AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು IISC ಸಂಸ್ಥೆಯಲ್ಲಿ ಒಂದೇ ದಿನ ಇಬ್ಬರು ವಿದ್ಯಾರ್ಥಿಗಳ ಸಾವು

ಒಂದ್ಕಡೆ ರಾಜ್ಯದಲ್ಲಿ ರಾಜಕೀಯ ಚರ್ಚೆಗಳು ಗರಿಗೆದರಿದ್ದಾಗ ಮತ್ತೊಂದ್ಕಡೆ ಪ್ರತಿಷ್ಠಿತ ಇಂಡಿಯನ್ ಇನ್ಸ್​ಟಿಟ್ಯೂಟ್‌ ಆಫ್ ಸೈನ್ಸ್ ಪಾಲಿಗೆ ಕರಾಳ ದಿನ ಎದುರಾಗಿತ್ತು. ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಇಡೀ ಕ್ಯಾಂಪಸ್ ಪಾಲಿಗೆ ಬ್ಲ್ಯಾಕ್ ಡೇ ಆಗಿತ್ತು.

ಬೆಂಗಳೂರು IISC ಸಂಸ್ಥೆಯಲ್ಲಿ ಒಂದೇ ದಿನ ಇಬ್ಬರು ವಿದ್ಯಾರ್ಥಿಗಳ ಸಾವು
ಐಐಎಸ್​ಸಿ ಕ್ಯಾಂಪಸ್
ಆಯೇಷಾ ಬಾನು
|

Updated on:Mar 09, 2021 | 10:55 AM

Share

ಅದು ಪ್ರತಿಷ್ಠಿತ ವಿದ್ಯಾಸಂಸ್ಥೆ. ಅಂತಾರಾಷ್ಟ್ರೀಯ ಮಟ್ಟದಲ್ಲೂ ಗುರುತಿಸಿಕೊಂಡಿರುವ ನಮ್ಮ ದೇಶದ ಹೆಮ್ಮೆಯ ಪ್ರತೀಕ. ಆದರೆ ಆ ಸಂಸ್ಥೆಯ ನೆಮ್ಮದಿ ಹಾರಿಹೋಗಿತ್ತು. ಒಂದೇ ದಿನ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

ಒಂದೇ ದಿನ ಇಬ್ಬರು ವಿದ್ಯಾರ್ಥಿಗಳ ಸಾವು ಹೌದು ಐಐಎಸ್​ಸಿ ಕ್ಯಾಂಪಸ್​ನಲ್ಲಿ ಇಬ್ಬರು ವಿದ್ಯಾರ್ಥಿಗಳು ಒಂದೇ ದಿನ ಮೃತಪಟ್ಟಿದ್ದಾರೆ. ನ್ಯಾನೋ ವಿಜ್ಞಾನ ಹಾಗೂ ಇಂಜಿನಿಯರಿಂಗ್​ನಲ್ಲಿ ಪಿಹೆಚ್​ಡಿ ಮಾಡ್ತ್ತಿದ್ದ ರಣಧೀರ ಕುಮಾರ್ ತನ್ನ ರೂಮಿನಲ್ಲಿ ನೇಣು ಬಿಗಿದುಕೊಂಡು​ ಆತ್ಮಹತ್ಯೆ ಮಾಡಿಕೊಂಡರೆ, ಮೆಕಾನಿಕಲ್ ಇಂಜಿನಿಯರಿಂಗ್ ವಿಭಾಗದ ಎಂ.ಟೆಕ್ ವಿದ್ಯಾರ್ಥಿ ರಾಹುಲ್ ಪ್ರತಾಪ್ ಮೈದಾನದಲ್ಲಿ ಫುಟ್ಬಾಲ್ ಆಡುವಾಗ ಎಚ್ಚರ ತಪ್ಪಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಮೂಲಗಳ ಪ್ರಕಾರ ಆತ್ಮಹತ್ಯೆಗೆ ಶರಣಾದ ರಣಧೀರ್ ಮಾರ್ಚ್ 2 ರಂದು ಮಂಗಳವಾರ ಸಂಜೆವರೆಗೂ ರೂಂ ಬಾಗಿಲು ತೆಗೆದಿರಲಿಲ್ಲ. ಹೀಗಾಗಿ ಉಳಿದ ವಿದ್ಯಾರ್ಥಿಗಳು ರಕ್ಷಣಾ ಸಿಬ್ಬಂದಿಗೆ ವಿಷಯ ತಿಳಿಸಿದ್ರು. ಸಿಬ್ಬಂದಿ ಬಾಗಿಲನ್ನು ತೆಗೆದಾಗ ರಣಧೀರ್ ಶವ ನೇಣು ಬಿಗಿದ ಸ್ಥಿತಿಯಲ್ಲಿ‌ ಪತ್ತೆಯಾಗಿತ್ತು. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಇತ್ತ ರಾಹುಲ್ ಪ್ರತಾಪ್ ಸಹ ಎಂದಿನಂತೆ ಫುಟ್ಬಾಲ್ ಆಡ್ತಿದ್ದವನು ಏಕಾಏಕಿ ಪ್ರಜ್ಞೆ ತಪ್ಪಿದ್ದು, ಸ್ನೇಹಿತರು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ಕರೆದೊಯ್ದಿದ್ದರಾದ್ರೂ ಪ್ರತಾಪ್ ಬದುಕುಳಿದಿಲ್ಲ.

ಘಟನೆಯ ಬಗ್ಗೆ ಐಐಎಸ್​ಸಿ ಉನ್ನತಾಧಿಕಾರಿಗಳು ಬೇಸರ ವ್ಯಕ್ತಪಡಿಸಿದ್ದು, ಮೃತರ ಕುಟುಂಬಸ್ಥರು, ಸ್ನೇಹಿತರಿಗೆ ಸಾಂತ್ವನ ಹೇಳಿದ್ದಾರೆ. ಜೊತೆಗೆ ಐಐಎಸ್​ಸಿ ವಿದ್ಯಾರ್ಥಿಗಳು ಸಮಸ್ಯೆ ಇದ್ದರೆ ಐಐಎಸ್​ಸಿ ಸೌಕರ್ಯ ಬಳಸಿಕೊಂಡು ಸಹಾಯ ಪಡೆಯಬೇಕೆಂದು ಸೂಚಿಸಿದ್ದಾರೆ. ಒಟ್ನಲ್ಲಿ‌ ಇನ್ನೇನು ಪದವಿ ಹೊಸ್ತಿಲಿನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳ ಅಂತ್ಯ ಇಡೀ ಕ್ಯಾಂಪಸ್ ಪಾಲಿಗೆ ನೋವಿನ ಸಂಗತಿಯಾಗಿದೆ.

ಇದನ್ನೂ ಓದಿ: ಎಕ್ಸಾಂ ಗೊಂದಲ? ವಿ.ವಿ.ಪುರಂ ಬಿಐಟಿ ಕಾಲೇಜು ಕಟ್ಟಡದಿಂದ ಜಿಗಿದು ರ‍್ಯಾಂಕ್ ವಿದ್ಯಾರ್ಥಿ ಸಾವು

Published On - 7:13 am, Thu, 4 March 21

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್