
ಕೊಪ್ಪಳ: ಮರಕ್ಕೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ವಾಹನದಲ್ಲಿದ್ದ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದು ಆತನ ಪತ್ನಿ ಹಾಗೂ ಮಗಳು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನ ವಿಠಲಾಪೂರ ಗ್ರಾಮದ ಬಳಿ ನಡೆದಿದೆ. ಕುಟುಂಬವು ವಾಹನದಲ್ಲಿ ಕುಷ್ಟಗಿಯಿಂದ ರಾಯಚೂರಿನ ಕಡೆಗೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ.
ಚಾಲಕನ ನಿಯಂತ್ರಣ ತಪ್ಪಿ ಕಾರ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನು, ಮೃತನ ಗುರುತು ಪತ್ತೆಯಾಗಿಲ್ಲ. ಈ ನಡುವೆ ಚಾಲಕನ ಪತ್ನಿ ಹಾಗೂ ಮಗಳನ್ನ ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದಾರೆ.