AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope ದಿನ ಭವಿಷ್ಯ | ಈ ರಾಶಿಯವರು ತಮ್ಮ ಸಹೋದ್ಯೋಗಿಗಳೊಂದಿಗೆ ಮನಸ್ತಾಪ ಮಾಡಿಕೊಳ್ಳುತ್ತಾರೆ

Today Horoscope ಮಾರ್ಚ್ 24, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope ದಿನ ಭವಿಷ್ಯ | ಈ ರಾಶಿಯವರು ತಮ್ಮ ಸಹೋದ್ಯೋಗಿಗಳೊಂದಿಗೆ ಮನಸ್ತಾಪ ಮಾಡಿಕೊಳ್ಳುತ್ತಾರೆ
ದಿನ ಭವಿಷ್ಯ
ಆಯೇಷಾ ಬಾನು
|

Updated on: Mar 24, 2021 | 6:47 AM

Share

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲಪಕ್ಷ, ದಶಮಿ ತಿಥಿ, ಬುಧವಾರ, ಮಾರ್ಚ್ 24, 2021. ಪುಷ್ಯ ನಕ್ಷತ್ರ, ರಾಹುಕಾಲ : ಇಂದು ಬೆಳಿಗ್ಗೆ 12.21 ರಿಂದ ಇಂದು ಮಧ್ಯಾಹ್ನ 1.52ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.17. ಸೂರ್ಯಾಸ್ತ: ಸಂಜೆ 6.27.

ತಾ.24-03-2021 ರ ಬುಧವಾರದ ರಾಶಿಭವಿಷ್ಯ

ಮೇಷ: ಮಹತ್ವಾಕಾಂಕ್ಷೆಗೆ ಪೂರಕವಾದ ವಾತಾವರಣ ಇರುವುದು. ಬಂಧುಮಿತ್ರರ ಸಹಕಾರ ದೊರೆಯುವುದು. ಉದ್ಯೋಗದಲ್ಲಿ ಪ್ರಗತಿ ಕಂಡುಬರುವುದು. ಮನೆಯಲ್ಲಿ ಸಂತಸ ಮೂಡುವುದು. ಶುಭಕಾರ್ಯಗಳು ಜರುಗುವವು. ಶುಭ ಸಂಖ್ಯೆ: 7

ವೃಷಭ: ಹೊಟ್ಟೆಕಿಚ್ಚಿನ ಜನರಿಂದ ತೊಂದರೆ ಆಗುವ ಸಾಧ್ಯತೆ ಇದೆ. ಅತಿಯಾಗಿ ಹೇಳಿಕೊಳ್ಳುವುದು ಅಮಾಮಾನಕ್ಕೆ ಕಾರಣವಾಗದಂತೆ ವರ್ತಿಸಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ನಿರೀಕ್ಷೆ ಇರುವುದು. ಕೈಗೊಂಡ ಕಾರ್ಯ ಯಶ ಕಾಣುವುದು. ಶುಭ ಸಂಖ್ಯೆ: 2

ಮಿಥುನ: ಕೆಲಸ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವುದು. ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವದು. ವಾದ-ವಿವಾದ, ಹಠಸಾಧನೆ ಬೇಡ. ಶುಭ ಸಂಖ್ಯೆ: 1

ಕರ್ಕ: ಹೊಸ ಯೋಜನೆಗಳು ಬೇಡ. ಸ್ಥಳಾಂತರ, ವರ್ಗಾವಣೆ, ಮನೆ ಬದಲಿ, ಅಧಿಕಾರಿ ವರ್ಗದವರಿಂದ ಕಿರಿಕಿರಿ ಇರುವುದು. ಕೊಟ್ಟ ಸಾಲ ಮರುಪಾವತಿ ಆಗಲಾರದು, ವ್ಯಾಪರಿಗಳಿಗೆ ವ್ಯವಹಾರಿಕ ತೊಂದರೆ ಆಗುವ ಸಧ್ಯತೆ ಇದೆ. ಶುಭ ಸಂಖ್ಯೆ: 9

ಸಿಂಹ: ಮಾತಿನಂತೆಯೇ ಎಲ್ಲವೂ ನಡೆಯುವುದಿಲ್ಲ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಉದಯೋನ್ಮುಖ ಪ್ರತಿಭೆಗಳಿಗೆ ಅವಕಾಶ ದೊರೆಯುವುದು.ಲಾಭದಾಯಕ ಹುದ್ದೆ ದೊರೆಯುವುದು. ಶುಭ ಸಂಖ್ಯೆ: 4

ಕನ್ಯಾ: ವ್ಯಾಪಾರದಲ್ಲಿ ಪ್ರಗತಿ ಇರುವುದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 5

ತುಲಾ: ಒಂದೇ ಮನಸಿನ ಕ್ರೀಯಾಶೀಲವಾದ ಬದುಕು ಸಾಧನೆಗೆ ಕಾರಣವಾಗುವುದು. ಅಡೆತಡೆಗಳ ನಿವಾರಣೆಯಾಗುವುದು. ನಿಶ್ಚಿತ ಅವಧಿಯ ಪರೀಕ್ಷೆಗಳು ಎದುರಾದರೂ ಬಲಗುಂದುವುದಿಲ್ಲ. ಹಿರಿಯರ ಸಲಹೆ ದೊರೆಯುವುದು. ಶುಭ ಸಂಖ್ಯೆ: 6

ವೃಶ್ಚಿಕ: ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ. ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವುದು. ಶುಭ ಸಂಖ್ಯೆ: 8

ಧನು: ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವುದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡಮೊತ್ತದ ಹಣಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 3

ಮಕರ: ಸಹೋದ್ಯೋಗಿಗಳೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅಪೂರ್ಣ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಮೋಸಮಾಡುವ ಸಂಭವವಿದೆ. ದೂರ ಪ್ರಯಾಣ ಅಥವಾ ಪರಸ್ಥಳವಾಸ ಸಂಭವ. ಶುಭ ಸಂಖ್ಯೆ: 1

ಕುಂಭ: ವ್ಯವಹಾರಿಕ ಸಂಪರ್ಕಗಳು ಹೆಚ್ಚುವವು ಅದರಂತೆ ಧನದ ಮೂಲಗಳೂ ಹೆಚ್ಚುವವು. ಸಾಲ ಮರುಪಾವತಿಯಾಗುವುದು. ಮನೆಯಲ್ಲಿ ನೆಮ್ಮದಿ ಇರುವುದು. ಅವಿವಾಹಿತರಿಗೆ ಕಂಕಣಬಲ ಕೂಡಿಬರುವುದು. ಶುಭ ಸಂಖ್ಯೆ: 7

ಮೀನ: ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವುದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಶುಭ ಸಂಖ್ಯೆ: 5

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?