AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope ದಿನ ಭವಿಷ್ಯ | ಈ ರಾಶಿಯ ಕಲಾ ಕ್ಷೇತ್ರದಲ್ಲಿರುವವರಿಗೆ ಒಳ್ಳೆಯ ಅವಕಾಶಗಳು ತೋರಿಬರಲಿವೆ

Today Horoscope ಮಾರ್ಚ್ 14, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope ದಿನ ಭವಿಷ್ಯ | ಈ ರಾಶಿಯ ಕಲಾ ಕ್ಷೇತ್ರದಲ್ಲಿರುವವರಿಗೆ ಒಳ್ಳೆಯ ಅವಕಾಶಗಳು ತೋರಿಬರಲಿವೆ
ದಿನ ಭವಿಷ್ಯ
ಆಯೇಷಾ ಬಾನು
|

Updated on: Mar 14, 2021 | 6:43 AM

Share

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲಪಕ್ಷ, ಪಾಡ್ಯ ತಿಥಿ, ಭಾನುವಾರ, ಮಾರ್ಚ್ 14, 2021. ಉತ್ತರಾಭಾದ್ರೆ ನಕ್ಷತ್ರ, ರಾಹುಕಾಲ : ಇಂದು ಸಂಜೆ 4.55 ರಿಂದ ಇಂದು ರಾತ್ರಿ 6.25ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.25. ಸೂರ್ಯಾಸ್ತ: ಸಂಜೆ 6.25.

ತಾ.14-03-2021 ರ ಭಾನುವಾರದ ರಾಶಿಭವಿಷ್ಯ

ಮೇಷ: ಮನಸ್ಸಿನಲ್ಲಿ ಸಣ್ಣದಾಗಿ ಹುಟ್ಟಿಕೊಂಡ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಯತ್ನಿಸಲಿದ್ದೀರಿ. ಹೊಸ ವಿಚಾರಗಳಿಗೆ ಮನಸ್ಸು ತೆರೆದುಕೊಳ್ಳಲಿದೆ. ಗೃಹಿಣಿಯರು ಗೃಹ ಕೃತ್ಯಗಳಿಂದ ಹೈರಾಣಾಗಲಿದ್ದಾರೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಶುಭ ಸಂಖ್ಯೆ: 4

ವೃಷಭ: ನಿಮ್ಮ ವೃತ್ತಿರಂಗದಲ್ಲಿ ದಿನೇ ದಿನೇ ಅಭಿವೃದ್ಧಿಯಾಗುತ್ತಿದ್ದೀರಿ ಎಂದು ನಿಮಗೆ ಅನಿಸಬಹುದು. ಆರ್ಥಿಕವಾಗಿ ಹಣಕಾಸಿನ ಖರ್ಚು ವೆಚ್ಚದ ಬಗ್ಗೆ ಮಿತಿಯಿರಲಿ. ಅನವಶ್ಯಕವಾಗಿ ಬೇಡದ ಸಮಸ್ಯೆಗಳನ್ನು ಮೈಮೇಲೆಳದುಕೊಳ್ಳಬೇಡಿ. ಶುಭ ಸಂಖ್ಯೆ: 7

ಮಿಥುನ: ಮನೆಗೆ ಅನಿರೀಕ್ಷಿತವಾಗಿ ಬಂಧುಮಿತ್ರರ ಆಗಮನವಾಗಲಿದ್ದು, ಸಂಭ್ರಮದ ವಾತಾವರಣವಿರಲಿದೆ. ಆದಾಯ ಹೆಚ್ಚಿಸಲು ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ವಿದ್ಯಾರ್ಥಿಗಳು ಆಲಸ್ಯತನ ಬಿಟ್ಟು ಕಠಿಣ ಪರಿಶ್ರಮ ಪಡಬೇಕಿದೆ. ಶುಭ ಸಂಖ್ಯೆ: 9

ಕರ್ಕ: ಎಷ್ಟೋ ದಿನಗಳಿಂದ ಭೇಟಿಯಾಗಬೇಕೆಂದಿದ್ದ ವ್ಯಕ್ತಿಗಳನ್ನು ಅನಿರೀಕ್ಷಿತವಾಗಿ ಭೇಟಿಯಾಗಲಿದ್ದೀರಿ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಒದಗಿಬರಲಿವೆ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ ಐಡಿಯಾ ಬರಲಿದೆ. ಶುಭ ಸಂಖ್ಯೆ: 2

ಸಿಂಹ: ಕಲಾ ಕ್ಷೇತ್ರದಲ್ಲಿರುವವರಿಗೆ ಒಳ್ಳೆಯ ಅವಕಾಶಗಳು ತೋರಿಬರಲಿವೆ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಬೇರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಮನಸ್ಸು ಅಂದುಕೊಂಡಂತೆ ನಡೆದುಕೊಳ್ಳಿ. ಶುಭ ಸಂಖ್ಯೆ: 1

ಕನ್ಯಾ: ಸಂಗಾತಿಯ ಕಷ್ಟಗಳಿಗೆ ಹೆಗಲುಕೊಡಲಿದ್ದೀರಿ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಸರಕಾರಿ ಲೆಕ್ಕ ಪತ್ರಗಳನ್ನು ಜಾಗರೂಕತೆಯಿಂದ ಸಂರಕ್ಷಿಸಿ. ಕೃಷಿಕರಿಗೆ ಆದಾಯಕ್ಕೆ ಕೊರತೆಯಿರದು. ದೇವತಾ ಪ್ರಾರ್ಥನೆ ಮಾಡಿ. ಶುಭ ಸಂಖ್ಯೆ: 3

ತುಲಾ: ಮನಸ್ಸು ಅಂದುಕೊಂಡಂತೆ ನಿರ್ಧಾರ ತೆಗೆದುಕೊಳ್ಳಲು ಹೋಗಿ ಪ್ರೀತಿಪಾತ್ರರ ಮನಸ್ಸಿಗೆ ಬೇಸರವುಂಟು ಮಾಡಲಿದ್ದೀರಿ. ಆದಾಯದ ಮೂಲಕ್ಕೆ ಪೆಟ್ಟು ಬೀಳಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಶುಭ ಸಂಖ್ಯೆ: 5

ವೃಶ್ಚಿಕ: ನೆರೆಹೊರೆಯವರು ನಿಮ್ಮ ಗುಟ್ಟುಗಳನ್ನು ಬಯಲು ಮಾಡಲು ಕಾಯುತ್ತಿರುತ್ತಾರೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗುವುದು. ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ಪ್ರೀತಿ ಪಾತ್ರರ ಭೇಟಿ ಮಾಡಲಿದ್ದೀರಿ. ಶುಭ ಸಂಖ್ಯೆ: 6

ಧನು: ಉದ್ಯೋಗ ಸಂಬಂಧವಾಗಿ ಅನಿರೀಕ್ಷಿತವಾಗಿ ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಮನೆಗೆ ಬಂಧು ಮಿತ್ರರ ಆಗಮನವಾಗಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗುವುದು. ಶುಭ ಸಂಖ್ಯೆ: 7

ಮಕರ: ವೈಯಕ್ತಿಕ ಆರೋಗ್ಯದ ಬಗ್ಗೆ ಉಪೇಕ್ಷೆ ಸಲ್ಲದು. ನೂತನ ದಂಪತಿಗಳಲ್ಲಿ ಹೊಂದಾಣಿಕೆಯ ಕೊರತೆ ಕಂಡುಬಂದೀತು. ಸಾಂಸಾರಿಕ ವಿಚಾರದಲ್ಲಿ ಮೂರನೆಯವರ ಮಧ‍್ಯಪ್ರವೇಶಕ್ಕೆ ಅವಕಾಶ ಕೊಡಬೇಡಿ. ಗೃಹ ರಿಪೇರಿ ಕೆಲಸಗಳಿಗೆ ಮುಂದಾಗುವಿರಿ. ಶುಭ ಸಂಖ್ಯೆ: 8

ಕುಂಭ: ಆಪ್ತರ ಮಾತುಗಳಿಂದ ಮನಸ್ಸು ಭಾವುಕವಾಗುವುದು. ದೇಹಾರೋಗ್ಯದಲ್ಲಿ ಹಲವು ದಿನಗಳಿಂದ ಕಾಡುತ್ತಿದ್ದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ವಾದ ವಿವಾದಗಳಲ್ಲಿ ಮೇಲುಗೈ ಸಾಧಿಸಲಿದ್ದೀರಿ. ತಾಳ್ಮೆಯಿರಲಿ. ಶುಭ ಸಂಖ್ಯೆ: 6

ಮೀನ: ಹೆಚ್ಚಿನ ಧನಾರ್ಜನೆಗಾಗಿ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಸ್ವಯಂ ವ್ಯಾಪಾರಿಗಳಿಗೆ ಮುನ್ನಡೆಯ ಯೋಗವಿದೆ. ಸಂಗಾತಿಯ ಸಲಹೆಗಳು ಉಪಯೋಗಕ್ಕೆ ಬರಲಿವೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಲಿದೆ. ಶುಭ ಸಂಖ್ಯೆ: 9

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ