾಡುವ ಅಗತ್ಯತೆ ಕಂಡುಬರುವುದು. ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು. ಶುಭ ಸಂಖ್ಯೆ: 9

ತುಲಾ: ಹೊಸ ಕೆಲಸವನ್ನು ಒಪ್ಪಿಕೊಳ್ಳುವ ಮೊದಲು ವಿಚಾರಮಾಡಿ ಮುಂದುವರೆಯಿರಿ. ಉದ್ಯೋಗದ ಸ್ಥಾನ ಬದಲಾವಣೆಯ ಯೋಗವಿದೆ. ಆಮಿಷಕ್ಕೆ ಒಳಗಾಗಿ ಮೋಸಹೋಗುವ ಸಂಭವವಿದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 5

ವೃಶ್ಚಿಕ: ನಿಶ್ಚಿತ ಆರ್ಥಿಕ ಸ್ಥಿತಿ ಇರುವದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭ ಸಂಖ್ಯೆ: 8

ಧನು: ಪರಿವಾರದಲ್ಲಿ ಹೊಸಕಳೆ ಬರುವುದು. ಕುಟುಂಬದಲ್ಲಿ ಸೌಖ್ಯ ಇರುವುದು. ಮಹತ್ವದ ಕೆಲಸಕ್ಕೆ ವಿಘ್ನ ಬರುವ ಸಾಧ್ಯತೆ ಇದೆ ಎಚ್ಚರಿಕೆವಹಿಸಿರಿ. ವ್ಯವಹಾರಗಳು ಲಾಭದಾಯಕವಾಗಿ ಇರುವವು. ಶುಭ ಸಂಖ್ಯೆ: 4

ಮಕರ: ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕಂತೆ ಕೆಲಸಗಳು ಕೈಗೂಡುವವು. ಮಾತು ಕೇಳದ ಜನರಿಂದ ದೂರವಿರಿ. ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಆಸ್ತಿ ಖರೀದಿ ಯೋಗವಿದೆ ಪ್ರಯತ್ನಿಸಿ. ಶುಭ ಸಂಖ್ಯೆ: 7

ಕುಂಭ: ಹೊಟ್ಟೆಕಿಚ್ಚಿನ ಜನರಿಂದ ತೊಂದರೆ ಆಗುವ ಸಾಧ್ಯತೆ ಇದೆ. ಅತಿಯಾಗಿ ಹೇಳಿಕೊಳ್ಳುವದು ಅಮಾಮಾನಕ್ಕೆ ಕಾರಣವಾಗದಂತೆ ವರ್ತಿಸಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ನಿರೀಕ್ಷೆ ಇರುವುದು. ಕೈಗೊಂಡ ಕಾರ್ಯ ಯಶಸ್ವಿ ಕಾಣುವುದು. ಶುಭ ಸಂಖ್ಯೆ: 1

ಮೀನ: ಉದ್ಯೋಗ ಬದಲಿ ಮಾಡುವುದು ಸದ್ಯ ಬೇಡ. ಹಣದ ಕೊರತೆ ಇರಲಾರದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಪಿತ್ರಾರ್ಜಿತ ಆಸ್ತಿ ದೊರೆಯುವ ಯೋಗವಿದೆ. ತಂದೆತಾಯಿಯ ವಿಷಯದಲ್ಲಿ ಚಿಂತೆ ಇರುವುದು. ಶುಭ ಸಂಖ್ಯೆ: 9 ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ