ಎರಡೂ ಡೋಸ್ ಲಸಿಕೆ ಪಡೆದವರಿಗೆ ಐಸಿಎಂಆರ್​ನಿಂದ ಒಳ್ಳೇ ಸುದ್ದಿ

ಕೊವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆಗಳ ಪೈಕಿ ಯಾವುದು ಹೆಚ್ಚು ಪರಿಣಾಮಕಾರಿ ಎನ್ನುವುದರ ಬಗ್ಗೆಯೂ ಅಧ್ಯಯನವು ಬೆಳಕು ಚೆಲ್ಲಿದೆ.

ಎರಡೂ ಡೋಸ್ ಲಸಿಕೆ ಪಡೆದವರಿಗೆ ಐಸಿಎಂಆರ್​ನಿಂದ ಒಳ್ಳೇ ಸುದ್ದಿ
ಕೊರೊನಾ ಲಸಿಕೆ
Follow us
Team Veegam
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jun 25, 2021 | 5:50 PM

ದೆಹಲಿ: ಕೊವಿಡ್ ತಡೆ ಲಸಿಕೆಗಳ ಎರಡೂ ಡೋಸ್ ಪಡೆದ ಕೆಲ ಒಡಿಶಾ ಸೋಂಕಿತರನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಪಾಸಣೆಗೆ ಒಳಪಡಿಸಿದೆ. 361 ಮಂದಿಯ ಗುಂಪನ್ನು ಒಂದು ಮಾದರಿ ಎಂದು ಪರಿಗಣಿಸಿ ಈ ಸಂಶೋಧನೆ ನಡೆಸಲಾಗಿದೆ.

ಈ ಪೈಕಿ 274 ಮಂದಿ ಲಸಿಕೆಯ ಎರಡೂ ಡೋಸ್ ಪಡೆದ ನಂತರ ಸೋಂಕಿತರಾಗಿದ್ದರು. ಇವರೆಲ್ಲರೂ ಲಸಿಕೆ ಪಡೆದು 14 ದಾಟಿದ್ದವರು ಎನ್ನುವುದು ಗಮನಾರ್ಹ ಸಂಗತಿ. ಏಕೆಂದರೆ ಲಸಿಕೆ ಪಡೆದ 14 ದಿನಗಳ ನಂತರ ದೇಹದಲ್ಲಿ ಪ್ರತಿಕಾಯಗಳು ಪೂರ್ಣಪ್ರಮಾಣದಲ್ಲಿ ಬೆಳೆದಿರುತ್ತವೆ ಎಂದು ತಜ್ಞರು ಹೇಳಿದ್ದಾರೆ.

ಒಡಿಶಾದ ವಿವಿಧ ಆಸ್ಪತ್ರೆಗಳಲ್ಲಿ ಮಾರ್ಚ್ 1ರಿಂದ ಜೂನ್ 10ರ ನಡುವಣ ಅವಧಿಯಲ್ಲಿ ವೈರಾಣುಗಳ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಈ ವೇಳೆ ಒಂದೇ ಬಾರಿ ಲಸಿಕೆ ಪಡೆದ ಕೆಲವರಿಂದಲೂ ಮಾದರಿಗಳನ್ನು ಸಂಗ್ರಹಿಸಲಾಗಿದೆ. ನಂತರ ಈ ಮಾದರಿಗಳನ್ನು ಕೂಲಂಕಶ ತಪಾಸಣೆಗೆ ಒಳಪಡಿಸಲಾಯಿತು.

ಈ ವೇಳೆ ಕೆಲ ಅಚ್ಚರಿಯ ವಿಚಾರಗಳು ಹೊರಬಿದ್ದವು. ಲಸಿಕೆಯ ಎರಡೂ ಡೋಸ್ ಪಡೆದುಕೊಂಡವರ ಪೈಕಿ ಶೇ 83ರಷ್ಟು ಜನರಲ್ಲಿ ರೋಗಲಕ್ಷಣಗಳು ಕಾಣಿಸಿಕೊಂಡಿದ್ದವು. ಈ ಪೈಕಿ ಶೇ 9.9ರಷ್ಟು ಸೋಂಕಿತರಿಗೆ ಮಾತ್ರ ಆಸ್ಪತ್ರೆಗೆ ದಾಖಲಾಗಬೇಕಾದ ಅಗತ್ಯ ಕಂಡುಬಂತು. ಲಸಿಕೆ ಪಡೆದುಕೊಂಡವರು ಒಂದು ವೇಳೆ ಸೋಂಕಿತರಾದರೂ ಆಸ್ಪತ್ರೆಗೆ ದಾಖಲಾಗಬೇಕಾದ ಅಗತ್ಯ ಹೆಚ್ಚು ಬೀಳುವುದಿಲ್ಲ ಎಂದು ಐಸಿಎಂಆರ್​ನ ಈ ಸಂಶೋಧನೆಯು ಸಾಬೀತುಪಡಿಸಿತು.

ಪರಿಶೀಲನೆಗೆ ಒಳಪಡಿಸಿದ 361 ಮಾದರಿಗಳ ಪೈಕಿ ಶೇ 76ರಷ್ಟು ಮಾತ್ರ ಎರಡೂ ಡೋಸ್ ಲಸಿಕೆ ಪಡೆದುಕೊಂಡ 14 ದಿನಗಳ ನಂತರ ಸೋಂಕಿತರಾದರು. ಈ ಅಧ್ಯಯನವನ್ನು ಇತರ ತಜ್ಞರು ಇನ್ನೂ ದೃಢಪಡಿಸಿಲ್ಲ. ಎರಡೂ ಡೋಸ್​ ಲಸಿಕೆ ಪಡೆದುಕೊಂಡವರ ಪೈಕಿ 27 ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಪೈಕಿ ಒಬ್ಬರು ಮಾತ್ರ ಮೃತಪಟ್ಟಿದ್ದರು ಎಂದು ಅಧ್ಯಯನವು ಹೇಳಿದೆ.

ಕೊವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆಗಳ ಪೈಕಿ ಯಾವುದು ಹೆಚ್ಚು ಪರಿಣಾಮಕಾರಿ ಎನ್ನುವುದರ ಬಗ್ಗೆಯೂ ಅಧ್ಯಯನವು ಬೆಳಕು ಚೆಲ್ಲಿದೆ. ಸೋಂಕಿನ ವಿರುದ್ಧ ಕೋವಿಶೈಲ್ಡ್​ಗಿಂತಲೂ ಕೊವ್ಯಾಕ್ಸಿನ್ ಹೆಚ್ಚು ಪರಿಣಾಮಕಾರಿ ಎಂದು ಅಧ್ಯಯನ ಹೇಳಿದೆ. ಕೊವ್ಯಾಕ್ಸಿನ್ ಲಸಿಕೆ ಪಡೆದುಕೊಂಡವರ ಪೈಕಿ ಶೇ 7.71ರಷ್ಟು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದರೆ, ಕೊವಿಶೀಲ್ಡ್ ಲಸಿಕೆ ಪಡೆದವರ ಪೈಕಿ ಶೇ 96.7ರಷ್ಟು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

(ICMR Study on Fully Jabed has Good News Infection rate is low for Fully Jabbed)

ಇದನ್ನೂ ಓದಿ: Delta Plus Variant: ಡೆಲ್ಟಾ ಪ್ಲಸ್​ ವಿರುದ್ಧ ಯಾವ ಕಂಪೆನಿಯ ಕೊರೊನಾ ಲಸಿಕೆ ಹೆಚ್ಚು ಪರಿಣಾಮಕಾರಿ?

ಇದನ್ನೂ ಓದಿ: 1.89 ಕೋಟಿ ಡೋಸ್ ಬಳಕೆಯಾಗದ ಕೊವಿಡ್ ಲಸಿಕೆ ರಾಜ್ಯಗಳಲ್ಲಿವೆ: ಕೇಂದ್ರ ಆರೋಗ್ಯ ಇಲಾಖೆ

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು