ಬೆಂಗಳೂರು: ಅಡುಗೆ ಸಿಲಿಂಡರ್ ಸ್ಫೋಟಗೊಂಡು ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ HAL ಬಳಿಯ ಅನಸಂಧ್ರಪಾಳ್ಯದಲ್ಲಿ ನಡೆದಿದೆ. ಬೆಳಗ್ಗೆ 9 ಗಂಟೆ ಸಮಯಕ್ಕೆ ಸಿಲಿಂಡರ್ ಸ್ಫೋಟಗೊಂಡಿದೆ. ಈ ವೇಳೆ ಮನೆಯಲ್ಲಿದ್ದ ಹಾಸನ ಮೂಲದ ದಂಪತಿಗೆ ಗಂಭೀರ ಗಾಯಗಳಾಗಿವೆ. ಇಬ್ಬರನ್ನೂ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯಿಂದ ಮನೆಯಲ್ಲಿದ್ದ ಸಂಪೂರ್ಣ ವಸ್ತುಗಳು ಜಖಂ ಆಗಿವೆ. ಎರಡು ಅಂತಸ್ತಿನ ಕಟ್ಟಡದಲ್ಲಿ ಘಟನೆ ನಡೆದಿದ್ದು, ಕಟ್ಟಡದ ಮೊದಲನೇ ಮಹಡಿಯಲ್ಲಿ ಈ ಕುಟುಂಬ ಬಾಡಿಗೆಗೆ ವಾಸವಾಗಿತ್ತು. ಹೆಚ್ಎಎಲ್ ಪೊಲೀಸರು ಸ್ಥಳಕ್ಕೆ ಭೇಡಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Published On - 10:19 am, Sun, 31 May 20