ಮೈಸೂರು ಶಕ್ತಿ ದೇವತೆ! ಅಧಿಕಾರ ಸ್ವೀಕಾರಕ್ಕೂ ಮುನ್ನ ಚಾಮುಂಡಿ ಆಶೀರ್ವಾದ ಪಡೆದ ರೋಹಿಣಿ
ಮೈಸೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರಕ್ಕೂ ಮುನ್ನ ಜಿಲ್ಲೆಯ ಶಕ್ತಿ ದೇವತೆ ಚಾಮುಂಡಿ ದರ್ಶನಕ್ಕೆ ತೆರಳಿದ ಮೈಸೂರಿನ ನೂತನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ದಾಸರಿ ಅವರು ಚಾಮುಂಡಿ ಬೆಟ್ಟಕ್ಕೆ ತೆರಳಿ, ದೇವಿಯ ಆಶೀರ್ವಾದ ಪಡೆದರು. ಖಡಕ್ ಅಧಿಕಾರಿ ರೋಹಿಣಿ ಸಿಂಧೂರಿ, ಇದೇ ವೇಳೆ ನಾಡಿನ ಅಧಿದೇವತೆ ತಾಯಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಮೈಸೂರಿನಲ್ಲೇ ಆಡಳಿತ ತರಬೇತಿ ಪಡೆದಿದ್ದೇನೆ ಮೈಸೂರು ಜಿಲ್ಲೆಯಲ್ಲಿ ಕೋವಿಡ್ ಹೆಚ್ಚಾಗಿದೆ. ದಸರಾಗೆ ಸಿದ್ಧತೆ ಆರಂಭವಾಗಿದೆ. ಈ ಎರಡು ವಿಚಾರದ ಬಗ್ಗೆ […]

ಮೈಸೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರಕ್ಕೂ ಮುನ್ನ ಜಿಲ್ಲೆಯ ಶಕ್ತಿ ದೇವತೆ ಚಾಮುಂಡಿ ದರ್ಶನಕ್ಕೆ ತೆರಳಿದ ಮೈಸೂರಿನ ನೂತನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ದಾಸರಿ ಅವರು ಚಾಮುಂಡಿ ಬೆಟ್ಟಕ್ಕೆ ತೆರಳಿ, ದೇವಿಯ ಆಶೀರ್ವಾದ ಪಡೆದರು.
ಖಡಕ್ ಅಧಿಕಾರಿ ರೋಹಿಣಿ ಸಿಂಧೂರಿ, ಇದೇ ವೇಳೆ ನಾಡಿನ ಅಧಿದೇವತೆ ತಾಯಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಮೈಸೂರಿನಲ್ಲೇ ಆಡಳಿತ ತರಬೇತಿ ಪಡೆದಿದ್ದೇನೆ
ಮೈಸೂರು ಜಿಲ್ಲೆಯಲ್ಲಿ ಕೋವಿಡ್ ಹೆಚ್ಚಾಗಿದೆ. ದಸರಾಗೆ ಸಿದ್ಧತೆ ಆರಂಭವಾಗಿದೆ. ಈ ಎರಡು ವಿಚಾರದ ಬಗ್ಗೆ ಹೆಚ್ಚು ಗಮನ ಹರಿಸುತ್ತೇನೆ. ತುರ್ತಾಗಿ ಅಧಿಕಾರಿಗಳ ಸಭೆ ನಡೆಸುತ್ತೇನೆ. ಮೈಸೂರು ನನಗೆ ಹೊಸದಲ್ಲ. ಮೈಸೂರಿನಲ್ಲೇ ಆಡಳಿತ ತರಬೇತಿ ಪಡೆದಿದ್ದೇನೆ ಎಂದು ನೂತನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದಾರೆ.





Published On - 11:18 am, Tue, 29 September 20
