ಲಾಕ್ ಡೌನ್ ಎಫೆಕ್ಟ್.. ಹೋಟೆಲ್ ಮಾಲೀಕ ನೇಣು ಬಿಗಿದುಕೊಂಡು ಆತ್ಮಹತ್ಯೆ
ಮಾನಸಿಕ ಖಿನ್ನತೆಗೆ ಒಳಗಾಗಿ ಹೊಟೇಲ್ ಮಾಲೀಕ ನೇಣು ಬಿಗಿದು ಶರಣಾಗಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಮಡಿಕೇರಿ: ಹೋಟೆಲ್ ಮಾಲೀಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂಡಸ್ಟ್ರಿಯಲ್ ಎಸ್ಟೇಟ್ ರಸ್ತೆಯ ಬಳಿ ನಡೆದಿದೆ. ಮೃತ ದುರ್ದೈವಿ ಪ್ರವೀಣ್ (34) ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ಪ್ರವೀಣ್ ಚಿಕ್ಕಮಗಳೂರಿನ ರೆಸಾರ್ಟ್ ಮ್ಯಾನೇಜರ್ ಆಗಿದ್ದರು. ಕೊರೊನಾ ಲಾಕ್ ಡೌನ್ನಿಂದಾಗಿ ಕೆಲಸ ಕಳೆದುಕೊಂಡು ಮನೆಯಲ್ಲಿಯೇ ಇದ್ದ. ಹಾಗಾಗಿ ಮೂರು ತಿಂಗಳ ಹಿಂದೆ ಮಡಿಕೇರಿಯಲ್ಲಿ ಹೋಟೆಲ್ ಆರಂಭಿಸಿದ್ದರು. ಆದರೂ, ಪ್ರವೀಣ್ ಜೀವನ ನಡೆಸಲು ಕಷ್ಟವಾಗುತ್ತಿತ್ತು. ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಪ್ರವೀಣ್ ಹೋಟೆಲ್ ಹಿಂಬದಿಯಲ್ಲಿದ್ದ ತನ್ನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಮಡಿಕೇರಿಯ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪತಿ ತನ್ನ ಶೀಲ ಶಂಕಿಸಿದ್ದಕ್ಕೆ ಮನನೊಂದ ಮಹಿಳೆ.. ಡೆತ್ನೋಟ್ ಬರೆದಿಟ್ಟು ನೇಣಿಗೆ ಶರಣು