ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷಕ್ಕೆ ಇಟಲಿಯ ರಾಣಿಯೇ (Italy madam) ಬಂಡವಾಳವಾದರೆ ಬಿಜೆಪಿಗೆ ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟು ದೇಶದ ಪ್ರಧಾನ ಮಂತ್ರಿಯಾಗುವ ಮಟ್ಟಕ್ಕೆ ಬೆಳೆದ ನರೇಂದ್ರ ಮೋದಿಯವರೇ (PM Narendra Modi) ಬಂಡವಾಳ ಎಂದು ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ (CT Ravi) ಚಿಕ್ಕಮಗಳೂರಿನಲ್ಲಿ ಇಂದು ಹೇಳಿದರು. ಕಳೆದ 20 ವರ್ಷಗಳಿಂದ ಒಂದೇ ಒಂದು ಹಗರಣವಿಲ್ಲದೆ ಮುಖ್ಯಮಂತ್ರಿ ಮತ್ತು ಪ್ರಧಾನ ಮಂತ್ರಿಯಾಗಿ ಅಧಿಕಾರ ನಡೆಸಿಕೊಂಡು ಬಂದಿರುವ ಮೋದಿಯವರ ಕೆಲಸಗಳನ್ನು ಬೇಕಿದ್ದರೆ ಕಾಂಗ್ರೆಸ್ ಪಕ್ಷದ ನಾಯಕರು ಸಹ ಕೊಂಡಾಡಲಿ. ಆಗಲಾದರೂ ಅವರು ಚುನಾವಣೆಯಲ್ಲಿ ಸ್ಪರ್ಧಿಸಿ ಠೇವಣಿ ಕಳೆದುಕೊಳ್ಳುವ ಅವಮಾನದಿಂದ ಬಚಾವಾಗಬಹುದು ಎಂದು ರವಿ ವ್ಯಂಗ್ಯವಾಡಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.