ಹಾವೇರಿ: ಮನೆಯ ಮೇಲ್ಚಾವಣಿ ಕುಸಿದು ಬಿದ್ದು ವೃದ್ಧೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಮೈದೂರು ಗ್ರಾಮದಲ್ಲಿ ನಡೆದಿದೆ.
ಮನೆಯಲ್ಲಿ ಒಬ್ಬಳೆ ವಾಸವಾಗಿದ್ದ ಸುಶೀಲಮ್ಮ ಕುದರಿಹಾಳ (70) ಎಂಬ ವೃದ್ದೆ ರಾತ್ರಿ ಮಲಗಿದ್ದಾಗ ಮನೆಯ ಮೇಲ್ಚಾವಣಿ ಕುಸಿದು ಕೊನೆಯುಸಿರೆಳೆದಿದ್ದಾರೆ. ಸದ್ಯ ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.