ಕೋಡಿಹಳ್ಳಿ ಚಂದ್ರಶೇಖರ್ಗೂ ನನಗೂ ಯಾವುದೇ ಸಂಬಂಧವಿಲ್ಲ.. ಈಗಾಗಲೇ ರಾಜ್ಯದಲ್ಲಿ ಬಸ್ ಸಂಚಾರ ಆರಂಭವಾಗಿದೆ -ಸಚಿವ ಸವದಿ
ಕೋಡಿಹಳ್ಳಿ ಚಂದ್ರಶೇಖರ್ಗೂ ನಮಗೂ ಯಾವುದೇ ಸಂಬಂಧವಿಲ್ಲ.. ಈಗಾಗಲೇ ರಾಜ್ಯದಲ್ಲಿ ಬಸ್ ಸಂಚಾರ ಆರಂಭವಾಗಿದೆ ಎಂದು ಬೆಂಗಳೂರಿನಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ.
ಬೆಂಗಳೂರು: ಸಾರಿಗೆ ಸಿಬ್ಬಂದಿ ಮುಷ್ಕರ ವಾಪಸ್ ಬಗ್ಗೆ ಮಾಧ್ಯಮಗಳ ಮೂಲಕವೇ ನನಗೆ ಮಾಹಿತಿ ಸಿಕ್ಕಿದೆ. ಕೋಡಿಹಳ್ಳಿ ಚಂದ್ರಶೇಖರ್ಗೂ ನಮಗೂ ಯಾವುದೇ ಸಂಬಂಧವಿಲ್ಲ.. ಈಗಾಗಲೇ ರಾಜ್ಯದಲ್ಲಿ ಬಸ್ ಸಂಚಾರ ಆರಂಭವಾಗಿದೆ ಎಂದು ಬೆಂಗಳೂರಿನಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ.
ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಿ ಎಂದು ಆಗ್ರಹಿಸಿ ಸತತ ಮೂರುದಿನಗಳ ಕಾಲ ರಾಜ್ಯಾದ್ಯಂತ ಬಸ್ ಸೇವೆ ಸ್ಥಗಿತಗೊಳಿಸಲಾಗಿತ್ತು. ಇಂದು ಈ ಪ್ರತಿಭಟನೆ 4ನೇ ದಿನಕ್ಕೆ ಕಾಲಿಟ್ಟಿದೆ. ನಿನ್ನೆ ರಾತ್ರಿ ಮುಷ್ಕರವನ್ನು ಹಿಂಪಡೆಯುವುದಾಗಿ ತಿಳಿಸಿದ್ದ ಸಾರಿಗೆ ನೌಕರರು ಇಂದೂ ಕೂಡ ಮುಷ್ಕರವನ್ನು ಮುಂದುವರೆಸಿದ್ದಾರೆ. ಆದರೆ ಕೆಲವೆಡೆ ಪೊಲೀಸ್ ಭದ್ರತೆಯಲ್ಲಿ ಬಸ್ ಸಂಚಾರ ಆರಂಭವಾಗಿದೆ. ಈ ಬಗ್ಗೆ ಮಾಧ್ಯಮಗಳ ಜೊತೆ ಮಾಡಿದ ಲಕ್ಷ್ಮಣ ಸವದಿ, ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಹರಿ ಹೈದಿದ್ದಾರೆ.
ಸಾರಿಗೆ ಸಿಬ್ಬಂದಿಯನ್ನು ಸರ್ಕಾರಿ ನೌಕರರಾಗಿ ಪರಿಗಣಿಸಲ್ಲ: ಸಾರಿಗೆ ಸಿಬ್ಬಂದಿ ಮುಷ್ಕರ ವಾಪಸ್ ಬಗ್ಗೆ ಮಾಧ್ಯಮಗಳ ಮೂಲಕವೇ ನನಗೆ ಮಾಹಿತಿ ಸಿಕ್ಕಿದೆ. ಈಗಾಗಲೇ ರಾಜ್ಯದಲ್ಲಿ ಬಸ್ ಸಂಚಾರ ಆರಂಭವಾಗಿದೆ. ಮುಷ್ಕರ ವಾಪಸ್ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸುವೆ.
ನಿನ್ನೆಯ ದಿನ ಏನೆಲ್ಲಾ ಆಯಿತೆಂದು ಎಲ್ಲರಿಗೂ ಗೊತ್ತಿದೆ. ಆರ್ಥಿಕ ಇಲಾಖೆ ಸಾಧ್ಯ ಇಲ್ಲವೆಂದು ಮಾಹಿತಿ ನೀಡಿದೆ. ಹೀಗಾಗಿ ಸರ್ಕಾರಿ ನೌಕರರಾಗಿ ಪರಿಗಣಿಸಲು ಸಾಧ್ಯವಿಲ್ಲ. ಕೋಡಿಹಳ್ಳಿ ಚಂದ್ರಶೇಖರ್ ಪ್ರತಿಭಟನೆ ರಾಜಕೀಯಪ್ರೇರಿತ. ಆತನಿಗೂ ನಮಗೂ ಸಂಬಂಧವಿಲ್ಲ. ನಮ್ಮ ಕರೆಗೆ ಓಗೊಟ್ಟು ಸಿಬ್ಬಂದಿ ಇಂದು ಹಾಜರಾಗಿದ್ದಾರೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದರು.
ಮೆಜೆಸ್ಟಿಕ್ ನಿಲ್ದಾಣಕ್ಕೆ 8 ಬಿಎಂಟಿಸಿ ಬಸ್ಗಳ ಆಗಮನ.. ಶಿವಾಜಿನಗರದಲ್ಲೂ ಬಸ್ ಸಂಚಾರ