AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃತಿಕ್​ ಜೊತೆ ರೊಮ್ಯಾನ್ಸ್​ ಮಾಡಲಿದ್ದಾರೆ ದೀಪಿಕಾ ಪಡುಕೋಣೆ: ಈ ಚಿತ್ರಕ್ಕೆ ನಿರ್ದೇಶಕರಾರು ಗೊತ್ತಾ?

ಹೃತಿಕ್​ ಹಾಗೂ ಟೈಗರ್​ ಶ್ರಾಫ್​ ಒಟ್ಟಾಗಿ ಕಾಣಿಸಿಕೊಂಡಿದ್ದ ವಾರ್​ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಧೂಳೆಬ್ಬಿಸಿತ್ತು. ಸಾಕಷ್ಟು ಆ್ಯಕ್ಷನ್​ಗಳಿಂದ ಈ ಚಿತ್ರಕ್ಕೆ ವಿಮರ್ಷಕರು ಹಾಗೂ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿತ್ತು.

ಹೃತಿಕ್​ ಜೊತೆ ರೊಮ್ಯಾನ್ಸ್​ ಮಾಡಲಿದ್ದಾರೆ ದೀಪಿಕಾ ಪಡುಕೋಣೆ: ಈ ಚಿತ್ರಕ್ಕೆ ನಿರ್ದೇಶಕರಾರು ಗೊತ್ತಾ?
ಹೃತೀಕ್ ರೋಷನ್ ಮತ್ತು ದೀಪಿಕಾ ಪಡುಕೋಣೆ
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Jan 10, 2021 | 4:25 PM

Share

ವಾರ್​ ಸಿನಿಮಾ ಹಿಟ್​ ಆದ ನಂತರದಲ್ಲಿ ನಟ ಹೃತಿಕ್​ ರೋಷನ್​ ಯಾವುದೇ ಪ್ರಾಜೆಕ್ಟ್​ ಒಪ್ಪಿಕೊಂಡಿಲ್ಲ. ಅವರ ಮುಂದಿನ ಚಿತ್ರ ಯಾವುದು ಎನ್ನುವ ಬಗ್ಗೆ ಸಾಕಷ್ಟು ಕುತೂಹಲಗಳಿವೆ. ಈಗ ಅವರ ಮುಂದಿನ ಚಿತ್ರದ ಬಗ್ಗೆ ಹೊಸ ವಿಚಾರವೊಂದು ಹೊರ ಬಿದ್ದಿದೆ. ಅವರ ಮುಂದಿನ ಸಿನಿಮಾದಲ್ಲಿ ದೀಪಿಕಾ ಜೊತೆ ಹೃತಿಕ್​ ರೊಮ್ಯಾನ್ಸ್​ ಮಾಡಲಿದ್ದಾರಂತೆ.

ತಂದೆ ರಾಕೇಶ್​ ರೋಷನ್​ ನಿರ್ದೇಶನದ ‘ಕ್ರಿಶ್​’ ಚಿತ್ರದಲ್ಲಿ ಹೃತಿಕ್​ ರೋಷನ್​ ನಟಿಸಿ ಯಶಸ್ಸು ಕಂಡಿದ್ದಾರೆ. ಈಗ ಈ ಸರಣಿಯ ನಾಲ್ಕನೇ ಸಿನಿಮಾ ಬರಲಿದೆ ಎಂದು ಹೇಳಲಾಗುತ್ತಿದೆಯಾದರೂ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ. ಈ ಮಧ್ಯೆ ಬಾಲಿವುಡ್​ ಅಂಗಳದಲ್ಲಿ ಹೊಸ ವಿಚಾರವೊಂದು ಹರಿದಾಡಲು ಆರಂಭಿಸಿದೆ.

ವಾರ್​ ನಿರ್ದೇಶಕ ಸಿದ್ಧಾರ್ಥ್​ ಆನಂದ್​ ಜೊತೆ ಹೃತಿಕ್​ ಮತ್ತೊಮ್ಮೆ ಕೈಜೋಡಿಸುತ್ತಿದ್ದಾರೆ. ಈ ಚಿತ್ರ ಸಾಕಷ್ಟು ಆ್ಯಕ್ಷನಿಂದ ಕೂಡಿರಲಿದ್ದು, ಚಿತ್ರಕ್ಕೆ ಫೈಟರ್​ ಎಂದು ಹೆಸರಿಡಲಾಗಿದೆ. ಇನ್ನು, ಚಿತ್ರದ ಹೀರೋಯಿನ್​ ಆಗಿ ದೀಪಿಕಾ ಪಡುಕೋಣೆ ಬಣ್ಣ ಹಚ್ಚಲಿದ್ದಾರೆ ಎನ್ನಲಾಗಿದೆ. ಸಿದ್ಧಾರ್ಥ್​ ಆನಂದ್​ ಸದ್ಯ, ಶಾರುಖ್​ ಖಾನ್​ ನಟನೆಯ ‘ಪಠಾಣ್’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಹೀಗಾಗಿ, 2021 ಮಧ್ಯದ ವೇಳೆಗೆ ಹೊಸ ಸಿನಿಮಾದ ಕೆಲಸ ಆರಂಭ ಆಗಲಿದೆಯಂತೆ.

ಹೃತಿಕ್​ ಹಾಗೂ ಟೈಗರ್​ ಶ್ರಾಫ್​ ಒಟ್ಟಾಗಿ ಕಾಣಿಸಿಕೊಂಡಿದ್ದ ವಾರ್​ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಧೂಳೆಬ್ಬಿಸಿತ್ತು. ಸಾಕಷ್ಟು ಆ್ಯಕ್ಷನ್​ಗಳಿಂದ ಕೂಡಿದ್ದ ಈ ಚಿತ್ರಕ್ಕೆ ವಿಮರ್ಶಕರು ಹಾಗೂ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದುಕೊಂಡಿತ್ತು.

ಬಾಲಿವುಡ್ ಗ್ರೀಕ್ ದೇವತೆಗೆ 47ರ ಹರೆಯ: ಭಾರತದ ಮೊದಲ ಸೂಪರ್ ಹೀರೊ ಹೃತಿಕ್ ರೋಷನ್​ಗೆ ಶುಭಾಶಯಗಳ ಮಹಾಪೂರ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!