Horoscope ದಿನ ಭವಿಷ್ಯ | ಈ ರಾಶಿಯವರು ಅಪವಾದಕ್ಕೆ ಗುರಿಯಾಗುವ ಸಂಭವವಿದೆ
Today Horoscope ಮಾರ್ಚ್ 17, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲಪಕ್ಷ, ಚೌತಿ ತಿಥಿ, ಬುಧವಾರ, ಮಾರ್ಚ್ 17, 2021. ಅಶ್ವಿನಿ ನಕ್ಷತ್ರ, ರಾಹುಕಾಲ : ಇಂದು ಬೆಳಿಗ್ಗೆ 12.23 ರಿಂದ ಇಂದು ಮಧ್ಯಾಹ್ನ 1.53ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.22. ಸೂರ್ಯಾಸ್ತ: ಸಂಜೆ 6.26.
ತಾ.17-03-2021 ರ ಬುಧವಾರದ ರಾಶಿಭವಿಷ್ಯ
ಮೇಷ: ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ. ಶುಭ ಸಂಖ್ಯೆ: 8
ವೃಷಭ: ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಸ್ವಂತ ಉದ್ಯಮಿಗಳು ಹಾನಿ ತಪ್ಪಿಸುವ ಉಪಾಯ ಮಾಡಿ. ವ್ಯಾಪಾರದ ವಿಷಯದಲ್ಲಿ ಮೋಸವಾಗುವ ಸಾಧ್ಯತೆ ಇದೆ. ಸಾಲಗಾರರು ಸಹಕಾರ ತೋರುವರು. ಶುಭ ಸಂಖ್ಯೆ: 4
ಮಿಥುನ: ವಿಶೇಷ ರೀತಿಯ ಕಾರ್ಯ ಒದಗಿ ಬಂದು ಸಂತಸ ಉಂಟಾಗುತ್ತದೆ. ಸ್ಥಾನಮಾನಗಳಿಗೂ ಕೊರತೆ ಇಲ್ಲ. ವಿಶೇಷ ವಸ್ತು ಸಂಗ್ರಹ. ಅನಾರೋಗ್ಯ ತೋರಿಬಂದು ಕಿರಿಕಿರಿ ಎನಿಸಬಹುದು. ಶುಭ ಸಂಖ್ಯೆ: 7
ಕರ್ಕ: ಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ. ಸಮಾಧಾನ ಚಿತ್ತದಿಂದ ವರ್ತಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವುದು. ಹಾನಿ ಇಲ್ಲ ಆದರೆ ಲಾಭವೂ ಇಲ್ಲದ ಸ್ಥಿತಿ ಇರುವುದು. ಶುಭ ಸಂಖ್ಯೆ: 1
ಸಿಂಹ: ಅಗೌರವ ಆಗುವ ಸಂಭವ ಇರುವುದರಿಂದ ಸೂಕ್ಷ್ಮವಾಗಿರುವುದು ಉತ್ತಮ. ಅನಪೇಕ್ಷಿತರಿಗೆ ಉಪಕಾರ ಮಾಡುವುದು ಸರಿಯಲ್ಲ. ಮಕ್ಕಳ ಚಿಂತೆ ಇರುವುದು. ವಧುವರರಿಗೆ ಮದುವೆಯ ಯೋಗ ಕೂಡಿಬರುವುದು. ಶುಭ ಸಂಖ್ಯೆ: 6
ಕನ್ಯಾ: ಗೊಂದಲಕ್ಕೆ ಒಳಗಾಗದೇ ಮುನ್ನುಗ್ಗಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪಧನಲಾಭವಾದರೂ ಹಳೆಯ ಸಾಲ ತೀರುವುದು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 2
ತುಲಾ: ನಿಧಾನವಾಗಿ ಕಾರ್ಯಸಿದ್ಧಿಯಾಗುವುದು. ಮಕ್ಕಳಲ್ಲಿ ಹೊಸ ಹುರುಪು ಕಂಡು ಬರುವುದು. ವ್ಯಾಪಾರಿಗಳಿಗೆ ಮಧ್ಯಮಫಲ. ಸೀಮಿತ ಆದಾಯ, ಸೀಮಿತ ಕಾರ್ಯಗಳಿಂದ ಬೇಸರ ಇರುವುದು. ಮಂದಗತಿಯ ಕೆಲಸಗಳು ನಿರಾಸೆ ಮೂಡಿಸುವ ಸಾಧ್ಯತೆ ಇದೆ. ಶಾಂತಚಿತ್ತರಾಗಿ ವ್ಯವಹರಿಸಿರಿ. ಶುಭ ಸಂಖ್ಯೆ: 9
ವೃಶ್ಚಿಕ: ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಆರ್ಥಿಕ ಸಂಕಷ್ಟ ದೂರಾಗುವುದು. ಶುಭ ಸಂಖ್ಯೆ: 5
ಧನು: ಶುಭ ಕರ್ಮ ಸಂಪ್ರಾಪ್ತಿಯಿದ್ದು, ಗುರುವರ್ಗ ಸಂತೋಷ, ಸಂಸಾರ ಸುಖ. ನೂತನ ಮಿತ್ರಭೇಟಿ, ಅರ್ಥಾರ್ಜನೆಯು ಉತ್ತಮವಿದೆ. ಆದರೂ ಗೃಹಕಲಹ, ಬಂಧು ಜನರಲ್ಲಿ ಅಸಮಾಧಾನ ಕಂಡುಬರುವುದು. ಶುಭ ಸಂಖ್ಯೆ: 3
ಮಕರ: ವ್ಯಾಪಾರದಲ್ಲಿ ಅದೃಷ್ಟಲಾಭವಿದೆ. ವಿದ್ಯಾರ್ಥಿಗಳ ಮನೋಭಿಲಾಷೆ ಈಡೇರುವುದು. ಮನೆಯ ಜವಾಬ್ದಾರಿಗಳು ಹೆಚ್ಚುವವು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಂಭವವಿದೆ. ಶುಭ ಸಂಖ್ಯೆ: 5
ಕುಂಭ: ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆಯ ಆಗುವ ಯೋಗವಿದೆ. ಶುಭ ಸಂಖ್ಯೆ: 8
ಮೀನ: ನೆನೆಗುದಿಗೆ ಬಿದ್ದ ಕೆಲಸಗಳಿಗೆ ಚಾಲನೆ ದೊರೆಯುವುದು. ಮಾನಸಿಕ ಉತ್ಸಾಹ ಕಂಡುಬರುವುದು. ಆತ್ಮೀಯರಿಗೆ ಉನ್ನತ ಅಧಿಕಾರ ದೊರೆಯುವುದು. ಕಾರಣಾಂತರ ಅಧಿಕ ಖರ್ಚುಬರಬಹುದು. ಶುಭ ಸಂಖ್ಯೆ: 1
ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937