AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಬಂಡೆ ಅಲ್ಲ, ಈ ಸರ್ಕಾರದ ವಿರುದ್ಧ ಜನ ಬೀಸುವ ಕಲ್ಲು: ಡಿ.ಕೆ. ಶಿವಕುಮಾರ್

ಬೆಂಗಳೂರು: ‘ನಾನು ಬಂಡೆಯಾಗಲು ಇಚ್ಚಿಸುವುದಿಲ್ಲ. ರಾಜ್ಯದ ಜನ ವಿಧಾನಸೌಧಕ್ಕೆ ಹತ್ತಿಕೊಂಡು ಹೋಗುವ ಮೆಟ್ಟಿಲಿನ ಚಪ್ಪಡಿಕಲ್ಲಾಗುವ ಆಸೆ. ಈ ಜನ ವಿರೋಧಿ ಬಿಜೆಪಿ ಸರ್ಕಾರದ ವಿರುದ್ಧ ಜನ ಬೀಸುವ ಕಲ್ಲಾಗುತ್ತೇನೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಪಕ್ಷದ ಅಭ್ಯರ್ಥಿ ಕುಸುಮಾ ಎಚ್ ಅವರ ಪರವಾಗಿ ಆರ್.ಆರ್. ನಗರದ ಐಡಿಯಲ್ ಹೋಂಮ್ಸ್ ನಲ್ಲಿ ಒಕ್ಕಲಿಗ ಸಮುದಾಯದ ನಾನಾ ಸಂಘಟನೆಗಳ ಮುಖಂಡರೊಂದಿಗೆ ಶುಕ್ರವಾರ ಸಭೆ ನಡೆಸಿದರು. […]

ನಾನು ಬಂಡೆ ಅಲ್ಲ, ಈ ಸರ್ಕಾರದ ವಿರುದ್ಧ ಜನ ಬೀಸುವ ಕಲ್ಲು: ಡಿ.ಕೆ. ಶಿವಕುಮಾರ್
ಸಾಧು ಶ್ರೀನಾಥ್​
|

Updated on: Oct 23, 2020 | 5:42 PM

Share

ಬೆಂಗಳೂರು: ‘ನಾನು ಬಂಡೆಯಾಗಲು ಇಚ್ಚಿಸುವುದಿಲ್ಲ. ರಾಜ್ಯದ ಜನ ವಿಧಾನಸೌಧಕ್ಕೆ ಹತ್ತಿಕೊಂಡು ಹೋಗುವ ಮೆಟ್ಟಿಲಿನ ಚಪ್ಪಡಿಕಲ್ಲಾಗುವ ಆಸೆ. ಈ ಜನ ವಿರೋಧಿ ಬಿಜೆಪಿ ಸರ್ಕಾರದ ವಿರುದ್ಧ ಜನ ಬೀಸುವ ಕಲ್ಲಾಗುತ್ತೇನೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಪಕ್ಷದ ಅಭ್ಯರ್ಥಿ ಕುಸುಮಾ ಎಚ್ ಅವರ ಪರವಾಗಿ ಆರ್.ಆರ್. ನಗರದ ಐಡಿಯಲ್ ಹೋಂಮ್ಸ್ ನಲ್ಲಿ ಒಕ್ಕಲಿಗ ಸಮುದಾಯದ ನಾನಾ ಸಂಘಟನೆಗಳ ಮುಖಂಡರೊಂದಿಗೆ ಶುಕ್ರವಾರ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಅವರು ಹೇಳಿದ್ದಿಷ್ಟು:

‘ಕೆಲವರು ಬಂಡೆನ ಡೈನಮೇಟ್ ಇಟ್ಟು ಪುಡಿ ಪುಡಿ ಮಾಡುತ್ತೇವೆ ಅಂತಿದ್ದಾರೆ. ಬಂಡೆ ಪುಡಿಯಾಗಿ ಜಲ್ಲಿಕಲ್ಲಾದರೆ ಮನೆ ಕಟ್ಟಲು, ದೇವರ ಗುಡಿಯ ಮುಂದೆ ಗರಡುಗಂಭವಾಗಿ ನಿಲ್ಲಲು, ವಿಗ್ರಹವಾಗಿ, ಚಪ್ಪಡಿ ಕಲ್ಲಾಗಿ ಜನರಿಗೆ ಉಪಯೋಗಲು ಸಾಧ್ಯ. ಮಿತಿ ಮೀರಿದರೆ.. ಈ ಜನ-ವಿರೋಧಿ ಸರ್ಕಾರಕ್ಕೆ ಜನ ಬೀಸುವ ಕಲ್ಲಾಗುವೆ. ಹೀಗಾಗಿ ನಾನು ಕೇವಲ ಬಂಡೆಯಾಗಲು ಇಚ್ಚಿಸುವುದಿಲ್ಲ. ಜನರಿಗೆ ನನ್ನಿಂದ ಉಪಯೋಗವಾದರೆ ಸಾಕು.

ನಾವು ಬೀಜ ಬಿತ್ತುವಾಗ ಅದು ಮರವಾಗಿ ಹಣ್ಣಾದರೂ ನೀಡಲಿ, ನೆರಳಾದರು ನೀಡಲಿ ಎಂಬ ಒಳ್ಳೆ ಭಾವನೆಯಿಂದ ಬಿತ್ತುತ್ತೇವೆ. ಎಲ್ಲ ಬೀಜಗಳು ಹಣ್ಣನೇ ನೀಡಬೇಕು ಎಂದು ಬಯಸುವುದಿಲ್ಲ. ಕೆಲವೊಮ್ಮೆ ಮರ ಬೆಳೆಸುವವರೇ ಒಬ್ಬರಾದರೆ.. ಮತ್ತೊಬ್ಬರು ಹಣ್ಣು ತಿನ್ನುತ್ತಾರೆ. ಯಾರೋ ಕಟ್ಟಿದ ಹುತ್ತದಲ್ಲಿ ವಿಷ ಸರ್ಪ ಬಂದು ಸೇರುತ್ತದೆ. ಇದು ಪ್ರಕೃತಿ ನಿಯಮ.

ಕುಸುಮ ಪತಿ ರವಿ ಪಾಪ ಯಾವುದೋ ಕಾರಣಕ್ಕೆ ಹೇಡಿತನ ತೋರಿಬಿಟ್ಟ ನಮ್ಮ ರವಿ ಪತ್ನಿ ಕುಸುಮ. ಅವರ ಕುಟುಂಬ ನನಗೆ ಮುಂಚೆಯಿಂದಲೂ ಗೊತ್ತಿದೆ. ಪಾಪ ಆತ ಯಾವುದೋ ಕಾರಣಕ್ಕೆ ಹೇಡಿತನ ತೋರಿಬಿಟ್ಟ. ಆತ ಯಾವುದೇ ಪರಿಸ್ಥಿತಿ ಇದ್ದರೂ ಧೈರ್ಯದಿಂದ ಎದುರಿಸಿ ತನ್ನ ತಂದೆ-ತಾಯಿ, ಕಟ್ಟಿಕೊಂಡ ಹೆಂಡತಿಯನ್ನು ನೋಡಿಕೊಳ್ಳಬೇಕಿತ್ತು. ನಮ್ಮ ಸಮಾಜ ಅವರನ್ನು ಎಷ್ಟು ಪ್ರೀತಿ, ಗೌರವದಿಂದ ನೋಡುತ್ತಿತ್ತು.

ಆದರೆ ನಷ್ಟ ಆಗಿದ್ದು ಯಾರಿಗೆ? ಆತನ ಸಾವಿಗೆ ಅನೇಕರು ಕೊಲೆಯಾಯ್ತು ಅಂತಾ ಧರಣಿ ಮಾಡಿದ್ದನ್ನು ನೋಡಿದ್ದೇವೆ. ನಮ್ಮದೇ ಸರ್ಕಾರ ಸಿಬಿಐ ತನಿಖೆಗೆ ಕೊಟ್ಟೆವು. ಯಾವ ಯಾವ ಹೇಳಿಕೆ ಕೊಡಿಸಿದ್ದಾರೆ ಎಂಬ ದಾಖಲೆಯೂ ನಮ್ಮ ಬಳಿ ಇದೆ. ಆದರೆ ನಾವು ಈ ವಿಚಾರವನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುವುದು ಬೇಡ.

ನಮ್ಮ ಹೆಣ್ಣು ಮಗಳು ಎಲ್ಲರ ಸಾಕ್ಷಿಯಾಗಿ ತಾಳಿ ಕಟ್ಟಿಸಿಕೊಂಡು, ಸಪ್ತಪದಿ ತುಳಿದು ಮದುವೆಯಾಗಿದ್ದಾಳೆ. ಆದರೆ ನಮ್ಮ ಶೋಭಕ್ಕ ಚುನಾವಣೆ ವೇಳೆ ಗಂಡನ ಹೆಸರು ಬಳಸಿಕೊಳ್ಳಬೇಡ ಅಂತಾರಲ್ಲ ಹೇಗೆ ಸಾಧ್ಯ? ಶೋಭಕ್ಕ ನೀನು, ನಿನ್ನ ಮಗಳೋ, ತಂಗಿನೋ ಆ ಸ್ಥಾನದಲ್ಲಿ ಇದ್ದಿದ್ದರೆ ಏನು ಹೇಳುತ್ತಿದೆ.

ರಾಜಕಾರಣಕ್ಕೆ ಸಂಪ್ರದಾಯವನ್ನೇ ತೆಗೆಯಬೇಕು ಎನ್ನುವುದು ಎಷ್ಟು ಸರಿ? ನಾನು ಕುಸುಮ ಅವರನ್ನು ಕೇಳಿದೆ ಮತದಾರ ಗುರುತಿನ ಚೀಟಿಯಲ್ಲಿ ಏನಂತಾ ಹೆಸರಿದೆ ಎಂದು. ಆರಂಭದಲ್ಲಿ ಕುಸುಮಾ ಹೆಚ್ ಅಂತಾ ಕೊಟ್ಟಿದ್ದು ಹಾಗೆ ಇದೆ ಎಂದರು. ಆದರೆ ಪಾಸ್ ಪೋರ್ಟ್ ಇತರ ದಾಖಲೆಯಲ್ಲಿ ಕುಸುಮ ಡಿ.ಕೆ ರವಿ ಅಂತಾನೆ ಇದೆ.

ನಾನು-ಸುರೇಶ್ ಕೂತು ಚರ್ಚಿಸಿ ಕುಸುಮಗೆ ಪಕ್ಷದ ಅಭ್ಯರ್ಥಿಯಾಗಿ ಮಾಡಿದೆವು ಹೆಣ್ಣು ಮಗಳು ನೊಂದಿದ್ದಾಳೆ. ಸಮಾಜ ಸೇವೆ ಮಾಡಲು ಮುಂದೆ ಬಂದಿದ್ದಾಳೆ. ಅಂತಾ ನಾನು ಹಾಗೂ ಸುರೇಶ್ ಕೂತು ಮಾತನಾಡಿ ಈಕೆಯನ್ನು ಪಕ್ಷದ ಅಭ್ಯರ್ಥಿಯಾಗಿ ಮಾಡಲು ನಿರ್ಧರಿಸಿದೆವು. ಕಳೆದ ಎರಡು ಬಾರಿ ಈ ವ್ಯಕ್ತಿಯನ್ನು ಗೆಲ್ಲಿಸಲು ಶ್ರಮಪಟ್ಟಿದ್ದೆವು. ಆದರೆ ಈ ವ್ಯಕ್ತಿ ನಮ್ಮ ಮೂರು ಹೆಣ್ಣು ಮಕ್ಕಳಿಗೆ ಕಿರುಕುಳ ನೀದಿದ್ದನ್ನು ನಾವು ನೋಡಿದ್ದೇವೆ. ಆ ಸಮಯದಲ್ಲಿ ನಾನು ಸೇರಿದಂತೆ ಯಾರೂ ಆತನ ನೆರವಿಗೆ ಬರಲಿಲ್ಲ. ಮುಖ್ಯಮಂತ್ರಿ ಹಾಗೂ ಗೃಹ ಸಚಿವರಾಗಿದ್ದ ಪರಮೇಶ್ವರ್ ಅವರ ಮನೆಗೆ ಹೋಗಿ ಈ ರೀತಿ ನಡೆಯುತ್ತಿದೆ, ಈತನಿಗೆ ಎಚ್ಚರಿಕೆ ನೀಡಬೇಕು ಎಂದು ಹೇಳಿದ್ದೆ.

ಈಗ ನವರಾತ್ರಿ ನಡೆಯುತ್ತಿದೆ. ಈ ಕ್ಷೇತ್ರಕ್ಕೆ ರಕ್ಷಣೆ ನೀಡಲು ದುರ್ಗಾದೇವಿ, ರಾಜರಾಜೇಶ್ವರಿ ಆಶೀರ್ವಾದ ಬೇಕಿದೆ. ಈ ದೇವತೆಗಳ ಆಶೀರ್ವಾದದೊಂದಿಗೆ ನಾವು ಕ್ಷೇತ್ರದ ಹಿತ ಕಾಯಲು ನೊಂದು ಬೆಂದಿರುವ ಹೆಣ್ಣು ಮಗಳನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದೇವೆ.

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ