Daily Horoscope – ದಿನ ಭವಿಷ್ಯ | ವೃಶ್ಚಿಕ ರಾಶಿಯವರಿಗೆ ಮದುವೆ ಮಾತುಕತೆಗಳಲ್ಲಿ ಸಫಲತೆ ಸಾಧ್ಯತೆ
Rashi Bhavishya: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಶುಕ್ಲಪಕ್ಷ, ಹುಣ್ಣಿಮೆ ತಿಥಿ, ಶನಿವಾರ, ಫೆಬ್ರವರಿ 27, 2021 ರಾಶಿ ಭವಿಷ್ಯ.
ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಶುಕ್ಲಪಕ್ಷ, ಹುಣ್ಣಿಮೆ ತಿಥಿ, ಶನಿವಾರ, ಫೆಬ್ರವರಿ 27, 2021. ಮಖೆ ನಕ್ಷತ್ರ, ರಾಹುಕಾಲ: ಬೆಳಿಗ್ಗೆ 9:31ರಿಂದ ಬೆಳಿಗ್ಗೆ 10:59 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.35. ಸೂರ್ಯಾಸ್ತ: ಸಂಜೆ 6.21.
ದಿನಾಂಕ: 27-02-2021ರ ಶನಿವಾರದ ರಾಶಿಭವಿಷ್ಯ
ಮೇಷ: ಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ. ವೃತ್ತಿಕೌಶಲ್ಯದಿಂದ ಅಸಾಧ್ಯವಾದ ಕಾರ್ಯವನ್ನೂ ಸಾಧಿಸುವಿರಿ. ಧನಮೂಲಗಳು ಹೆಚ್ಚಾಗುವವು.ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವದು. ಶುಭ ಸಂಖ್ಯೆ: 5
ವೃಷಭ: ಹಲವು ರೀತಿಯಿಂದ ಧನಾಗಮನವಿದ್ದು ಐಶ್ವರ್ಯವೃದ್ಧಿ, ಸಂಸಾರ ಸುಖ. ಅಪೇಕ್ಷಿತ ವಸ್ತು, ಪ್ರಾಪ್ತಿ, ಮಿತ್ರಾಗಮನ, ವಿಶೇಷ ಸಂತೋಷ ಪ್ರಸಂಗಗಳು ಒದಗಿ ಬಂದು ಸಂಭ್ರಮವೆನಿಸುತ್ತದೆ. ಶುಭ ಸಂಖ್ಯೆ: 2
ಮಿಥುನ: ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆಗಳಿವೆ.ವ್ಯವಹಾರದಲ್ಲಿ ಮಂದಗತಿ ಇರುವದು. ವ್ಯಾಪಾರದಲ್ಲಿ ಜಾಗರೂಕತೆ ಅವಶ್ಯ. ಹಾನಿ ತಡೆಗಟ್ಟುವ ಪ್ರಯತ್ನಕ್ಕೆ ಫಲ ದೊರೆಯಲಿದೆ. ವಿದ್ಯಾರ್ಥಿಗಳಿಗೆ ಶುಭಫಲವಿದೆ. ಶುಭ ಸಂಖ್ಯೆ: 8
ಕರ್ಕ: ಅನಿಸಿಕೆಗಿಂತ ವಾಸ್ತವ ಬೇರೆ ಇರುವದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲ ಸೂಕ್ಷತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವದು ಒಳ್ಳೆಯದು. ಧನಹಾನಿಯ ಸಂಭವವಿದೆ. ಶುಭ ಸಂಖ್ಯೆ: 3
ಸಿಂಹ: ಸರಳತೆ ದುರುಪಯೋಗವಾಗದಂತೆ ನೋಡಿಕೊಳ್ಳಿ. ಉದ್ಯೋಗದಲ್ಲಿಯ ಕುಂದು ಕೊರತೆಗಳನ್ನು ನಿಭಾಯಿಸುವಿರಿ. ಮಹತ್ವದ ಅಧಿಕಾರ ದೊರೆಯುವ ಯೋಗವಿದೆ. ವ್ಯಾಪಾರದಲ್ಲಿ ಹೆಚ್ಚಿನ ಹಣ ಹೂಡಿಕೆ ಈಗ ಬೇಡ. ಶುಭ ಸಂಖ್ಯೆ:9
ಕನ್ಯಾ: ಚಂಚಲಚಿತ್ತದಿಂದ ಕಾರ್ಯಹಾನಿಯಾಗುವ ಲಕ್ಷಣಗಳಿವೆ. ಆಸ್ತಿ ಸಂಬಂದಿತ ಕ್ರಯವಿಕ್ರಯ ವ್ಯವಹಾರಗಳು ಕುದುರುವವು. ಅನವಶ್ಯಕ ಮಾತಿನಿಂದ ಇಕ್ಕಟ್ಟಿಗೆ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ. ತಜ್ಞರ ಸಹಾಯ ಪಡೆಯಿರಿ. ಶುಭ ಸಂಖ್ಯೆ: 4
ತುಲಾ: ಕೆಲಸದಲ್ಲಿ ತಾಳ್ಮೆ ಇರಲಿ. ಅನಿರ್ದಿಷ್ಟ ಉದ್ಯೋಗ, ಕೆಲಸದ ವಿಷಯದಲ್ಲಿ ಗೊಂದಲ ಮೂಡುವ ಸಾಧ್ಯತೆ ಇದೆ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ವ್ಯಾಪಾರಿಗಳಿಗೆ ಆರ್ಥಿಕ ತೊಂದರೆ ಆಗುವ ಯೋಗವಿದೆ. ಶುಭ ಸಂಖ್ಯೆ: 1
ವೃಶ್ಚಿಕ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವದು. ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 6
ಧನು: ವಿಶೇಷ ರೀತಿಯ ಕಾರ್ಯ ಒದಗಿ ಬಂದು ಸಂತಸ ಉಂಟಾಗುತ್ತದೆ. ಸ್ಥಾನಮಾನಗಳಿಗೂ ಕೊರತೆ ಇಲ್ಲ. ವಿಶೇಷ ವಸ್ತು ಸಂಗ್ರಹ. ಅನಾರೋಗ್ಯ್ಗ ತೋರಿಬಂದು ಕಿರಿಕಿರಿ ಎನಿಸಬಹುದು. ಶುಭ ಸಂಖ್ಯೆ: 7
ಮಕರ: ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ.ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವದು. ಶುಭ ಸಂಖ್ಯೆ: 5
ಕುಂಭ: ಆತ್ಮೀಯರೊಂದಿಗೆ ಮನಸ್ತಾಪ ವಾಗುವ ಯೋಗವಿದೆ. ಸ್ವಂತ ಉದ್ಯಮಿಗಳು ಹಾನಿ ತಪ್ಪಿಸುವ ಉಪಾಯ ಮಾಡಿ. ವ್ಯಾಪಾರದ ವಿಷಯದಲ್ಲಿ ಮೋಸವಾಗುವ ಸಾಧ್ಯತೆ ಇದೆ. ಸಾಲಗಾರರು ಸಹಕಾರ ತೋರುವರು. ಶುಭ ಸಂಖ್ಯೆ: 2
ಮೀನ: ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅರ್ಧಕ್ಕೆನಿಂತ ಕೆಲಸಗಳು ಮುಂದುವರೆಯುವದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಶುಭ ಸಂಖ್ಯೆ: 3
ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937
Published On - 6:53 am, Sat, 27 February 21