AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ಯದಲ್ಲೇ ಹುಬ್ಬಳ್ಳಿಯಲ್ಲಿ.. ವಿಶ್ವದ ಅತಿ ಉದ್ದನೆಯ ರೈಲ್ವೆ ಪ್ಲಾಟ್ ಫಾರ್ಮ್!

ಹುಬ್ಬಳ್ಳಿ: ವಿಶ್ವದಲ್ಲೇ ಅತಿ ಉದ್ದದ ರೈಲ್ವೆ ಪ್ಲಾಟ್ ಫಾರ್ಮ್ ಹೊಂದಿರುವ ಹೆಗ್ಗಳಿಕೆಗೆ ಭಾಜನವಾಗಲಿದೆ ವಾಣಿಜ್ಯ ನಗರಿ ರೈಲು ನಿಲ್ದಾಣ. ಅವಳಿ ನಗರ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಈಗಿರುವ ಪ್ಲಾಟ್ ಫಾರ್ಮ್ ನಂ1 550 ಮೀಟರ್ ಉದ್ದವಿದ್ದು, ಅದನ್ನು 1,400 ಮೀಟರ್‌ಗೆ ಹೆಚ್ಚಿಸಲಾಗುತ್ತಿದೆ. ಹತ್ತು ಮೀಟರ್ ಅಗಲವಿರುತ್ತದೆ. ಈಗಿನ ತಪಾಸಣಾ ಕ್ಯಾರೇಜ್ ಮಾರ್ಗವನ್ನು ಪೂರ್ಣ ಪ್ಲಾಟ್ ಫಾರ್ಮ್ ಆಗಿ ಪರಿವರ್ತಿಸಲಾಗುತ್ತಿದೆ. ಈಗಾಗಲೇ ಕೆಲಸ ಆರಂಭವಾಗಿದ್ದು, ಈ ವರ್ಷದ ಅಂತ್ಯದ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿದೆ. ಈಶಾನ್ಯ ರೈಲ್ವೆಯ ಪ್ರಧಾನ ಕಚೇರಿ […]

ಸದ್ಯದಲ್ಲೇ ಹುಬ್ಬಳ್ಳಿಯಲ್ಲಿ.. ವಿಶ್ವದ ಅತಿ ಉದ್ದನೆಯ ರೈಲ್ವೆ ಪ್ಲಾಟ್ ಫಾರ್ಮ್!
ಆಯೇಷಾ ಬಾನು
ಆಯೇಷಾ ಬಾನು|

Updated on:Jun 05, 2020 | 3:13 PM

Share

ಹುಬ್ಬಳ್ಳಿ: ವಿಶ್ವದಲ್ಲೇ ಅತಿ ಉದ್ದದ ರೈಲ್ವೆ ಪ್ಲಾಟ್ ಫಾರ್ಮ್ ಹೊಂದಿರುವ ಹೆಗ್ಗಳಿಕೆಗೆ ಭಾಜನವಾಗಲಿದೆ ವಾಣಿಜ್ಯ ನಗರಿ ರೈಲು ನಿಲ್ದಾಣ. ಅವಳಿ ನಗರ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಈಗಿರುವ ಪ್ಲಾಟ್ ಫಾರ್ಮ್ ನಂ1 550 ಮೀಟರ್ ಉದ್ದವಿದ್ದು, ಅದನ್ನು 1,400 ಮೀಟರ್‌ಗೆ ಹೆಚ್ಚಿಸಲಾಗುತ್ತಿದೆ. ಹತ್ತು ಮೀಟರ್ ಅಗಲವಿರುತ್ತದೆ. ಈಗಿನ ತಪಾಸಣಾ ಕ್ಯಾರೇಜ್ ಮಾರ್ಗವನ್ನು ಪೂರ್ಣ ಪ್ಲಾಟ್ ಫಾರ್ಮ್ ಆಗಿ ಪರಿವರ್ತಿಸಲಾಗುತ್ತಿದೆ. ಈಗಾಗಲೇ ಕೆಲಸ ಆರಂಭವಾಗಿದ್ದು, ಈ ವರ್ಷದ ಅಂತ್ಯದ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿದೆ.

ಈಶಾನ್ಯ ರೈಲ್ವೆಯ ಪ್ರಧಾನ ಕಚೇರಿ ಹೊಂದಿರುವ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ 1,366 ಮೀಟರ್ ಉದ್ದದ ಪ್ಲಾಟ್‌ ಫಾರ್ಮ್ ಇದೆ. ಇದು ಸದ್ಯಕ್ಕೆ ವಿಶ್ವದ ಅತಿ ಉದ್ದದ ಪ್ಲಾಟ್‌ಫಾರ್ಮ್ ಎನ್ನುವ ಹೆಗ್ಗಳಿಕೆ ಹೊಂದಿದೆ. ಇದನ್ನೂ ಮೀರಿಸುವ ಉದ್ದನೆಯ ಪ್ಲಾಟ್‌ಫಾರ್ಮ್ ಹುಬ್ಬಳ್ಳಿಯಲ್ಲಿ ನಿರ್ಮಾಣವಾಗುತ್ತಿದೆ. ಹುಬ್ಬಳ್ಳಿ, ಬೆಂಗಳೂರು ಜೋಡಿ ರೈಲು ಮಾರ್ಗ ಕಾರ್ಯ ಹಿನ್ನೆಲೆಯಲ್ಲಿ ಅದು ಪೂರ್ಣಗೊಳಿಸುವ ಜೊತೆಗೆ ಹುಬ್ಬಳ್ಳಿ ನಿಲ್ದಾಣದಲ್ಲಿ ಒಟ್ಟು ಪ್ಲಾಟ್‌ಫಾರ್ಮ್‌ಗಳ ಸಂಖ್ಯೆಯನ್ನು 5ರಿಂದ 8ಕ್ಕೆ ಹೆಚ್ಚಿಸಲಾಗುತ್ತಿದೆ.

ಗದಗ ರಸ್ತೆಯಲ್ಲಿ ಹೊಸದಾಗಿ ಇನ್ನೊಂದು ಪ್ರವೇಶ ದ್ವಾರ ನಿರ್ಮಾಣವಾಗುತ್ತಿದೆ. ಪ್ಲಾಟ್ ಫಾರ್ಮ್ ನಿರ್ಮಾಣ, ಸಿಗ್ನಲ್, ವಿದ್ಯುತ್ ಸೇರಿದಂತೆ ಈ ಯೋಜನೆಗೆ ಒಟ್ಟು ₹90 ಕೋಟಿ ವೆಚ್ಚವಾಗಲಿದೆ. ಈ ರೀತಿ ಉದ್ದನೆಯ ರೈಲು ನಿಲ್ದಾಣದಿಂದ ವಾಣಿಜ್ಯ ನಗರಿಗೆ ಮತ್ತೊಂದು ಗರಿ ಬಂದಂತಾಗಿದೆ.

Published On - 8:32 am, Fri, 5 June 20

Follow Us
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!