Horoscope ದಿನ ಭವಿಷ್ಯ | ಈ ರಾಶಿಯವರು ಕಾಯಕನಿಷ್ಠೆ ಹೊರೆಯಾಗದಂತೆ ನೋಡಿಕೊಳ್ಳಬೇಕಿದೆ, ಇಲ್ಲದಿದ್ದರೇ..

|

Updated on: Mar 11, 2021 | 6:19 AM

Today Horoscope ಮಾರ್ಚ್ 11, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope ದಿನ ಭವಿಷ್ಯ | ಈ ರಾಶಿಯವರು ಕಾಯಕನಿಷ್ಠೆ ಹೊರೆಯಾಗದಂತೆ ನೋಡಿಕೊಳ್ಳಬೇಕಿದೆ, ಇಲ್ಲದಿದ್ದರೇ..
ದಿನ ಭವಿಷ್ಯ
Follow us on

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣಪಕ್ಷ, ತ್ರಯೋದಶಿ ತಿಥಿ, ಗುರುವಾರ, ಮಾರ್ಚ್ 10, 2021. ಧನಿಷ್ಥೆ ನಕ್ಷತ್ರ, ರಾಹುಕಾಲ : ಇಂದು ಮಧ್ಯಾಹ್ನ 1.55 ರಿಂದ ಇಂದು ಸಂಜೆ 3.24ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.27. ಸೂರ್ಯಾಸ್ತ: ಸಂಜೆ 6.24.

ತಾ.11-03-2021 ರ ಗುರುವಾರದ ರಾಶಿಭವಿಷ್ಯ

ಮಹಾಶಿವರಾತ್ರಿಯ ಶುಭಾಶಯಗಳು.
“ಓಂ ನಮಃ ಶಿವಾಯ”

ಮೇಷ: ವ್ಯಾಪಾರದಲ್ಲಿ ಅದೃಷ್ಟಲಾಭವಿದೆ. ವಿದ್ಯಾರ್ಥಿಗಳ ಮನೋಭಿಲಾಷೆ ಈಡೇರುವುದು. ಮನೆಯ ಜವಾಬ್ದಾರಿಗಳು ಹೆಚ್ಚುವವು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಂಭವವಿದೆ. ಶುಭ ಸಂಖ್ಯೆ: 8

ವೃಷಭ: ಹಿತವಾದ ಮಾತುಗಳು ಗೌರವವನ್ನು ವೃದ್ಧಿಸುವವು. ಆರ್ಥಿಕ ಸಂಕಷ್ಟಗಳು ಎದುರಾಗುವವು. ಸಮಾಧಾನ ಚಿತ್ತದಿಂದ ಕಾರ್ಯ ನಿರ್ವಹಿಸಿರಿ. ಹಿತೈಷಿಗಳಂತೆ ವರ್ತಿಸುವವರಿಂದ ದೂರವಿರಿ. ಶುಭ ಸಂಖ್ಯೆ: 2

ಮಿಥುನ: ಕಾಯಕನಿಷ್ಠೆ ನಿಮಗೇ ಹೊರೆಯಾಗದಂತೆ ನೋಡಿಕೊಳ್ಳಿರಿ. ನಿರಂತರ ದುಡಿಮೆಯಿಂದ ಅನಾರೋಗ್ಯ ಅಥವಾ ಮಾನಸಿಕ ಕಿರಿಕಿರಿ ಆಗುವ ಸಂಭವವಿದೆ. ಹಣಕಾಸಿನಿನ ವ್ಯವಹಾರದಲ್ಲಿ ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 6

ಕರ್ಕ: ಅಪಮಾನ, ಅಪವಾದದಂತಹ ಸಮಸ್ಸೆಗೆ ಸಿಲುಕದಂತೆ ಜಾಗರೂಕರಾಗಿರಿ. ಈ ಸಮಯದಲ್ಲಿ ಮಾತನಾಡುವ ಬದಲು ಮಾತು ಕೇಳುವುದು ಉತ್ತಮ. ಮಕ್ಕಳು ಶಾಲಾ ಕಾಲೇಜುಗಳಲ್ಲಿ ಸಾಧನೆ ತೋರುವರು. ಶುಭ ಸಂಖ್ಯೆ: 7

ಸಿಂಹ: ವ್ಯಕ್ತಿತ್ವಕ್ಕೆ ತಕ್ಕ ಗೌರವಗಳು ದೊರೆಯುವವು. ಚಾಣಾಕ್ಷತನದಿಂದ ಕಷ್ಟ ಪರಿಹರಿಸಿಕೊಳ್ಳುವಿರಿ. ಅಪೇಕ್ಷಿತ ಕಾರ್ಯಗಳು ಕೈಗೂಡುವವು. ಸಂಬಂಧಿಗಳಿಂದ ಸಹಕಾರ ದೊರೆಯುವುದು. ದೂರ ಪ್ರಯಾಣ, ಪರ ಸ್ಥಳವಾಸ ಸಂಭವ. ಶುಭ ಸಂಖ್ಯೆ: 3

ಕನ್ಯಾ: ಎಲ್ಲವನ್ನು ಹಗುರವಾಗಿ ಕಾಣುವುದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವುದು. ಹಣಕಾಸಿನ ತೊಂದರೆಗಳು ಕಂಡುಬರುವವು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 4

ತುಲಾ: ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯ ಪ್ರವೃತ್ತಿಯು ಉತ್ತಮ ಫಲಕೊಡುವುದು. ಹಳೆಯ ಬಾಕಿ ವಸೂಲಾಗುವುದು. ವ್ಯಾಜ್ಯಗಳು ಅಂತ್ಯಕಾಣುವವು. ಗ್ರಹ ಸೌಖ್ಯವಿರುವುದು. ಶುಭ ಸಂಖ್ಯೆ: 5

ವೃಶ್ಚಿಕ: ಪ್ರಮುಖ ಯೋಜನೆಗಳ ಜವಾಬ್ದಾರಿ ಹೆಚ್ಚುವುದು. ಆರ್ಥಿಕ ಅಭಿವೃದ್ಧಿ ಕಂಡುಬರುವುದು. ಸ್ನೇಹಿತರ ಭಿನ್ನಾಭಿಪ್ರಾಯ ಬಗೆಹರಿಯುವುದು. ಶತೃಗಳೂ ಸೌಮ್ಯರಾಗುವ ಕಾಲ ಇರುವುದರಿಂದ ಅಪೇಕ್ಷಿತ ಕಾರ್ಯವನ್ನು ಸಾಧಿಸುವಿರಿ. ಶುಭ ಸಂಖ್ಯೆ: 6

ಧನು: ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವದು. ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಉನ್ನತ ಶಿಕ್ಷಣದ ಕನಸು ಈಡೇರುವುದು. ಶುಭ ಸಂಖ್ಯೆ: 1

ಮಕರ: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭ ಸಂಖ್ಯೆ: 3

ಕುಂಭ: ಹಲವು ರೀತಿಯಿಂದ ಧನಾಗಮನವಿದ್ದು ಐಶ್ವರ್ಯವೃದ್ಧಿ, ಸಂಸಾರ ಸುಖ. ಅಪೇಕ್ಷಿತ ವಸ್ತು, ಪ್ರಾಪ್ತಿ, ಮಿತ್ರಾಗಮನ, ವಿಶೇಷ ಸಂತೋಷ ಪ್ರಸಂಗಗಳು ಒದಗಿ ಬಂದು ಸಂಭ್ರಮವೆನಿಸುತ್ತದೆ. ಶುಭ ಸಂಖ್ಯೆ: 2

ಮೀನ: ಅಲ್ಪ ತ್ರಾಸದಾಯಕ. ಗಡಿಬಿಡಿಯ ವಾತಾವರಣ, ಆರೋಗ್ಯದಲ್ಲಿ ಏರುಪೇರು ಸಂಭವ. ಮಹತ್ವದ ಕೆಲಸಗಳನ್ನು ಮುಂದೂಡುವದು ಒಳ್ಳೆಯದು. ಮಂಗಲಕಾರ್ಯ, ಹೆಸರು, ಕಡಲೆ ದಾನ ಮಾಡಿರಿ. ಶುಭ ಸಂಖ್ಯೆ: 9

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937