AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಬೈಎಲೆಕ್ಷನ್ ಮಾಸ್ಟರ್’ ರಿಸಲ್ಟ್​ಗೂ ಮುನ್ನ ಸಚಿವ ಸೋಮಣ್ಣ ಫುಲ್​ ಜೋಶ್!

ಬೆಂಗಳೂರು: 15 ಶಾಸಕರು ಅನರ್ಹಗೊಂಡ ಪ್ರಯುಕ್ತ ಮೊನ್ನೆ ನಡೆದ 15 ಅಸೆಂಬ್ಲಿ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ನಾಳಿದ್ದು ಹೊರಬೀಳಲಿದೆ. ಈ ಮಧ್ಯೆ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳಲ್ಲಿ ಆತಂಕ ಮನೆ ಮಾಡಿದೆ. ಗೆಲುವು ಯಾರದಾಗಲಿದೆಯೋ ಎಂಬುದು ಎಲ್ಲರ ದುಗುಡಕ್ಕೆ ಕಾರಣವಾಗಿದೆ. ಆದ್ರೆ ಬಿಜೆಪಿ ಪಾಳಯ ತುಸು ಹೆಚ್ಚೇ ಅನಿಸುವಷ್ಟು ಬೀಗುತ್ತಿದೆ. ಗೆಲುವು ನಮ್ಮದೇ, ನಮ್ಮ ಸರ್ಕಾರ ಅಧಿಕಾರದಲ್ಲಿ ಮುಂದುವರಿಯಲಿದೆ ಎಂದು ಆ ಪಕ್ಷದ ನಾಯಕರು ಆತ್ಮವಿಶ್ವಾಸದಲ್ಲಿದ್ದಾರೆ. ಇನ್ನು ಸಚಿವ ಸೋಮಣ್ಣ ಅವರಂತೂ ಫುಲ್​ ಜೋಶ್ ನಲ್ಲಿದ್ದಾರೆ. ಸಿಎಂ […]

‘ನಾನು ಬೈಎಲೆಕ್ಷನ್ ಮಾಸ್ಟರ್’ ರಿಸಲ್ಟ್​ಗೂ ಮುನ್ನ ಸಚಿವ ಸೋಮಣ್ಣ ಫುಲ್​ ಜೋಶ್!
Follow us
ಸಾಧು ಶ್ರೀನಾಥ್​
|

Updated on:Dec 07, 2019 | 12:03 PM

ಬೆಂಗಳೂರು: 15 ಶಾಸಕರು ಅನರ್ಹಗೊಂಡ ಪ್ರಯುಕ್ತ ಮೊನ್ನೆ ನಡೆದ 15 ಅಸೆಂಬ್ಲಿ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ನಾಳಿದ್ದು ಹೊರಬೀಳಲಿದೆ. ಈ ಮಧ್ಯೆ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳಲ್ಲಿ ಆತಂಕ ಮನೆ ಮಾಡಿದೆ. ಗೆಲುವು ಯಾರದಾಗಲಿದೆಯೋ ಎಂಬುದು ಎಲ್ಲರ ದುಗುಡಕ್ಕೆ ಕಾರಣವಾಗಿದೆ. ಆದ್ರೆ ಬಿಜೆಪಿ ಪಾಳಯ ತುಸು ಹೆಚ್ಚೇ ಅನಿಸುವಷ್ಟು ಬೀಗುತ್ತಿದೆ. ಗೆಲುವು ನಮ್ಮದೇ, ನಮ್ಮ ಸರ್ಕಾರ ಅಧಿಕಾರದಲ್ಲಿ ಮುಂದುವರಿಯಲಿದೆ ಎಂದು ಆ ಪಕ್ಷದ ನಾಯಕರು ಆತ್ಮವಿಶ್ವಾಸದಲ್ಲಿದ್ದಾರೆ. ಇನ್ನು ಸಚಿವ ಸೋಮಣ್ಣ ಅವರಂತೂ ಫುಲ್​ ಜೋಶ್ ನಲ್ಲಿದ್ದಾರೆ.

ಸಿಎಂ ಬಿಎಸ್‌ ಯಡಿಯೂರಪ್ಪ ಅವರನ್ನ ಇಂದು ಸಚಿವ ವಿ.ಸೋಮಣ್ಣ ಭೇಟಿಯಾಗಿ, ಫಲಿತಾಂಶದ ಬಗ್ಗೆ ಲೆಕ್ಕಾಚಾರ ಹಾಕಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ವಿ.ಸೋಮಣ್ಣ ‘ನಾನು ಉಪಚುನಾವಣೆಯ ಮಾಸ್ಟರ್’ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸೋಲು ಗೆಲುವಿಗಿಂತ ಸ್ಥಿರತೆ, ಅಸ್ಥಿರತೆ ಬಗ್ಗೆ ಜನ ಯೋಚಿಸಿದ್ದಾರೆ. ಬಿಜೆಪಿ ಸರ್ಕಾರವನ್ನು ಮುಂದುವರಿಸುವುದು ಜನರ ಉದ್ದೇಶವಾಗಿದೆ. ಉಪಚುನಾವಣೆಯಲ್ಲಿ ಬಿಜೆಪಿ 12ರಿಂದ 13 ಸ್ಥಾನ ಗೆಲ್ಲುತ್ತದೆ. ಸೋತವರಿಗೆ ಸಚಿವ ಸ್ಥಾನದ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತೆ. ಆದ್ರೆ ಸಿಎಂ ಬಿಎಸ್‌ವೈ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.

ಈಶ್ವರಪ್ಪ ಹೇಳಿಕೆಗೆ ಸೋಮಣ್ಣ ಜಾರಿಕೆ ಉತ್ತರ: ‘ವಯಸ್ಸಿಗೆ ಬಂದವರು ಐಶ್ವರ್ಯಾ ರೈ ಬೇಕೆಂದು ಬಯಸ್ತಾರೆ’ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿರುವುದಕ್ಕೆ ಸೋಮಣ್ಣ ಪ್ರತಿಕ್ರಿಯೆಯಿಸಿದ್ದಾರೆ. ಈಶ್ವರಪ್ಪಗೆ ವಯಸ್ಸಾಗಿದೆ, ಹೀಗಾಗಿ ಆ ರೀತಿ ಹೇಳಿದ್ದಾರೆ. K.S. ಈಶ್ವರಪ್ಪ ಹೇಳಿಕೆ ಅವರಿಗೆ ಸೇರಿದ್ದು ಎಂದು ಸೋಮಣ್ಣ ಜಾರಿಕೊಂಡಿದ್ದಾರೆ.

Published On - 12:02 pm, Sat, 7 December 19

ಬಿಗ್​ಬಾಸ್ ರಂಜಿತ್, ಮಾನಸ ಮದುವೆ, ಇಲ್ಲಿದೆ ನೋಡಿ ಮೆಹಂದಿ ವಿಡಿಯೋ
ಬಿಗ್​ಬಾಸ್ ರಂಜಿತ್, ಮಾನಸ ಮದುವೆ, ಇಲ್ಲಿದೆ ನೋಡಿ ಮೆಹಂದಿ ವಿಡಿಯೋ
ಸಾಂಬಾಂದಲ್ಲಿ ಗಡಿಯೊಳಗೆ ಉಗ್ರರ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ BSF
ಸಾಂಬಾಂದಲ್ಲಿ ಗಡಿಯೊಳಗೆ ಉಗ್ರರ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ BSF
ಬಂಕರ್​ಗಳಲ್ಲಿ ಅವಿತುಕೊಂಡಿರುವ ಪಾಕ್ ಪ್ರಧಾನಿ ಶರೀಫ್ ಮತ್ತು ಸೇನಾ ಮುಖ್ಯಸ್ಥ
ಬಂಕರ್​ಗಳಲ್ಲಿ ಅವಿತುಕೊಂಡಿರುವ ಪಾಕ್ ಪ್ರಧಾನಿ ಶರೀಫ್ ಮತ್ತು ಸೇನಾ ಮುಖ್ಯಸ್ಥ
ಸೇನೆಗೆ ಬಲ ತುಂಬಲು ಸಿದ್ಧ: ಹಾಸನದಲ್ಲಿ ನಿವೃತ್ತ ಯೋಧರ ಘೋಷಣೆ
ಸೇನೆಗೆ ಬಲ ತುಂಬಲು ಸಿದ್ಧ: ಹಾಸನದಲ್ಲಿ ನಿವೃತ್ತ ಯೋಧರ ಘೋಷಣೆ
ಸೇನೆಯೊಂದಿಗೆ ನಾವಿದ್ದೇವೆ ಅಂತ ಸೂಚಿಸಲು ತಿರಂಗ ಯಾತ್ರೆ: ದಿನೇಶ್ ಗುಂಡೂರಾವ್
ಸೇನೆಯೊಂದಿಗೆ ನಾವಿದ್ದೇವೆ ಅಂತ ಸೂಚಿಸಲು ತಿರಂಗ ಯಾತ್ರೆ: ದಿನೇಶ್ ಗುಂಡೂರಾವ್
ಸಿದ್ದಿ ಸಮುದಾಯದ ಜೊತೆ ಸರಳತೆಯ ಪಾಠ ಕಲಿತ ‘ಭರ್ಜರಿ ಬ್ಯಾಚುಲರ್ಸ್’
ಸಿದ್ದಿ ಸಮುದಾಯದ ಜೊತೆ ಸರಳತೆಯ ಪಾಠ ಕಲಿತ ‘ಭರ್ಜರಿ ಬ್ಯಾಚುಲರ್ಸ್’
ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಮತ್ತು ಸೇನಾ ಮುಖ್ಯಸ್ಥ ಮುನೀರ್ ನಾಪತ್ತೆ?
ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಮತ್ತು ಸೇನಾ ಮುಖ್ಯಸ್ಥ ಮುನೀರ್ ನಾಪತ್ತೆ?
Daily Devotional: ಯಾರಿಗೆಲ್ಲಾ ಮನೆ ಖರೀದಿ ಯೋಗವಿದೆ ತಿಳಿಯಿರಿ
Daily Devotional: ಯಾರಿಗೆಲ್ಲಾ ಮನೆ ಖರೀದಿ ಯೋಗವಿದೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯಿರಿ
ಐಎನ್‌ಎಸ್ ವಿಕ್ರಾಂತ್ ಪರಾಕ್ರಮ : ಪಾಕಿಸ್ತಾನದ ಕರಾಚಿ ಬಂದರು ಧ್ವಂಸ
ಐಎನ್‌ಎಸ್ ವಿಕ್ರಾಂತ್ ಪರಾಕ್ರಮ : ಪಾಕಿಸ್ತಾನದ ಕರಾಚಿ ಬಂದರು ಧ್ವಂಸ