
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಾತ್ರಿ ಸುರಿದ ಭಾರಿ ಮಳೆಗೆ ಯಮಲೂರಿನಲ್ಲಿ ಮುನೇಶ್ವರಸ್ವಾಮಿ ದೇವಸ್ಥಾನ ಜಲಾವೃತಗೊಂಡಿದೆ. ಕಳೆದ ಕೆಲ ದಿನಗಳಿಂದ ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆ ಬಹಳಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ನಗರದಲ್ಲಿ ಮಳೆಯಿಂದಾಗಿ ರಸ್ತೆಗಳು ಕೆರೆಯಂತಾಗಿವೆ. ಮನೆಗಳು, ದೇವಸ್ಥಾನಗಳಿಗೆ ಜಲದಿಗ್ಬಂಧನವಾಗಿದೆ.