
ಬೆಂಗಳೂರು: ವರದಕ್ಷಿಣೆಗಾಗಿ ಗೃಹಿಣಿಗೆ ಬೆಂಕಿ ಹಚ್ಚಿ ಕಿರುಕುಳ ನೀಡಿರುವ ಭೀಕರ ಘಟನೆಯೊಂದು ಟಿ.ಸಿ.ಪಾಳ್ಯದಲ್ಲಿ ಸಂಭವಿಸಿದೆ. ಪತಿ ಮತ್ತು ಕುಟುಂಬಸ್ಥರು ಸೇರಿ ಮಾಲಾ ಮಹೇಂದ್ರ ಸಿಂಗ್‌ಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ್ದಾರೆ.
ಗೃಹಿಣಿ ಮಾಲಾಳಿಗೆ ವರದಕ್ಷಿಣೆಗಾಗಿ ಪತಿ ಹಾಗೂ ಕುಟುಂಬಸ್ಥರು ಸೇರಿ ಬೆಂಕಿ ಹಚ್ಚಿ ಹತ್ಯೆಗೆ ಮುಂದಾಗಿದ್ದಾರೆ. ಈ ಪರಿಣಾಮ ಗೃಹಿಣಿ ಬೆಂಕಿಯಲ್ಲಿ ಅರ್ಧಂಬರ್ಧ ಬೆಂದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಲ ಮೂಲತಃ ಉತ್ತರ ಪ್ರದೇಶದವರು. ಕಳೆದ ಒಂದು ವರ್ಷದ ಹಿಂದೆ ಸೂರಜ್ ಸಿಂಗ್ ಎಂಬಾತನ ಜೊತೆ ವಿವಾಹವಾಗಿದ್ದರು. ಸುಮಾರು 15 ಲಕ್ಷ ಖರ್ಚು ಮಾಡಿ ಹೆಣ್ಣಿನ ಕಡೆಯವರು ಮದುವೆ ಮಾಡಿಕೊಟ್ಟಿದ್ದರು. ಮದುವೆಯಾದ ಬಳಿಕ ದಂಪತಿ ಬೆಂಗಳೂರಿಗೆ ಶಿಫ್ಟ್ ಆಗಿದ್ದರು.
ಆದ್ರೆ ಈ ವೇಳೆ ವರದಕ್ಷಿಣೆ ಕಿರುಕುಳ ಶುರುವಾಗಿದೆ. ಸೈಟ್ ಕೊಡಿಸುವಂತೆ ಪತಿ ಕುಟುಂಬದವರು ಡಿಮ್ಯಾಂಡ್ ಮಾಡಿದ್ದರಂತೆ. ಹೀಗಾಗಿ ಪತಿ, ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೇ ಮನೆಯಲ್ಲಿ ಒಂಟಿಯಾಗಿದ್ದ ಮಾಲ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ್ದಾನೆ. ಮಾಲಳ ಹೊಟ್ಟೆ ಹಾಗೂ ಗುಪ್ತಾಂಗಕ್ಕೆ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಘಟನೆ ಸಂಬಂಧ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
Published On - 9:43 am, Sat, 10 October 20