Horoscope ದಿನ ಭವಿಷ್ಯ | ಈ ರಾಶಿಯವರಿಗೆ ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು
Today Horoscope ಮಾರ್ಚ್ 15, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲಪಕ್ಷ, ಬಿದಿಗೆ ತಿಥಿ, ಸೋಮವಾರ, ಮಾರ್ಚ್ 15, 2021. ರೇವತಿ ನಕ್ಷತ್ರ, ರಾಹುಕಾಲ : ಇಂದು ಬೆಳಿಗ್ಗೆ 7.54 ರಿಂದ ಇಂದು ಬೆಳಿಗ್ಗೆ 9.24ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.24. ಸೂರ್ಯಾಸ್ತ: ಸಂಜೆ 6.25.
ತಾ.15-03-2021 ರ ಸೋಮವಾರದ ರಾಶಿಭವಿಷ್ಯ
ಮೇಷ: ಮನಸ್ಸು ಹಿಡಿತದಲ್ಲಿರಲಿ. ಎಷ್ಟು ಪ್ರಯತ್ನಿಸಿದರೂ ಸಮಸ್ಯೆಗಳಿಗೆ ಪರಿಹಾರ ದೊರೆಯದೇ ಕ್ಲೇಷ ಉಂಟಾಗುವುದು. ತೋರಿಕೆಯ ಸ್ವಭಾವದಿಂದ ದೃಷ್ಟಿದೋಷ ಆಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 8
ವೃಷಭ: ದೂರಾಲೋಚನೆಯಿಂದ ಕಾರ್ಯದಲ್ಲಿ ಯಶಸ್ಸು. ಆಸ್ತಿ ಖರೀದಿ ಸಾಧ್ಯ. ವೈವಾಹಿಕ ಚಿಂತೆ ಇರುವುದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ. ಧಾರ್ಮಿಕ ಕ್ಷೇತ್ರಗಳ ದರ್ಶನ ಯೋಗವಿದೆ. ಶುಭ ಸಂಖ್ಯೆ: 3
ಮಿಥುನ: ನಿರೀಕ್ಷೆಗೆ ತಕ್ಕಂತೆ ಕೆಲಸ ಆಗದೇ ಮಾನಸಿಕ ಅಶಾಂತಿ ಕಂಡುಬರುವುದು. ವ್ಯವಹಾರಗಳಲ್ಲಿ ಹಾನಿಯಾಗುವ ಭಯ ಇರುವುದು. ಪರಿಣಿತರ ಅಥವಾ ಹಿರಿಯರ ಸಲಹೆಯಂತೆ ಮುಂದುವರೆಯಿರಿ. ವಿದ್ಯಾರ್ಥಿಗಳಿಗೆ ಒಳ್ಳೆಯ ಫಲವಿದೆ. ಶುಭ ಸಂಖ್ಯೆ: 6
ಕರ್ಕ: ಕುಟುಂಬದಲ್ಲಿ ವಾದ ಬೇಡ. ಉತ್ತಮ ಸಾಧನೆಯಿಂದ ಬಂಧುವರ್ಗದ ಪ್ರಶಂಸೆಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವುದು. ಸಮತೋಲಿತ ಜೀವನವಿರುವುದು. ಶುಭ ಸಂಖ್ಯೆ: 1
ಸಿಂಹ: ನೆನೆಗುದಿಗೆ ಬಿದ್ದ ಕೆಲಸಗಳಿಗೆ ಚಾಲನೆ ದೊರೆಯುವುದು. ಮಾನಸಿಕ ಉತ್ಸಾಹ ಕಂಡುಬರುವುದು. ಆತ್ಮೀಯರಿಗೆ ಉನ್ನತ ಅಧಿಕಾರ ದೊರೆಯುವುದು. ಕಾರಣಾಂತರ ಅಧಿಕ ಖರ್ಚುಬರಬಹುದು. ಶುಭ ಸಂಖ್ಯೆ: 5
ಕನ್ಯಾ: ವಿನಯಪೂರ್ವಕ ಕಾರ್ಯ ಸಾಧಿಸುವಿರಿ. ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವಿರಿ. ವಿವಿಧ ಮೂಲದಿಂದ ಧನಪ್ರಾಪ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಯೋಗವಿದೆ. ವಾಹನ ಖರೀದಿ ಯೋಗವಿರುವುದು. ಶುಭ ಸಂಖ್ಯೆ: 9
ತುಲಾ: ಅನಿಸಿಕೆಗಿಂತ ವಾಸ್ತವ ಬೇರೆ ಇರುವುದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲ ಸೂಕ್ಷತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವುದು ಒಳ್ಳೆಯದು. ಧನಹಾನಿಯ ಸಂಭವವಿದೆ. ಶುಭ ಸಂಖ್ಯೆ: 2
ವೃಶ್ಚಿಕ: ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೊಟ್ಟಸಾಲ ಮರುಪಾವತಿಯಾಗುವುದು. ಶುಭ ಸಂಖ್ಯೆ: 7
ಧನು: ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆಕೇಳುವ ಪ್ರಸಂಗ ಇರುವದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವುದು. ಶುಭ ಸಂಖ್ಯೆ: 4
ಮಕರ: ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವುದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 8
ಕುಂಭ: ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಯೋಗ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವುದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಯೋಗವಿದೆ. ಶುಭ ಸಂಖ್ಯೆ: 3
ಮೀನ: ನಿಮ್ಮ ಮನೆಬಾಗಿಲಲ್ಲಿ ಅದೃಷ್ಟ ಲಕ್ಷ್ಮೀ ಒಲಿದು ಬರುತ್ತಾಳೆ. ಆರೋಗ್ಯ ಸುಧಾರಣೆಯಾಗುವುದು. ಸ್ಥಿತಿಗಳು ಅನುಕೂಲಕರವಾಗಿ ಮುಂದವರೆಯುವುದು. ಗ್ರಹಸುಖ ಯೋಗವು ಇದೆ. ಮನೋಚಿಂತಿತ ಕನಸು ನನಸಾಗಲಿದೆ. ಶುಭ ಸಂಖ್ಯೆ: 1
ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937