ಕಾಂಗ್ರೆಸ್ ಪಕ್ಷಕ್ಕೆ ಸೋನಿಯ ಗಾಂಧಿ ಬಂಡವಾಳವಾದರೆ ನಮಗೆ ಮಣ್ಣಿನ ಮಗ ಪ್ರಧಾನಿ ಮೋದಿಯವರೇ ಧೀಶಕ್ತಿ: ಸಿಟಿ ರವಿ, ಬಿಜೆಪಿ ಶಾಸಕ

ಅರುಣ್​ ಕುಮಾರ್​ ಬೆಳ್ಳಿ

Updated on: Jan 21, 2023 | 3:12 PM

ಕಳೆದ 20 ವರ್ಷಗಳಿಂದ ಒಂದೇ ಒಂದು ಹಗರಣವಿಲ್ಲದೆ ಮುಖ್ಯಮಂತ್ರಿ ಮತ್ತು ಪ್ರಧಾನ ಮಂತ್ರಿಯಾಗಿ ಅಧಿಕಾರ ನಡೆಸಿಕೊಂಡು ಬಂದಿರುವ ಮೋದಿಯವರ ಕೆಲಸಗಳನ್ನು ಬೇಕಿದ್ದರೆ ಕಾಂಗ್ರೆಸ್ ಪಕ್ಷದ ನಾಯಕರು ಸಹ ಕೊಂಡಾಡಲಿ ಎಂದು ರವಿ ಹೇಳಿದರು.

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷಕ್ಕೆ ಇಟಲಿಯ ರಾಣಿಯೇ (Italy madam) ಬಂಡವಾಳವಾದರೆ ಬಿಜೆಪಿಗೆ ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟು ದೇಶದ ಪ್ರಧಾನ ಮಂತ್ರಿಯಾಗುವ ಮಟ್ಟಕ್ಕೆ ಬೆಳೆದ ನರೇಂದ್ರ ಮೋದಿಯವರೇ (PM Narendra Modi) ಬಂಡವಾಳ ಎಂದು ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ (CT Ravi) ಚಿಕ್ಕಮಗಳೂರಿನಲ್ಲಿ ಇಂದು ಹೇಳಿದರು. ಕಳೆದ 20 ವರ್ಷಗಳಿಂದ ಒಂದೇ ಒಂದು ಹಗರಣವಿಲ್ಲದೆ ಮುಖ್ಯಮಂತ್ರಿ ಮತ್ತು ಪ್ರಧಾನ ಮಂತ್ರಿಯಾಗಿ ಅಧಿಕಾರ ನಡೆಸಿಕೊಂಡು ಬಂದಿರುವ ಮೋದಿಯವರ ಕೆಲಸಗಳನ್ನು ಬೇಕಿದ್ದರೆ ಕಾಂಗ್ರೆಸ್ ಪಕ್ಷದ ನಾಯಕರು ಸಹ ಕೊಂಡಾಡಲಿ. ಆಗಲಾದರೂ ಅವರು ಚುನಾವಣೆಯಲ್ಲಿ ಸ್ಪರ್ಧಿಸಿ ಠೇವಣಿ ಕಳೆದುಕೊಳ್ಳುವ ಅವಮಾನದಿಂದ ಬಚಾವಾಗಬಹುದು ಎಂದು ರವಿ ವ್ಯಂಗ್ಯವಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.